ಮ್ಯೂಸಿಯಂ ಆಗಿ ಹಳೆ ಡಿಸಿ ಕಚೇರಿ: ಕಂದಾಯ ಸಚಿವರ ಸೂಚನೆ

9:23 PM, Sunday, January 26th, 2025
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ನಗರದ ಬಂದರ್ ನಲ್ಲಿ ಈಗಿನ ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲೇ ಇರುವ ಬ್ರಿಟೀಷರ ಕಾಲದಲ್ಲಿ ನಿರ್ಮಾಣಗೊಂಡ ಹಳೆ ಕಟ್ಟಡ “ಕಲೆಕ್ಟರೇಟ್ ಆಫೀಸು” ಕಟ್ಟಡವನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಅವರು ಭಾನುವಾರ ನಗರದಲ್ಲಿ ಹಳೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಕಟ್ಟಡ ವೀಕ್ಷಿಸಿ, ಪರಿಶೀಲಿಸಿದರು.

ಬಳಿಕ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಸುಮಾರು 200 ವರ್ಷಗಳ ಹಳೆಯ ಈ ಕಟ್ಟಡ ಈಗಲೂ ಸದೃಢ ವಾಗಿದೆ. ಬಹಳ ಅಪರೂಪದ ಇತಿಹಾಸ ಹೊಂದಿರುವ ಈ ಪಾರಂಪರಿಕ ಕಟ್ಟಡವನ್ನು ಮುಂದಿನ ಜನಾಂಗಕ್ಕೂ ರಕ್ಷಿಸುವ ಉದ್ದೇಶದಿಂದ ಇದನ್ನು ಮ್ಯೂಸಿಯಂ ಆಗಿ ಪರಿವರ್ತಿಸುವುದು ಉತ್ತಮವಾಗಿದೆ ಎಂದರು.

ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಟ್ರಸ್ಟ್ ರಚಿಸಿ, ಪ್ರಮುಖ ವ್ಯಕ್ತಿಗಳನ್ನು ಸೇರಿಸುವಂತೆ ಅವರು ಸೂಚಿಸಿದರು.
ಅಲ್ಲದೇ, ಇಲ್ಲಿ ಸ್ಟುಡಿಯೋ ನಿರ್ಮಾಣ, ತೆರೆದ ವೇದಿಕೆ, ಸಣ್ಣ ಉದ್ಯಾನವನ, ವಾಕಿಂಗ್ ಟ್ರ್ಯಾಕ್ ಮತ್ತಿತರ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಪರಿಶೀಲಿಸಲು ಕಂದಾಯ ಸಚಿವರು ತಿಳಿಸಿದರು.

ಇಡೀ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸರಕಾರದಿಂದಲೇ ನಿರ್ವಹಿಸುವಂತೆ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಐವನ್ ಡಿಸೋಜ, ಮಂಜುನಾಥ್ ಭಂಢಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮತ್ತಿತರರು ಇದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English