ಮಂಗಳೂರು : ಮೂಡುಬಿದಿರೆಯ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಯುವತಿಯೋರ್ವಳು ‘ಗುರುಪುರ ನದಿ’ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಸೋಮವಾರ ನಡೆದಿದೆ. ಮೂಡುಬಿದಿರೆ ಗಾಂಧಿನಗರ ಸಮೀಪದ ಕಡೆಪಲ್ಲ ನಿವಾಸಿ ‘ನವ್ಯ’ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಸ್ಥಳೀಯ ಅಲಂಕಾರ್ ಎಂಬ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು.
ಘಟನೆಯ ದಿನ ನವ್ಯ ತನ್ನ ನಿಗ್ಗೋಡಿ ಮೂಲದ ಸ್ನೇಹಿತೆಯ ಜೊತೆ ನದಿ ತೀರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ನವ್ಯ ದಿಢೀರನೆ ನದಿಗೆ ಜಿಗಿದಿದ್ದಾರೆ. ಇದನ್ನು ಕಂಡು ತಬ್ಬಿಬ್ಬಾದ ಸ್ನೇಹಿತೆ, ಜೀವದ ಹಂಗು ತೊರೆದು ನವ್ಯರನ್ನು ರಕ್ಷಿಸಲು ಕೈ ಹಿಡಿದು ಎಳೆಯಲು ಪ್ರಯತ್ನಿಸಿದ್ದಾರೆ. ಆದರೆ ಆಕೆಯ ಪ್ರಯತ್ನ ವಿಫಲವಾಗಿದ್ದು, ಎಳೆಯುವ ರಭಸಕ್ಕೆ ಸ್ನೇಹಿತೆಯ ಕೈಗೆ ‘ತೀವ್ರ ಗಾಯ’ ಗಳಾಗಿವೆ ಎಂದು ತಿಳಿದುಬಂದಿದೆ.
ಇದೇ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಕೆಪಿಸಿಸಿ ಕಾರ್ಯದರ್ಶಿ ‘ಮಿಥುನ್ ರೈ’ ಅವರು ಕೂಡಲೇ ಸ್ಥಳದಲ್ಲಿ ಹಾಜರಾಗಿ ತುರ್ತು ಸ್ಪಂದನೆ ನೀಡಿದ್ದಾರೆ. ಸ್ಥಳೀಯರ ನೆರವಿನೊಂದಿಗೆ ನದಿಯಿಂದ ಮೃತದೇಹವನ್ನು ಮೇಲಕ್ಕೆತ್ತಲು ಅಗತ್ಯವಿರುವ ವ್ಯವಸ್ಥೆಗಳನ್ನು ಮಾಡಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









