ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇ 17 ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ಅವರು ಇಂದು ತಮ್ಮ ರೇಸ್ ಕೋರ್ಸ್ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಮಿತಿ ರಚನೆ
ಈ ಕುರಿತು ತಕ್ಷಣವೇ ಆದೇಶ ಹೊರಬೀಳಲಿದೆ. ಎನ್.ಪಿ.ಎಸ್ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ಇದೆ, ಅದರ ಆರ್ಥಿಕ ಪರಿಣಾಮ ಇವುಗಳ ಕುರಿತು ಅಧ್ಯಯನ ಕೈಗೊಂಡು ವರದಿ ನೀಡಲು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು ಎಂದರು.
ಸರ್ಕಾರಿ ನೌಕರರು ಮುಷ್ಕರವನ್ನು ಕೈಬಿಡಬೇಕೆಂದು ಮುಖ್ಯಮಂತ್ರಿಗಳು ತಿಳಿಸಿದರು.
Click this button or press Ctrl+G to toggle between Kannada and English