ಮಂಗಳೂರು : ವಿಮಾನ ನಿಲ್ದಾಣ ರಸ್ತೆಯ ಪದವಿನಂಗಡಿ ವೆಂಕಟರಮಣ ಮಹಾಲಸಾ ದೇವಸ್ಥಾನದ ಮುಂಭಾಗದ ರಸ್ತೆಗೆ ‘ಶ್ರೀ ಕಾಶೀ ಮಠ ರಸ್ತೆ’ ಎಂದು ನಾಮಕರಣ ಮಾಡಲಾಗಿದ್ದು, ಅದರ ನಾಮಫಲಕವನ್ನು ಮಂಗಳೂರು ನಗರ ಉತ್ತರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಇಂದು ವಿದ್ಯುಕ್ತವಾಗಿ ಉದ್ಘಾಟಿಸಿದರು. ಮಂಗಳೂರು ದಕ್ಷಿಣದ ಶಾಸಕ ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ವೇದವ್ಯಾಸ ಕಾಮತ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ಗಣ್ಯರ ಉಪಸ್ಥಿತಿ
ಕಾರ್ಯಕ್ರಮದಲ್ಲಿ ವೆಂಕಟರಮಣ ಮತ್ತು ಮಹಾಲಸಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವ್ ಕಾಮತ್, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟರಿ ಹಾಗೂ ಮಾಜಿ ಮೇಯರ್ಗಳಾದ ದಿವಾಕರ್, ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಸೇರಿದಂತೆ ಹಲವು ಜನಪ್ರಿಯ ನಾಯಕರು ಪಾಲ್ಗೊಂಡಿದ್ದರು. ಅಲ್ಲದೆ ಪಾಲಿಕೆ ಸದಸ್ಯರು, ನಾರಾಯಣ ಗುರು ಸೇವಾ ಸಂಘ, ಗಣೇಶೋತ್ಸವ ಸಮಿತಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಸ್ವಾಗತ ಮತ್ತು ವಂದನಾರ್ಪಣೆ
ದೇವಸ್ಥಾನ ಸಮಿತಿಯ ಸದಸ್ಯರಾದ ಪ್ರಶಾಂತ್ ಪೈ ಅವರು ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಪೂಜಾ ಪೈ ಅವರು ವಂದನಾರ್ಪಣೆಗೈದರು. ದೇವಸ್ಥಾನದ ಯುವಕ ವೃಂದ ಹಾಗೂ ಮಹಿಳಾ ವೃಂದದ ಸದಸ್ಯರು ಈ ಕಾರ್ಯಕ್ರಮದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









