ಉತ್ತಮ ಆಡಳಿತ ನೀಡಲು ಅಧಿಕಾರಿಗಳು ಕೈಜೋಡಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

12:16 PM, Wednesday, May 24th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಬೆಂಗಳೂರು : ಜನರ ಆಶೋತ್ತರಗಳನ್ನು ಈಡೇರಿಸಲು, ಉತ್ತಮ ಆಡಳಿತ ನೀಡಲು ಅಧಿಕಾರಿಗಳು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು

ಸಭೆಯ ಮುಖ್ಯಾಂಶಗಳು:

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಪ್ರಭುಗಳು. ಅವರು ನಮ್ಮನ್ನು ಆರಿಸಿ ಕಳುಹಿಸಿದ್ದಾರೆ. ಅವರ ಪ್ರತಿನಿಧಿಗಳಾಗಿ ಇಲ್ಲಿಗೆ ಬಂದಿದ್ದೇವೆ. ಅವರ ಆಶೋತ್ತರಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಕರ್ತವ್ಯ.

ಜನರ ನಿರೀಕ್ಷೆಗೆ ಅನುಗುಣವಾಗಿ ಎಲ್ಲರೂ ಕೆಲಸ ಮಾಡಬೇಕಾಗಿತ್ತದೆ.

ಸುಭದ್ರ ಸರ್ಕಾರ ಇಲ್ಲದಾಗ ಜನರ ಆಶೋತ್ತರಗಳನ್ನು ಈಡೇರಿಸಲು ಆಗುವುದಿಲ್ಲ.

ಜನರ ಆಶೋತ್ತರಗಳನ್ನು ಅನುಷ್ಠಾನ ತರುವ ಮೂಲಕ ಅವರಿಗೆ ಸ್ಪಂದಿಸಸಬೇಕೆನ್ನುವ ಬಯಕೆ ಸರ್ಕಾರದ್ದು.

ಉತ್ತಮ ಸರ್ಕಾರದ ನಿರೀಕ್ಷೆ, ಕಿರಿಕಿರಿ ಮಾಡದ ಸರ್ಕಾರ , ಚುರುಕಾಗಿರುವ ಸರ್ಕಾರ, ಭಿನ್ನ ಸರ್ಕಾರದ ಅಗತ್ಯವಿದೆ ಎಂದು ಜನ ಬಯಸಿದ್ದಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳು ನಿಂತುಹೋಗಿದೆ, ಭ್ರಷ್ಟಾಚಾರವಿದೆ ಎಂಬ ಭಾವನೆ ಜನರಲ್ಲಿತ್ತು. ಈ ಭಾವನೆಯನ್ನು ಹೋಗಲಾಡಿಸಲು ಅಧಿಕಾರಿಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು.

ಗುಣಮಟ್ಟದ ಕಾಮಗಾರಿಗಳಾಗಬೇಕು, ಕಾಲಮಿತಿಯಲ್ಲೇ ಕೆಲಸಗಳಾಗಬೇಕು. ಕಣ್ಣುಮುಚ್ಚಿ ಕೊಂಡು ಸಹಿ ಹಾಕದೇ ಜನರ ಹಣವನ್ನು ಸರಿಯಾದ ರೀತಿಯಲ್ಲಿ ವೆಚ್ಚ ಮಾಡಬೇಕು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು. ಇವುಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮೇಲ್ವಿಚಾರಣೆ ಮಾಡಬೇಕು. ಕ್ಷೇತ್ರಗಳಿಗೆ ಕಾಲಕಾಲಕ್ಕೆ ಭೇಟಿ ನೀಡುವುದಲ್ಲದೇ ಕಚೇರಿಗಳಿಗೆ ಅನಿರೀಕ್ಷಿತ ಭೇಟಿಯನ್ನೂ ನೀಡಬೇಕು.

ಹಿರಿಯ ಅಧಿಕಾರಿಗಳು ನಿಯಮಗಳನ್ನು ಪಾಲಿಸಬೇಕು. ಯೋಜನೆಗಳ ಕ್ಷಿಪ್ರ ಅನುಷ್ಠಾನವಾದರೆ ಜನರಿಗೆ ಪ್ರಯೋಜನವಾಗುತ್ತದೆ.

ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕೆನ್ನುವುದು ಸರ್ಕಾರದ ಉದ್ದೇಶ.

ಜನರ ಕಷ್ಟಗಳಿಗೆ ಸ್ಪಂದಿಸುವವರೇ ಮನುಷ್ಯರು ಎಂದು ಅರ್ಥಮಾಡಿಕೊಂಡು ಜನರ ನಿರೀಕ್ಷೆಗಳಿಗೆ ಸ್ಪಂದಿಸಬೇಕೆಂದು ಬಯಸುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English