ಪುತ್ತೂರು : ಉಡುಪಿ ಜಿಲ್ಲೆಯ ಬ್ರಹ್ಮಾವರ ಸರ್ಕಾರಿ ಡಿಪ್ಲೋಮ ಕೃಷಿ ಕಾಲೇಜನ್ನು ಶೀಘ್ರದಲ್ಲೇ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ ಅವರು ಭರವಸೆ ನೀಡಿದ್ದಾರೆ. ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕೃಷಿಮೇಳದಲ್ಲಿ ಪಾಲ್ಗೊಂಡು ಅವರು ಈ ಘೋಷಣೆ ಮಾಡಿದರು.
ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಬ್ರಹ್ಮಾವರ ಕೃಷಿ ಕಾಲೇಜಿನ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಸಚಿವರಿಗೆ ಈ ಹಿಂದೆ ಮನವಿ ಸಲ್ಲಿಸಿದ್ದರು. ಕೃಷಿಮೇಳದ ಸಂದರ್ಭದಲ್ಲಿ ಈ ಮನವಿಯನ್ನು ಪುನರುಚ್ಚರಿಸಿದಾಗ, ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ತಕ್ಷಣದ ಕ್ರಮದ ಭರವಸೆ ನೀಡಿದರು.
ಈ ಕಾಲೇಜನ್ನು ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಕೃಷಿ ಶಿಕ್ಷಣ ಲಭ್ಯವಾಗುವುದಲ್ಲದೆ, ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನಾ ಚಟುವಟಿಕೆಗಳಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









