ಮಾರ್ನಿಂಗ್ ಹೋಂ ಸ್ಟೇ ದಾಳಿ : ನವೀನ್ ಸೂರಿಂಜೆ ಪ್ರಕರಣ ಹಿಂತೆಗೆತಕ್ಕೆ ನಿರ್ಧಾರ

3:02 PM, Friday, February 1st, 2013
Share
1 Star2 Stars3 Stars4 Stars5 Stars
(No Ratings Yet)
Loading...

Naveen soorinje ಮಂಗಳೂರು : ಪಡೀಲ್ ಬಳಿ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಮೇಲೆ  ನಡೆಸಿದ ದಾಳಿಗೆ ಸಂಬಂಧಿಸಿದಂತೆ ಖಾಸಗಿ ವಾಹಿನಿ ವರದಿಗಾರ ನವೀನ್ ಸೂರಿಂಜೆಯನ್ನು ನವೆಂಬರ್ 7ರಂದು ಬಂಧಿಸಲಾಗಿದ್ದು ಇದೀಗ ನವೀನ್ ಸೂರಿಂಜೆ ವಿರುದ್ಧ ದಾಖಲಿಸಲಾದ ಪ್ರಕರಣ ಹಿಂತೆಗದುಕೊಳ್ಳಲು ಸರಕಾರ ನಿರ್ಧರಿಸಿದೆ. ನಿನ್ನೆ  ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ನವೆಂಬರ್ 7ರಂದು ನವೀನ್ ಸೂರಿಂಜೆ ಬಂಧನಕೊಳಗಾದ ಮೇಲೆ ಜಾಮೀನು ಅರಸಿ, ನ್ಯಾಯಾಲಯದ ಮೊರೆ ಹೋಗಿದ್ದರೂ, ಸ್ಥಳೀಯ ಹಾಗೂ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ಪತ್ರಕರ್ತರು, ಜನಪರ ಹೋರಾಟಗಾರರು ಪ್ರತಿಭಟನೆ ನಡೆಸಿ, ನವೀನ್ ಮೇಲಿನ ಕೇಸು ಹಿಂತೆಗೆದುಕೊಳ್ಳುವಂತೆ ಸರಕಾರದ ಮೇಲೆ ಒತ್ತಡ ಹೇರಿದ್ದರು.

ಗೃಹ ಸಚಿವ ಆರ್.ಅಶೋಕ್ ಬೆಂಗಳೂರಿನಲ್ಲಿ ಪತ್ರಕರ್ತರು ನಡೆಸಿದ್ದ ಉಪವಾಸ ಸ್ಥಳಕ್ಕೆ ಆಗಮಿಸಿ ಪ್ರಕರಣ ಹಿಂತೆಗೆದುಕೊಳ್ಳುವ ಭರವಸೆ ನೀಡಿದ್ದರು. ಅದರಂತೆ ಇದೀಗ ಪ್ರಕರಣ ಹಿಂತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಬಳಿಕ, ಬಿಡುಗಡೆ ಪ್ರಕ್ರಿಯೆ ನಡೆಯಲಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English