ಮಂಗಳೂರು : ಮಂಗಳೂರಿನ ಎಡಪದವು ಸಮೀಪದ ಪೂಪಾಡಿಕಲ್ಲು ಎಂಬಲ್ಲಿ ಅಯ್ಯಪ್ಪ ಮಾಲಾಧಾರಿಗಳ ಪೂಜಾ ಕಾರ್ಯಕ್ರಮದ ವೇಳೆ ಅಮಾನವೀಯ ಘಟನೆಯೊಂದು ಸಂಭವಿಸಿದೆ. ಜಾತ್ರೆಯ ಸಂದರ್ಭದಲ್ಲಿ ಚರುಮುರಿ ಸ್ಟಾಲ್ ಹಾಕಿದ್ದ ಉಮರಬ್ಬ ಎಂಬ ವ್ಯಕ್ತಿ, ತನ್ನ ಅಂಗಡಿಯಲ್ಲಿದ್ದ ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಹರಿತವಾದ ಚೂರಿಯಿಂದ ಇರಿದಿದ್ದಾನೆ. ಈ ದಾಳಿಯಿಂದಾಗಿ ದನದ ಮುಖಕ್ಕೆ ಆಳವಾದ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ತಕ್ಷಣವೇ ಸ್ಥಳೀಯರು ದನಕ್ಕೆ ಪ್ರಥಮ ಚಿಕಿತ್ಸೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಘಟನೆಯ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಬಜರಂಗದಳದ ಮುಖಂಡರು ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಕಮಿಷನರ್, ಪ್ರಾಣಿ ಹಿಂಸೆ ಮಾಡಿದ ವ್ಯಕ್ತಿಯ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇದರೊಂದಿಗೆ, ಸಾರ್ವಜನಿಕ ರಸ್ತೆಯಲ್ಲಿ ದನವನ್ನು ಅಜಾಗರೂಕತೆಯಿಂದ ಬಿಟ್ಟಿದ್ದಕ್ಕಾಗಿ ದನದ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









