ಮಂಗಳೂರು: ಬೋಳಾರ ಹೊಯ್ಗೆ ಬಜಾರ್ ಪ್ರದೇಶದಲ್ಲಿರುವ ಐತಿಹಾಸಿಕ ಅಲ್ಬುಕರ್ಕ್ & ಸನ್ಸ್ ಫ್ಯಾಕ್ಟರಿಯಲ್ಲಿ ಇಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಕಾರ್ಖಾನೆಯ ಆವರಣದಲ್ಲಿ ದಿಢೀರನೆ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದ್ದು, ಆಕಾಶದತ್ತ ದಟ್ಟವಾದ ಹೊಗೆ ಆವರಿಸಿ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಕಾರ್ಖಾನೆಯ ಒಳಭಾಗದಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಘಟನಾ ಸ್ಥಳಕ್ಕೆ ತಕ್ಷಣವೇ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಪರಿಶ್ರಮ ವಹಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅಕ್ಕಪಕ್ಕದ ಕಟ್ಟಡಗಳಿಗೆ ಹರಡದಂತೆ ತಡೆಯುವಲ್ಲಿ ಸಿಬ್ಬಂದಿಗಳ ಸಮಯಪ್ರಜ್ಞೆ ಸಹಕಾರಿಯಾಯಿತು. ಈ ಅಗ್ನಿ ಅವಘಡಕ್ಕೆ ನಿಖರವಾದ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಅಥವಾ ಬೇರೆ ಯಾವುದಾದರೂ ತಾಂತ್ರಿಕ ಕಾರಣದಿಂದ ಈ ಘಟನೆ ಸಂಭವಿಸಿದೆಯೇ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









