ಪಡೀಲ್ : ಬೈಕ್ ಸವಾರರ ಮೇಲೆ ಟೆಂಪೋ ಹರಿದು ಇಬ್ಬರ ಸಾವು

12:56 PM, Saturday, February 9th, 2013
Share
1 Star2 Stars3 Stars4 Stars5 Stars
(No Ratings Yet)
Loading...

mishap at Padilಮಂಗಳೂರು : ರಾಷ್ಟ್ರೀಯ ಹೆದ್ದಾರಿ 75ರಲ್ಲಿ  ಪಡೀಲು ಸಮೀಪ ಶುಕ್ರವಾರ ಮಧ್ಯಾಹ್ನ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರೆ, ಗಂಭೀರವಾಗಿ ಗಾಯಗೊಂಡಿದ್ದ ಸಹಸವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಕಾರ್ಕಳ ಮೂಲದ ಆನಂದ ದೇವಾಡಿಗ ಹಾಗೂ ಸಂತೋಷ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಸವಾರರು ಶುಕ್ರವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಪಡೀಲು ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೈಕ್ ಸ್ಕಿಡ್ ಆದ ಪರಿಣಾಮ ಬೈಕ್ ಸವಾರರು ಹೆದ್ದಾರಿಗೆ ಉರುಳಿ ಬಿದ್ದಿದ್ದರು. ಈ ಸಂದರ್ಭ ಹಿಂಬದಿಯಿಂದ ಬರುತ್ತಿದ್ದ ಅಕ್ಷಯ ಪಾತ್ರೆ ಯೋಜನೆಯ ಟೆಂಪೋ ರಸ್ತೆಗೆ ಬಿದ್ದ ಬೈಕ್ ಸವಾರರ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಆನಂದ ದೇವಾಡಿಗ ಸ್ಥಳದಲ್ಲೇ ಮೃತಪಟ್ಟರೆ, ಸಂತೋಷ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English