ಮಂಗಳೂರು : ಕರ್ನಾಟಕ ರಾಜ್ಯ ಶಿಕ್ಷಕರ ಹಾಗೂ ಉಪನ್ಯಾಸಕರ ಕ್ರಿಯಾ ಸಮಿತಿ ವತಿಯಿಂದ ಬುಧವಾರ ಬೆಳಗ್ಗೆ 9 ಗಂಟೆಗೆ ದ.ಕ. ಜಿಲ್ಲಾಧಿಕಾರಿ ಕಚೇರಿಯ ಮುಂಬಾಗದಲ್ಲಿ ಶಿಕ್ಷಕರ ಹಾಗೂ ಉಪನ್ಯಾಸಕರ ವೇತನ ತಾರತಮ್ಯ ನಿವಾರಿಸುವಂತೆ ಹಾಗೂ ಗ್ರಾಮೀಣ ಪಟ್ಟಣ ಪ್ರದೇಶಗಳ ಮನೆ ಬಾಡಿಗೆ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ದ.ಕ. ಜಿಲ್ಲಾ ಸಮಿತಿ ಅಧ್ಯಕ್ಷರಾದ ಶಿವಶಂಕರ್ ಭಟ್ ಮಾತನಾಡಿ, ಗುಣಮಟ್ಟದ ಶಿಕ್ಷಣಕ್ಕಾಗಿ ತಮ್ಮನ್ನು ತಾವು ಮುಡಿಪಾಗಿಡುವ ಶಿಕ್ಷಕರಿಗೆ ರಾಜ್ಯದ ಬೇರೆ ಇಲಾಖೆಯ ನೌಕರರಿಗಿಂತ ಕಡಿಮೆ ವೇತನವನ್ನು ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಮಾದರಿಯಲ್ಲಿ ಮನೆ ಬಾಡಿಗೆ ಭತ್ಯೆ ನಗರ ಭತ್ಯೆ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು ಈ ಪ್ರಕಾರ ರಾಜ್ಯ ಸರ್ಕಾರ ಮನೆಬಾಡಿಗೆ ಭತ್ಯೆ ಮತ್ತು ನಗರ ಭತ್ಯೆ ಗಳನ್ನೂ 2001ರ ಆಯವ್ಯಯ ಮಂಡನೆಯಲ್ಲಿ ಬೆಂಗಳೂರು ನಗರ ಮನೆ ಬಾಡಿದೆ ಭತ್ಯೆಯನ್ನು ಶೇಕಡಾ 25 ರಿಂದ 30 ಕ್ಕೆ ಹೆಚ್ಚಿಸಿತು ಆದರೆ ಗ್ರಾಮೀಣ ಭಾಗದಲ್ಲಿ ಇದನ್ನು ಅನುಷ್ಠಾನಕ್ಕೆ ತಂದಿಲ್ಲ ಇದರಿಂದ ಗ್ರಾಮೀಣ ಭಾಗವನ್ನು ಕಡೆಗಸಿದಂತಾಗಿದೆ ಎಂದರು.
ಸರ್ಕಾರವು ಈ ಕೂಡಲೇ ಶಿಕ್ಷಕರ ವೇತನ ತಾತಮ್ಯವನ್ನು ಸರಿಪಡಿಸಬೇಕು ಮತ್ತು ಗ್ರಾಮೀಣ ಪ್ರದೇಶದ ಶಿಕ್ಷಕರ ಮನೆ ಬಾಡಿಗೆ ಭತ್ಯೆಯನ್ನು ಹೆಚ್ಚಿಸಬೇಕು. ಇಲ್ಲದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಅವರು ತಿಳಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಲಾರ, ದ.ಕ.ಜಿಲ್ಲಾಘಟಕದ ಅಧ್ಯಕ್ಷ ರಾಮಕೃಷ್ಣ ಶಿರೂರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರು ಶಿವಪ್ರಸಾದ್ ಹಾಗೂ ಇತರರು ಉಪಸ್ಥಿತರಿದ್ಧರು.
Click this button or press Ctrl+G to toggle between Kannada and English