ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ವಿಮಲಗಿರಿ ಮೂಲದ ಸಾಂಜೋ ಸುನಿಲ್ (31) ಎಂಬ ಯುವಕ ಐರ್ಲೆಂಡ್ನ ಡಬ್ಲಿನ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಕುಟುಂಬಸ್ಥರಲ್ಲಿ ಮತ್ತು ಅವರ ಹುಟ್ಟೂರಿನಲ್ಲಿ ತೀವ್ರ ಆಘಾತ ಮೂಡಿಸಿದೆ. ಸುನಿಲ್ ಅವರ ಮೃತದೇಹವು ಅವರು ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಹತ್ತಾರು ಅನುಮಾನಗಳು ವ್ಯಕ್ತವಾಗಿವೆ.
ಸಾಂಜೋ ಸುನಿಲ್ ಅವರು ಈ ಹಿಂದೆ ಇಸ್ರೇಲ್ನಲ್ಲಿ ಉದ್ಯೋಗದಲ್ಲಿದ್ದರು. ಸುಮಾರು ಒಂದು ವರ್ಷದ ಹಿಂದೆ ಐರ್ಲೆಂಡ್ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಕಡಬದ ಯುವತಿಯನ್ನೇ ವಿವಾಹವಾಗಿದ್ದರು. ಪತ್ನಿಯ ಜೊತೆಗಿರಲು ಬಯಸಿದ್ದ ಇವರು, ಕೆಲವೇ ತಿಂಗಳ ಹಿಂದೆಯಷ್ಟೇ ತಮ್ಮ ಉದ್ಯೋಗವನ್ನು ಐರ್ಲೆಂಡ್ಗೆ ಬದಲಾಯಿಸಿಕೊಂಡು ಅಲ್ಲಿಗೆ ತೆರಳಿದ್ದರು.
ಘಟನೆ ನಡೆದ ಸಮಯದಲ್ಲಿ ಸುನಿಲ್ ಅವರ ಪತ್ನಿ ಕರ್ತವ್ಯದ ನಿಮಿತ್ತ ಆಸ್ಪತ್ರೆಗೆ ಹೋಗಿದ್ದರು ಎನ್ನಲಾಗಿದೆ. ಪತ್ನಿ ಮನೆಯಲ್ಲಿ ಇಲ್ಲದ ವೇಳೆ ಈ ದುರಂತ ಸಂಭವಿಸಿದ್ದು, ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡುಬರುತ್ತಿದೆ. ಆದರೂ, ಸಾವಿನ ನಿಖರ ಕಾರಣವೇನು ಮತ್ತು ಈ ನಿಗೂಢ ಸಾವಿನ ಹಿಂದೆ ಬೇರೆ ಏನಾದರೂ ಕಾರಣಗಳಿವೆಯೇ ಎಂಬ ಬಗ್ಗೆ ಐರಿಶ್ ಪೊಲೀಸರು ಸದ್ಯ ತನಿಖೆ ಕೈಗೊಂಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, Uncategorized, ಟಾಪ್ ಸುದ್ದಿ, ಸುದ್ದಿಗಳು









