ಉಡುಪಿ : ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರ ಶಿಫಾರಸ್ಸಿನ ಮೇರೆಗೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ನಾಝೀಯಾ ಖಾನಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಈ ಕುರಿತು ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ಕೆ. ಪುಟ್ಟಸ್ವಾಮಿ ಗೌಡ ಅವರು ಅಧಿಕೃತ ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಮಲ್ಲರ್ ನಿವಾಸಿಯಾದ ನಾಝೀಯಾ ಖಾನಂ ಅವರಿಗೆ ಪಕ್ಷದ ಸಂಘಟನೆ ಮತ್ತು ಕಾರ್ಮಿಕರ ಏಳಿಗೆಗಾಗಿ ಶ್ರಮಿಸುವ ಮಹತ್ತರ ಜವಾಬ್ದಾರಿಯನ್ನು ನೀಡಲಾಗಿದೆ. ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಾಯಕರ ಸಹಕಾರದೊಂದಿಗೆ ಕಾರ್ಯನಿರ್ವಹಿಸಿ, ಪಕ್ಷವನ್ನು ಬಲಪಡಿಸುವಂತೆ ಅವರಿಗೆ ಸೂಚಿಸಲಾಗಿದೆ.
ಈ ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಅವರ ಸಾಮಾಜಿಕ ಮತ್ತು ರಾಜಕೀಯ ಸೇವೆಯನ್ನು ಗುರುತಿಸಿ ಈ ಸ್ಥಾನಮಾನ ನೀಡಲಾಗಿದೆ. ಪಕ್ಷದ ಹಿರಿಯ ಮುಖಂಡರು ಮತ್ತು ಬೆಂಬಲಿಗರು ಈ ನೇಮಕಾತಿಯನ್ನು ಸ್ವಾಗತಿಸಿದ್ದು, ನಾಝೀಯಾ ಖಾನಂ ಅವರಿಗೆ ಶುಭ ಹಾರೈಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









