ಮಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಎಸ್ಡಿಎಂ ಸಭಾಂಗಣದಲ್ಲಿ ಶನಿವಾರದಂದು ಹಳೆ ವಿದ್ಯಾರ್ಥಿ ಸಂಘದ 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಶ್ರೀ ಬಸವರಾಜ್ ಅವರು ಈ ಅರ್ಥಪೂರ್ಣ ಸಮಾರಂಭವನ್ನು ಉದ್ಘಾಟಿಸಿ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ನೆರವಾಗುವ ನಿಟ್ಟಿನಲ್ಲಿ ವಿದ್ಯಾರ್ಥಿವೇತನದ ಚೆಕ್ಗಳನ್ನು ಕರ್ನಾಟಕ ವಕೀಲರ ಪರಿಷತ್ತಿನ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಹೈಕೋರ್ಟ್ ವಕೀಲರಾದ ಪಿ.ಪಿ. ಹೆಗಡೆಯವರು ವಿತರಿಸಿದರು.
ಕಾರ್ಯಕ್ರಮದ ಮತ್ತೊಂದು ಪ್ರಮುಖ ಆಕರ್ಷಣೆಯಾಗಿ ಹಳೆ ವಿದ್ಯಾರ್ಥಿ ಸಂಘದ ನೂತನ ಲೋಗೋವನ್ನು ಸುಪ್ರೀಂ ಕೋರ್ಟ್ ನ್ಯಾಯವಾದಿಗಳಾದ ಶ್ರೀ ರೋಹಿತ್ ರಾವ್ ಅವರು ಅನಾವರಣಗೊಳಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಅವರು ಸಮಾರಂಭಕ್ಕೆ ಶುಭ ಹಾರೈಸಿದರು. ಗೌರವ ಅತಿಥಿಗಳಾಗಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಎಚ್.ವಿ. ರಾಘವೇಂದ್ರ ಮತ್ತು ಸಂಸ್ಥೆಯ ಮಾಜಿ ನಿರ್ದೇಶಕರಾದ ಡಾ. ದೇವರಾಜ್ ಕೆ. ಅವರು ಉಪಸ್ಥಿತರಿದ್ದು ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.
ಎಸ್ಡಿಎಂ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ. ತಾರನಾಥ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಅವರು ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ಸಂಘದ ಉದ್ದೇಶ ಮತ್ತು ಮುಂದಿನ ಯೋಜನೆಗಳ ಕುರಿತು ಪ್ರಧಾನ ಕಾರ್ಯದರ್ಶಿ ದಿನಕರ್ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಉಮೇಶ್ ಗಟ್ಟಿ, ಜೊತೆ ಕಾರ್ಯದರ್ಶಿ ಶ್ರೀಮತಿ ಜಯಶ್ರೀ ಹಟ್ಟಿಹಳ್ಳಿ, ಸಂಚಾಲಕ ವಿನೋದ್ ಕುಮಾರ್, ಶ್ರೀ ಅಶ್ವಿನ್ ಹಾಗೂ ಸಂಯೋಜಕಿ ಡಾ. ಅನ್ನಪೂರ್ಣ ಶೇಟ್ ಉಪಸ್ಥಿತರಿದ್ದರು. ಶ್ರೀ ಅಶ್ವಿನ್ ಅವರು ವಂದನಾರ್ಪಣೆ ಮಾಡಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









