ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಅಪಾರ್ಟ್ಮೆಂಟ್ನ 12ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೆಎಂಸಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಾರ್ಥಕ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಸಾರ್ಥಕ್ ಅತ್ತಾವರದ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ ವಾಸವಿದ್ದ ತನ್ನ ಗೆಳೆಯನನ್ನು ಭೇಟಿ ಮಾಡಲು ಬಂದಿದ್ದನು. ಅಪಾರ್ಟ್ಮೆಂಟ್ ಪ್ರವೇಶಿಸುವ ಮುನ್ನ ಸೆಕ್ಯೂರಿಟಿ ಬಳಿ ಇರುವ ರಿಜಿಸ್ಟರ್ನಲ್ಲಿ ಸಹಿ ಮಾಡಿ ಒಳಗೆ ಹೋಗಿದ್ದನು. ಬಳಿಕ 12ನೇ ಮಹಡಿಗೆ ತೆರಳಿದ ವಿದ್ಯಾರ್ಥಿ, ಅಲ್ಲಿ ತನ್ನ ಮೊಬೈಲ್ ಫೋನನ್ನು ಬದಿಗೆ ಇಟ್ಟು ಕೆಳಕ್ಕೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ.
ವಿದ್ಯಾರ್ಥಿಯ ಈ ತೀವ್ರ ಸ್ವರೂಪದ ನಿರ್ಧಾರಕ್ಕೆ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪಾಂಡೇಶ್ವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆತ್ಮಹತ್ಯೆಯ ಹಿಂದಿನ ಉದ್ದೇಶದ ಕುರಿತು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









