ವಿಟ್ಲ : ಪಡ್ನೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ಹಾಡಹಗಲೇ ಅಮಾನವೀಯ ಕಳ್ಳತನವೊಂದು ನಡೆದಿದೆ. ಮನೆಯ ಮುಂಭಾಗದ ಪರಿಸರದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಬಲವಂತವಾಗಿ ಕಸಿದು ಪರಾರಿಯಾಗಿದ್ದಾನೆ. ಕಳ್ಳನು ಅತಿ ವೇಗವಾಗಿ ಬೈಕಿನಲ್ಲಿ ಬಂದು, ಕ್ಷಣಾರ್ಧದಲ್ಲಿ ಮಗುವಿನ ಸರವನ್ನು ಎಗರಿಸಿ ಸ್ಥಳದಿಂದ ನಾಪತ್ತೆಯಾಗಿದ್ದಾನೆ. ಈ ಆತಂಕಕಾರಿ ಘಟನೆಯ ದೃಶ್ಯವು ಸಮೀಪದ ಸೂಪರ್ ಮಾರ್ಕೆಟ್ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಭಾಗದಲ್ಲಿ ಕಳೆದ ಕೆಲವು ಸಮಯದಿಂದ ಕಳ್ಳತನದ ಪ್ರಕರಣಗಳು ಸರಣಿಯೋಪಾದಿಯಲ್ಲಿ ಮರುಕಳಿಸುತ್ತಿರುವುದು ಸಾರ್ವಜನಿಕರಲ್ಲಿ ಭಾರೀ ಭಯ ಮತ್ತು ಆತಂಕವನ್ನು ಮೂಡಿಸಿದೆ. ಈ ಹಿಂದೆ ಇದೇ ಪರಿಸರದಲ್ಲಿ ಮನೆಗಳಿಗೆ ನುಗ್ಗಿ ಚಿನ್ನಾಭರಣ, ಅಡಿಕೆ ಹಾಗೂ ಗ್ಯಾಸ್ ಸಿಲಿಂಡರ್ಗಳನ್ನು ಕಳವು ಮಾಡಲಾಗಿತ್ತು. ಇದೀಗ ಮನೆಯಂಗಳದಲ್ಲಿದ್ದ ಮಗುವಿನ ಮೇಲೆಯೇ ದಾಳಿ ನಡೆಸಿರುವುದು ಪೋಷಕರ ನಿದ್ದೆಗೆಡಿಸಿದೆ. ವಿಟ್ಲ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಳ್ಳನನ್ನು ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









