ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ ಬಂಟ್ವಾಳ ಹಾಗೂ ಗ್ರಾಮ ಪಂಚಾಯತ್ ಅಲ್ಲಿಪಾದೆ ಇವುಗಳ ಆಶ್ರಯದಲ್ಲಿ ನಡೆದ ಕಾನೂನು ಮಾಹಿತಿ ಶಿಬಿರವನ್ನು ತಾಲೂಕು ಸೇವೆಗಳ ಸಮಿತಿಯ ಅಧ್ಯಕ್ಷರು ಹಿರಿಯ ಸಿವಿಲ್ ನ್ಯಾಯಧೀಶೆಯಾದ ಎ.ಕೆ ನವೀನಕುಮಾರಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಕಾನೂನಿನ ದೃಷ್ಠಿಯಲ್ಲಿ ಎಲ್ಲರೂ ಸಮಾನರಾಗಿದ್ದು ಅದಕ್ಕೆ ಮೇಲು -ಕೀಳು, ಗಂಡು ಹೆಣ್ಣು ಎಂಬ ಭೇದವಿಲ್ಲ ಈ ಅರಿವು ಎಲ್ಲರಲ್ಲೂ ಮೂಡಬೇಕು ಎಂಬ ಉದ್ದೇಶದಿಂದಲೇ ಈ ಮಾಹಿತಿ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಪಾಡಿ ಗ್ರಾ.ಪಂ. ಅಧ್ಯಕ್ಷ ಧನಂಜಯ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ಮತ್ತು ಪ್ರಧಾನ ಸಿವಿಲ್ ನ್ಯಾಯಧೀಶರಾದ ಶ್ರೀನಿವಾಸ, ಶ್ರೀರಾಮ ಭಜನ ಮಂದಿರದ ಗೌರಾವಾಧಕ್ಷ ರಾಮಣ್ಣ, ವಕೀಲರ ಸಂಘದ ಉಪಾಧ್ಯಕ್ಷ ವಿಶ್ವನಾಥ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ತಾ.ಪಂ.ಸದಸ್ಯೆ ವಿಲಾಸಿನಿ, ತಹಶೀಲ್ದಾರ್ ಮಲ್ಲೇಸ್ವಾಮಿ, ಗ್ರಾಮಾಂತರ ಪೋಲಿಸ್ ಠಾಣೆಯ ಸಭ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್, ಎ.ಎಸ್.ಐ. ಆನಂದ, ವಕೀಲರಾದ ಸತೀಶ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English