ಅಂಬೇಡ್ಕರ್ ಪ್ರತಿಮೆ ಸ್ಥಳಾಂತರಕ್ಕೆ ಒಪ್ಪಿದ ಸರ್ಕಾರ

1:21 PM, Wednesday, February 27th, 2013
Share
1 Star2 Stars3 Stars4 Stars5 Stars
(No Ratings Yet)
Loading...

Ambedkar statue shiftedಬೆಂಗಳೂರು : ಇಲ್ಲಿನ ವಿಧಾನಸೌಧ ಮುಂಭಾಗದ ಅಂಬೇಡ್ಕರ್ ಪ್ರತಿಮೆಯನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲು ಸರ್ಕಾರ ಒಪ್ಪಿಕೊಂಡಿದ್ದು ಈ ಮೂಲಕ  ವಿವಾದದ ಸ್ವರೂಪ ಪಡೆದುಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಸ್ಥಳಾಂತರ ವಿವಾದಕ್ಕೆ ಹೈಕೋರ್ಟ್ ಸೋಮವಾರ ಮಂಗಳ ಹಾಡಿದೆ.

ಅಮರನಾಥನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹಿಂದಿನ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ, `ಪ್ರತಿಮೆಯನ್ನು 15 ದಿನಗಳಲ್ಲಿ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಬೇಕು’ ಎಂದು ಡಿಸೆಂಬರ್ 12ರಂದು ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಕೆಲವು ದಲಿತ ಸಂಘಟನೆಗಳು ಮಧ್ಯಂತರ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ವಿಭಾಗೀಯ ನ್ಯಾಯಪೀಠ, ಪ್ರತಿಮೆಯ ಸುರಕ್ಷತೆ ಕುರಿತು ತೀವ್ರ ಕಳಕಳಿ ವ್ಯಕ್ತಪಡಿಸಿತ್ತು.  ಮತ್ತು ಇದು ಅಂಬೇಡ್ಕರ್‌ರಂಥ ಮೇರು ನಾಯಕನಿಗೆ ಮಾಡುವ ಅವಮಾನ’ ಎಂದೂ ಹೇಳಿತ್ತು.

ಆದರೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಸ್ಥಳಾಂತರ ವಿಷಯಕ್ಕೆ ಸಂಬಂಧಪಟ್ಟಂತೆ ಸರ್ಕಾರ, ದಲಿತ ಸಂಘಟನೆಗಳು ಹಾಗೂ ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್‌ಸಿಎಲ್) ಹೇಳಿಕೆಗಳನ್ನು ಮಾನ್ಯ ಮಾಡಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕೆ. ಶ್ರೀಧರ ರಾವ್ ಮತ್ತು ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರನ್ನು ಒಳಗೊಂಡ ವಿಭಾಗೀಯ ಪೀಠ, `ಪ್ರತಿಮೆಯನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಿದ 2 ತಿಂಗಳಲ್ಲಿ ಅದನ್ನು ಈಗಿರುವ ಸ್ಥಳದಲ್ಲೇ ಪ್ರತಿಷ್ಠಾಪಿಸಬೇಕು’ ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಅಂಬೇಡ್ಕರ್ ಪ್ರತಿಮೆಯನ್ನು ಈಗ ಕ್ರೇನ್ ಒಂದಕ್ಕೆ ತೂಗುಹಾಕಿದಂತೆ ಇಡಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English