ಕಾಂಗ್ರೆಸ್ ಆಡಳಿತಾವಧಿಯಲ್ಲಿ ಆಗದ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಆಡಳಿತಾವಧಿಯಲ್ಲಿ ಸಾಕಾರಗೊಂಡಿದೆ : ಡಿ.ವಿ.ಎಸ್

12:02 PM, Friday, March 1st, 2013
Share
1 Star2 Stars3 Stars4 Stars5 Stars
(No Ratings Yet)
Loading...

 BJP Election Campaignಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಚುನಾವಣಾ ಹಿನ್ನಲೆಯಲ್ಲಿ ಮಂಗಳೂರು ಪುರಭವನದಲ್ಲಿ ಗುರುವಾರ ನಡೆದ ಬಿಜೆಪಿಯ ಚುನಾವಣಾ ಪ್ರಚಾರ ಅಭಿಯಾನವನ್ನು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಳೆದ ೨೫ ವರ್ಷಗಳಲ್ಲಿ ಆಗದ ಅಭಿವೃದ್ಧಿ ಕಾರ್ಯಗಳು ಕೇವಲ ೫ ವರ್ಷಗಳಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಸಾಕಾರಗೊಂಡಿದೆ, ಕಳೆದ ೫ ವರ್ಷಗಳ ಆಡಳಿತದಲ್ಲಿ ಬಿಜೆಪಿ ರೂಪಾಯಿ ೫೨೦ ಕೋಟಿಯನ್ನು ಬಿಡುಗಡೆ ಮಾಡಿದೆ. ಆದರೆ ಈ ಹಿಂದಿನ ೨೫ ವರ್ಷಗಳ ಆಡಳಿತಾವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಮಂಗಳೂರು ನಗರಕ್ಕೆ ಬಿಡುಗಡೆ ಮಾಡಿದ್ದು ಕೆವಲ ೪೩೦ ಕೋಟಿ ರೂಪಾಯಿಗಳು  ಮಾತ್ರ ಎಂದರು.

 BJP Election Campaignಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ಸಾಧನೆಯನ್ನು ಮನೆಮನೆಗೆ ತಿಳಿಸುವ ಕಾರ್ಯ ಮಾಡಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದ ಅವರು ಈಗಾಗಲೇ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ಬಿಜೆಪಿ ಇನ್ನು ಇಂತಹ ಹತ್ತು ಹಲವಾರು ಯೋಜನೆಗಳನ್ನು ಮತ್ತೆ ಜಾರಿಗೆ ತರಲು ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು ಅದಕ್ಕಾಗಿ ಕಾರ್ಯಕರ್ತರು ಶ್ರಮಿಸಬೇಕು ಎಂದರು.

 BJP Election Campaignನಗರಾಭಿವೃದ್ದಿ ಹಾಗೂ ಬಿಜೆಪಿಗೆ ಹತ್ತಿರದ ಸಂಬಂಧವಿದ್ದು ಅಧಿಕಾರದ ಅವಧಿಯಲ್ಲಿ ಸ್ಥಳೀಯ ನಗರ ಸಂಸ್ಥೆಗಳನ್ನು ಯಾವ ರೀತಿ ನಿಭಾಯಿಸಬೇಕು ಹಾಗೂ ಅಭಿವೃದ್ದಿ ಪಡಿಸಬೇಕು ಎಂಬುದನ್ನು 1968ರ ಉಡುಪಿ ನಗರ ಸಭೆಯ ಅಭಿವೃದ್ದಿಯಿಂದ ಹಾಗೂ ಪುತ್ತೂರು ಪುರಸಭೆಯ ಅಭಿವೃದ್ದಿಯಿಂದ ಇಡೀ ದೇಶಕ್ಕೇ ಜನಸಂಘ ಹಾಗೂ ಬಿಜೆಪಿಯು ತೋರಿಸಿಕೊಟ್ಟಿದೆ ಎಂದರು.

 BJP Election Campaignಸಮಾರಂಭದ ವೇದಿಕೆಯಲ್ಲಿ ರಾಜ್ಯ ವಿಧಾನಸಭೆಯ ಉಪಸಭಾಪತಿ ಯೋಗಿಶ್ ಭಟ್, ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ನಗರ ದಕ್ಷಿಣ ಅಧ್ಯಕ್ಷ ಶ್ರೀಕರ ಪ್ರಭು, ನಗರ ಉತ್ತರ ಅಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಜೀವ ಮೋಟಂದೂರು, ದಕ್ಷಿಣ ಪ್ರಭಾರಿ ಸಂತೋಷ್ ರೈ ಬೋಳಿಯಾರ್, ಮಾಜಿ ಶಾಸಕ ಜಯರಾಮ ಶೆಟ್ಟಿ, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಶಂಕರ್ ಭಟ್, ರಜನಿ ದುಗ್ಗಣ್ಣ ಹಾಗೂ ಇತರರು ಉಪಸ್ಥಿತರಿದ್ದರು

 BJP Election Campaign

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English