ಮಂಗಳೂರು : ಸಮೀಪದ ಹರೇಕಳ-ಅಡ್ಯಾರ್ ಸೇತುವೆ ಸಹಿತ ಕಿಂಡಿ ಅಣೆಕಟ್ಟಿನಲ್ಲಿ ತುರ್ತು ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೇ 5 ಮತ್ತು ಮೇ 6ರಂದು ಎರಡು ದಿನಗಳ ಕಾಲ ಈ ಮಾರ್ಗದಲ್ಲಿ ಎಲ್ಲ ಮಾದರಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆಯ ಪ್ರಕಟನೆ ತಿಳಿಸಿದೆ. ಮಳೆಗಾಲದಲ್ಲಿ ಸೇತುವೆಯ ಮೇಲೆ ನೀರು ನಿಂತು ಪಾದಚಾರಿಗಳಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ.
ಸೇತುವೆಯ ಕಾಂಕ್ರೀಟ್ ಸ್ಲಾಬ್ನ ಮೇಲ್ಬಾಗದಲ್ಲಿ ‘ಆಪ್ಪಾಲ್ಟ್ ವೆರಿಂಗ್ ಕೋಟ್’ (ಡಾಂಬರೀಕರಣದ ರಕ್ಷಣಾ ಪದರ) ಅಳವಡಿಸುವ ಕಾರ್ಯ ನಡೆಯಬೇಕಿದೆ. ಈ ತಾಂತ್ರಿಕ ಕೆಲಸವು ಗುಣಮಟ್ಟದಿಂದ ಕೂಡಿರಲು ಮತ್ತು ಕಾರ್ಮಿಕರ ಸುರಕ್ಷತೆಯ ದೃಷ್ಟಿಯಿಂದ ಸಂಚಾರ ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ. ಸಾರ್ವಜನಿಕರು ಮತ್ತು ವಾಹನ ಸವಾರರು ಇಲಾಖೆಯೊಂದಿಗೆ ಸಹಕರಿಸಿ, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಅಧಿಕಾರಿಗಳು ಕೋರಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









