ಬಂಟ್ವಾಳ : ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಸಭಾಂಗಣದಲ್ಲಿ ಗುರುವಾರ ಸಂಜೆ ಭಾರತೀಯ ಜನತಾಪಾರ್ಟಿಯ ಚುನಾವಣಾ ಪ್ರಚಾರದ ಅಭಿಯಾನವನ್ನು ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿಯವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗಿದ್ದು ಕಳೆದ ೫ ವರ್ಷಗಳಲ್ಲಿ ಬಿಜೆಪಿ ಈ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಂಡಿದೆ ಅದರಲ್ಲೂ ಮುಖ್ಯವಾಗಿ ಈ ಅವಧಿಯಲ್ಲಿ ಅಭಿವೃದ್ಧಿಯಲ್ಲಿ ಬಂಟ್ವಾಳ ಪುರಸಭೆಯ ಪರಿಸರದ ಚಿತ್ರಣವೇ ಬದಲಾಗಿದೆ ಎಂದು ಅವರು ಹೇಳಿದರು.
ಬಂಟ್ವಾಳ ಪುರಸಭೆಯ 23 ವಾರ್ಡ್ ಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಾಧ್ಯವಾಗದಿರುವ ಕಾಂಗ್ರೆಸ್ ಗೆ ಬಿಜೆಪಿ ಬಗ್ಗೆ ಮಾತನಾಡುವ ಯಾವುದೇ ಹಕ್ಕಿಲ್ಲ ಎಂದ ಅವರು ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಗ್ಯಾಸ್, ತೈಲಗಳ ಬೆಲೆ ಏರಿಕೆಯಿಂದ ಮಧ್ಯಮ ವರ್ಗದ ಜನತೆಯ ಬದುಕು ದುಸ್ತರವಾಗಿದೆ ಎಂದರು.
ಇದೇ ವೇಳೆ 23 ವಾರ್ಡಿನ ಅಭ್ಯರ್ಥಿಗಳನ್ನು ಸಭೆಗೆ ಪರಿಚಯಿಸಲಾಯಿತು.
ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ, ಬಿಜೆಪಿ ಚುನಾವಣಾ ಜಿಲ್ಲಾ ಪ್ರಭಾರಿ ಪ್ರತಾಪ್ಸಿಂಹ ನಾಯಕ್, ಮಾಜಿ ಶಾಸಕ ರುಕ್ಮಯ ಪೂಜಾರಿ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಸುಲೋಚನಾ ಭಟ್, ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ತುಂಗಪ್ಪ ಬಂಗೇರಾ, ಪುರಸಭಾಧ್ಯಕ್ಷ ದಿನೇಶ್ ಭಂಡಾರಿ, ಮಾಜಿ ಅಧ್ಯಕ್ಷ ಸದಾನಂದ ಮಲ್ಲಿ, ನಗರ ಯೋಜನಾಪ್ರಾಧಿಕಾರದ ಅಧಕ್ಷ ಗೋವಿಂದ ಪ್ರಭು, ದ.ಕ. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ದೇವದಾಸ್ ಶೆಟ್ಟಿ, ಪುರಸಭಾ ಶಕ್ತಿ ಕೇಂದ್ರದ ಅಧ್ಯಕ್ಷ ಆನಂದ ಕುಲಾಲ್, ಕ್ಷೇತ್ರ ಸಮಿತಿಯ ಪ್ರದಾನ ಕಾರ್ಯದರ್ಶಿ ರತ್ನಕುಮಾರ್ ಚೌಟ ವೇದಿಕೆಯಲ್ಲಿದ್ದರು.
Click this button or press Ctrl+G to toggle between Kannada and English