ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

11:09 AM, Saturday, March 2nd, 2013
Share
1 Star2 Stars3 Stars4 Stars5 Stars
(No Ratings Yet)
Loading...

dco election ಮಂಗಳೂರು : ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಚುನಾವಣಾ ಆಯೋಗ ರೂಪಿಸಿದ್ದು, ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ದ.ಕ. ಜಿಲ್ಲಾಧಿಕಾರಿ ಎನ್.ಪ್ರಕಾಶ್ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕೋರ್ಟ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಚಾರಕ್ಕಾಗಿ ಉಪಯೋಗಿಸುವ ವಾಹನಗಳ ನೋಂದಣಿ ಸಂಖ್ಯೆಯನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗೆ ನೀಡಿ ಅವರಿಂದ ಅನುಮತಿ ಪತ್ರ ಬರೆದು ಅದನ್ನು ಉಪಯೋಗಿಸುತ್ತಿರುವ ವಾಹನದಲ್ಲಿ ಅಂಟಿಸಿ ಚುನಾವಣಾ ಪ್ರಚಾರ ಮಾಡಲು ಅವಕಾಶವಿದೆ, ಚುನಾವಣಾ ಪ್ರಚಾರಕ್ಕಾಗಿ ಅನುಮತಿ ಪಡೆದ ಧ್ವನಿ ವರ್ಧಕಗಳನ್ನು ಬೆಳಗ್ಗೆ 7ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಉಪಯೋಗಿಸಬಹುದಾಗಿದೆ ಹಾಗು ಚುನಾವಣಾ ಪ್ರಚಾರ ಮಾರ್ಚ್ 6ರ ಬೆಳಗ್ಗೆ 7 ಗಂಟೆಗೆ ನಿಲ್ಲಿಸಬೇಕು. ಮತದಾನದಂದು ಮತಗಟ್ಟೆಯಿಂದ 100 ಮೀಟರ್ ಅಂತರದ ಪ್ರದೇಶದೊಳಗೆ ಪ್ರಚಾರ ಮಾಡುವುದನ್ನು ನಿಷೇಧಿಸಲಾಗಿದೆ ಎಂದರು.

dco election ಮತಗಟ್ಟೆಯಂದ 100 ಮೀಟರ್ ದೂರದಲ್ಲಿ ಅಭ್ಯರ್ಥಿಗಳ ಸರಳ ಶಿಬಿರ ವನ್ನು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆದು ನಿರ್ಮಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಶಿಬಿರದಲ್ಲಿ ಯಾವುದೇ ಬಿತ್ತಿ ಪತ್ರ, ಬಾವುಟ, ಚಿಹ್ನೆ ಅಥವಾ ಪ್ರಚಾರ ಸಾಧನಗಳು ಇರಕೂಡದು. ಶಿಬಿರದಲ್ಲಿ ಮತದಾರರಿಗೆ ತಿಂಡಿ ತಿನಿಸು ಹಂಚಲು ಹಾಗೂ ಗುಂಪುಗೂಡಲು ಅವಕಾಶ ಇರುವುದಿಲ್ಲ. ಚುನಾವಣೆ ಯಂದು ಓರ್ವ ಅಭ್ಯರ್ಥಿ ಗರಿಷ್ಠ 5 ವಾಹನ ಗಳನ್ನು ಚುನಾವಣಾಧಿಕಾರಿಯಿಂದ ಅನುಮತಿ ಪಡೆದು ಅಭ್ಯರ್ಥಿ ಅಥವಾ ಇತರ ಏಜೆಂಟರು ಉಪಯೋಗಿಸಬಹುದಾಗಿದೆ. ಆದರೆ ಮತದಾರರನ್ನು ಮತಗಟ್ಟೆಗೆ ವಾಹನದಲ್ಲಿ ಕರೆತರುವುದನ್ನು ನಿಷೇಧಿಸಲಾಗಿದೆ.

ಇಂತಹ ಪ್ರಕರಣ ಕಂಡು ಬಂದಲ್ಲಿ ವಾಹನ ವನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧ ಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಚುನಾವಣೆ ಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ವಾರ್ಡು ಗಳಿಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ತಲಾ 3 ಲಕ್ಷ ರೂ.ಗಳನ್ನು ವೆಚ್ಚ ಮಾಡಬಹುದಾಗಿದೆ. ಪುರಸಭೆ ಮತ್ತು ಪಟ್ಟಣ ಪಂಚಾಯತ್ ಚುನಾವಣಾ ವಾರ್ಡುಗಳಿಗೆ ಕ್ರಮವಾಗಿ 1.50 ಲಕ್ಷ ರೂ. ಹಾಗೂ 1 ಲಕ್ಷ ರೂ. ವೆಚ್ಚ ಮಾಡಬಹುದಾಗಿದೆ.

ಚುನಾವಣಾ ವೀಕ್ಷಕರು, ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾ ಅಧಿಕಾರಿ ಮತ್ತು ಚುನಾವಣಾ ಖರ್ಚು ವೆಚ್ಚಗಳನ್ನು ಪರಿಶೀಲಿಸಲು ನೇಮಕ ಮಾಡಲಾದ ಅಧಿಕಾರಿಯ ಪರಿಶೀಲನೆಗೆ ಹಾಜರುಪಡಿಸಲು ತಿಳಿಸಿ ದಾಗ ನೀಡತಕ್ಕದ್ದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ದಯಾನಂದ, ಮನಪಾ ಆಯುಕ್ತ ಡಾ. ಹರೀಶ್ ಕುಮಾರ್ ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English