ಮಂಗಳೂರು : ಬಿಜೆಪಿ ಯು ಅಧಿಕಾರಕ್ಕೆ ಬಂದ ನಂತರ ಚುನಾವಣೆಯ ಸಂದರ್ಭದಲ್ಲಿ ಕೊಟ್ಟ ಯಾವುದೇ ಆಶ್ವಾಸನೆಗಳನ್ನು ಈಡೇರಿಸಿಲ್ಲ. ಆದ್ದರಿಂದ ಈ ಚುನಾವಣೆಯಲ್ಲಿ ಜನರು ಬಿಜೆಪಿ ಯನ್ನು ಸೋಲಿಸುವುದು ಖಂತಡಿತ ಎಂದು ಜಿಲ್ಲಾ ಮಹಿಳಾ ಕಾಂಗ್ರಸ್ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು.
ಅವರು ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅನಾಚಾರ, ಅತ್ಯಾಚಾರ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಹಾಲಿನ ದರ, ವಿದ್ಯುತ್ ದರದಲ್ಲಿ ಗಣನೀಯವಾಗಿ ಹೆಚ್ಚಳವನ್ನು ಮಾಡಿ ಮಹಿಳೆಯರನ್ನು ಸಂಕಷ್ಟದ ಸ್ಥಿತಿಗೆ ದೂಡಿದ್ದಾರೆ. ದೇವರ ಹಾಗೂ ಧರ್ಮದ ಹೆಸರನ್ನು ಉಪಯೋಗಿಸಿಕೊಂಡು ಅಧಿಕಾರಕ್ಕೆ ಬಂದ ಬಿಜೆಪಿ ಜನರು ಕೊಟ್ಟ ಅವಕಾಶವನ್ನು ದುರುಪಯೋಗಿಸಿಕೊಂಡು ಕೇವಲ ಭ್ರಷ್ಟಾಚಾರದಲ್ಲಿ ಮಾತ್ರ ತನ್ನ ಸಾಧನೆಯನ್ನು ಮಾಡಿದೆ. ಆದ್ದರಿಂದ ಈ ಚುನಾವಣೆಯಲ್ಲಿ ಜನರು ಬಿಜೆಪಿ ವಿರುದ್ದ ತಿರುಗಿ ಬೀಳುವುದು ಖಂಡಿತ ಎಂದು ಅಭಿಪ್ರಾಯಪಟ್ಟರು.
ಮುಂದುವರಿದು ಕಾಂಗ್ರೆಸ್ ಪಕ್ಷವು ಮಹಿಳೆಯರನ್ನು ರಕ್ಷಿಸುವಂತಹ ಪಕ್ಷವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯಾವುದೇ ರೀತಿಯ ಅನ್ಯಾಯ, ಅನಾಚಾರಗಳನ್ನು ನಡೆಯಲು ಬಿಡುವುದಿಲ್ಲ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕೋಶಾಧಿಕಾರಿ ಶೋಭ ಕೇಶವ, ಬಂಟ್ವಾಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೇಮಾವತಿ, ಕೃಪಾ ಅಮರ್ ಆಳ್ವ, ಲಕ್ಷ್ಮಿ ನಾಯರ್, ತುಂಬೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಧರ್ಮಾವತಿ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English