ಬೆಂಗಳೂರು : ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಅಶ್ವತ್ಥ ಅವರು ಸ್ಪೀಕರ್ ಕೆ.ಜಿ.ಬೋಪಯ್ಯ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಚನ್ನಪಟ್ಟಣ ಶಾಸಕ ಎಂ.ಸಿ.ಅಶ್ವತ್ಥ ಗುರುವಾರ ಈ ನಿರ್ಧಾರ ಕೈಗೊಂಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ತಮಿಳುನಾಡು ಪ್ರವಾಸದಲ್ಲಿದ್ದೆ. ಹಾಗಾಗಿ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಪಕ್ಷದ ನಾಯಕರಿಂದ ತನಗೆ ಯಾವುದೇ ತೊಂದರೆ ಇಲ್ಲ. ಇದೀಗ ನನ್ನ ವೈಯಕ್ತಿಕ ಕಾರಣದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ.
ಅ.11ರಂದು ನಡೆದ ವಿಶ್ವಾಸಮತ ಯಾಚನೆಗಾಗಲಿ, ಅ.14ರಂದು ನಡೆದು ವಿಶ್ವಾಸಮತ ಯಾಚನೆಗಾಗಲಿ ಹಾಜರಾಗದೆ ನಾಪತ್ತೆಯಾಗಿದ್ದರು. ವಾರದ ಹಿಂದೆ ಜೆಡಿಎಸ್ ಪಕ್ಷದ ಜೊತೆಗೆ ಇರುವುದಾಗಿ ಹೇಳಿಕೆ ನೀಡಿದ್ದರು.
ಅಶ್ವತ್ಥ ಅವರನ್ನು ಸುಮಾರು 30 ಕೋಟಿ ರೂಪಾಯಿಗೆ ರೆಡ್ಡಿ ಖರೀದಿಸಿರುವುದಾಗಿಯೂ ಜೆಡಿಎಸ್ ಮುಖಂಡರು ಗಂಭೀರವಾಗಿ ಆರೋಪಿಸಿದ್ದರು.
Click this button or press Ctrl+G to toggle between Kannada and English