ಸುಳ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಅರಣ್ಯ ಸಚಿವ ಐಶ್ವರ್ ಖಂಡ್ರೆ ಭೇಟಿ ನೀಡಿದರು.
ದೇವಾಲಯದಲ್ಲಿ ದೇವರ ದರ್ಶನ ಪಡೆದು ವಿಶೇಷ ಸೇವೆಗಳನ್ನು ಸಲ್ಲಿಸಿದರು .
ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಸಮಿತಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಧರ್ಮಸ್ಥಳ : ಕರ್ನಾಟಕ ಸರ್ಕಾರದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಶ್ರೀ ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವರು ಹಾಗೂ ಅವರ ಕುಟುಂಬದ ಸದಸ್ಯರು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









