ಮಂಗಳೂರು : ಮಂಗಳೂರಿನ ಪ್ರಸಿದ್ಧ ಪ್ರವಾಸಿ ಹಾಗೂ ಸಾಂಸ್ಕೃತಿಕ ತಾಣವಾದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಹಿರಿಯ ಅಧಿಕಾರಿ ಕೆ. ಶ್ರೀಕಾಂತ್ ರಾವ್ ಅವರು ಶನಿವಾರ ಅಧಿಕೃತವಾಗಿ ಅಧಿಕಾರ ಸೂತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಪಿಲಿಕುಳದ ಆಡಳಿತ ಕಚೇರಿಯಲ್ಲಿ ನಡೆದ ಸರಳ ಹಸ್ತಾಂತರ ಪ್ರಕ್ರಿಯೆಯಲ್ಲಿ ಅವರು ಹೊಸ ಜವಾಬ್ದಾರಿಯನ್ನು ವಹಿಸಿಕೊಂಡರು. ಮುಂಬರುವ ದಿನಗಳಲ್ಲಿ ಪ್ರಾಧಿಕಾರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಇವರ ನೇತೃತ್ವದಲ್ಲಿ ಹೊಸ ವೇಗ ಸಿಗುವ ನಿರೀಕ್ಷೆಯಿದೆ.
ಈ ಮಹತ್ವದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ನಿರ್ಗಮಿತ ಆಯುಕ್ತರಾದ ಡಾ. ಅರುಣ್ ಕುಮಾರ್ ಶೆಟ್ಟಿ ಎನ್. ಅವರು ನೂತನ ಆಯುಕ್ತರಿಗೆ ಆತ್ಮೀಯವಾಗಿ ಜವಾಬ್ದಾರಿಯನ್ನು ಹಸ್ತಾಂತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಉಪಸಮಿತಿಯ ಅಧ್ಯಕ್ಷರಾದ ಡಾ. ಶ್ರೀನಿಕೇತನ್, ಆಡಳಿತಾಧಿಕಾರಿ ಡಾ. ಅಶೋಕ್ ಕೆ.ಆರ್ ಸೇರಿದಂತೆ ಪ್ರಾಧಿಕಾರದ ವಿವಿಧ ವಿಭಾಗಗಳ ಹಿರಿಯ ಅಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ನೂತನ ಆಯುಕ್ತರನ್ನು ಬರಮಾಡಿಕೊಂಡರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









