ಮಂಗಳೂರು : ಮಳೆಗಾಲದ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ಜಲಸಿರಿ ಯೋಜನೆ ಹಾಗೂ ಒಳಚರಂಡಿ ಕಾಮಗಾರಿಗಳ ನೆಪದಲ್ಲಿ ಇನ್ಮುಂದೆ ಮುಂದಿನ ಎರಡೂವರೆ ತಿಂಗಳವರೆಗೆ ಜಿಲ್ಲೆಯ ಯಾವುದೇ ಭಾಗದಲ್ಲಿ ಹೊಸದಾಗಿ ರಸ್ತೆಗಳನ್ನು ಅಗೆಯಲು ಅಥವಾ ಗುಂಡಿ ತೋಡಲು ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.
ಇದೇ ವೇಳೆ ಮುಂಬರುವ ಭಾರಿ ಮಳೆಯನ್ನು ಎದುರಿಸಲು ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಪಾಯಕಾರಿ ಸ್ಥಳಗಳನ್ನು ಗುರುತಿಸಲಾಗಿದೆ. ಜಿಲ್ಲಾದ್ಯಂತ ಒಟ್ಟು 92 ಪ್ರದೇಶಗಳು ಜಲಾವೃತವಾಗುವ (ಪ್ರವಾಹ ಪೀಡಿತ) ಭೀತಿಯಲ್ಲಿದ್ದು, ಈ ಪೈಕಿ ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯಧಿಕ 32 ಹಾಗೂ ಉಳ್ಳಾಲದಲ್ಲಿ ಅತ್ಯಂತ ಕಡಿಮೆ ಅಂದರೆ 3 ಸೂಕ್ಷ್ಮ ಪ್ರದೇಶಗಳನ್ನು ಪತ್ತೆಹಚ್ಚಲಾಗಿದೆ.
ಮಳೆಯ ಆರ್ಭಟಕ್ಕೆ ಮಣ್ಣು ಕುಸಿಯುವ ಸಾಧ್ಯತೆ ಇರುವ ಜಿಲ್ಲೆಯ ಒಟ್ಟು 88 ಸ್ಥಳಗಳನ್ನೂ ಸಹ ಆಡಳಿತ ಮಂಡಳಿ ಗುರುತಿಸಿದೆ. ಈ ಭೂಕುಸಿತದ ಆತಂಕವಿರುವ ಜಾಗಗಳ ಪೈಕಿ ಬೆಳ್ತಂಗಡಿಯಲ್ಲಿ ಗರಿಷ್ಠ 35 ಸ್ಥಳಗಳು ಹಾಗೂ ಪುತ್ತೂರಿನಲ್ಲಿ ಕನಿಷ್ಠ 3 ಪ್ರದೇಶಗಳನ್ನು ಗುರುತಿಸಲಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









