ಮಂಗಳೂರು : ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ಕಾಂಗ್ರೆಸ್ ಗೆಲುವನ್ನು ಸಾಧಿಸಿದ್ದು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿರುವ ಜನತೆಗೆ ಪ್ರಣಾಳಿಕೆಯಲ್ಲಿ ಪಕ್ಷವು ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಚುನಾವಾಣಾ ಉಸ್ತುವಾರಿ ವಹಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ ತಿಳಿಸಿದರು. ಅವರು ಸೋಮವಾರ ಕಾಂಗ್ರೆಸ್ ನ ಪ್ರಚಾರ ಸಮಿತಿ ಸಭೆಯಲ್ಲಿ ನಡೆದ ಸುದ್ದಿಗೋಷ್ಠಿಯನ್ನು ದ್ದೇಶಿಸಿ ಮಾತನಾಡಿದರು.
ಮುಂದಿನ 5 ವರ್ಷಗಳ ಕಾಲ ಆಸ್ತಿ ತೆರಿಗೆಯನ್ನು ಮತ್ತು ನೀರಿನ ಶುಲ್ಕವನ್ನು ಏರಿಸುವುದಿಲ್ಲ. 10 ಸೆಂಟ್ಸ್‌ಗಿಂತ ಕೆಳಗಿನ ನಿವೇಶನದಲ್ಲಿ ಮನೆ ನಿರ್ಮಿಸುವವರು ಮಂಗಳೂರು ನಗರಾಭಿವೃದ್ಧಿಯ ಅನುಮತಿ ಇಲ್ಲದೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲೇ ಪರವಾನಗಿ ನೀಡುವ ಕುರಿತು ನಿಯಮಾವಳಿ ರೂಪಿಸುವ ಬಗ್ಗೆ ಪ್ರಯತ್ನಿಸಲಾಗುವುದು, ಚುನಾವಣೆಯಲ್ಲಿ ಗೆದ್ದಿರುವ ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಲಾಗುವುದು ಹಾಗು ವಾರ್ಡ್ ನಲ್ಲಿನ ಜನರ ಸಮಸ್ಯೆಗಳನ್ನು ಆಲಿಸಲು ವಾರ್ಡ್ ಸಮಿತಿಗಳನ್ನು ರಚಿಸಲಾಗುವುದು ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ. ರಮಾನಾಥ ರೈ, ಶಾಸಕ ಯು.ಟಿ. ಖಾದರ್, ಪಕ್ಷದ ಪ್ರಮುಖರಾದ ಕೋಡಿಜಾಲ್ ಇಬ್ರಾಹಿಂ, ಹರಿಕೃಷ್ಣ ಬಂಟ್ವಾಳ್, ಐವನ್ ಡಿಸೋಜ, ರೋಹನ್ ಮೊಂತೆರೋ, ಜೆ.ಆರ್.ಲೋಬೋ, ಸುರೇಶ್ ಬಲ್ಲಾಳ್, ಪಿ.ವಿ.ಮೋಹನ್, ಕಳ್ಳಿಗೆ ತಾರನಾಥ ಶೆಟ್ಟಿ, ಮಿಥುನ್ ರೈ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English