ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯು ಇಂದಿನಿಂದ 28ರ ವರೆಗೆ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷ 49 ಪರೀಕ್ಷಾ ಕೇಂದ್ರಗಳಲ್ಲಿ 170 ಕಾಲೇಜುಗಳ 32,267 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ದ್ವಿತೀಯ ಪಿಯು ಪರೀಕ್ಷೆಯು ಸುಸೂತ್ರವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಮಾರ್ಚ್ 28ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ 144 ಸೆಕ್ಷನ್ ಪ್ರಕಾರ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ವಿವಿಧ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಇತರರು ನಾಲ್ಕಕ್ಕಿಂತ ಹೆಚ್ಚಿನ ಜನ ಸೇರುವಂತಿಲ್ಲ ಮತ್ತು ಯಾವುದೇ ರೀತಿಯ ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ. ಮತ್ತು ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ದೂರದಲ್ಲಿ ಕಾರ್ಯಾಚರಿಸುತ್ತಿರುವ ಜೆರಾಕ್ಸ್ ಸೆಂಟರ್ ಗಳನ್ನು ಕೂಡ ಪರೀಕ್ಷೆ ಪ್ರಾರಂಭವಾಗುವ ಮತ್ತು ಕೊನೆಗೊಳ್ಳುವ ಅರ್ಧ ಗಂಟೆ ಮೊದಲು ಮುಚ್ಚುವಂತೆಯೂ ಸೂಚನೆ ನೀಡಲಾಗಿದೆ.
Click this button or press Ctrl+G to toggle between Kannada and English