ಮಂಗಳೂರು : ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ದಸ್ತಗಿರಿಗೆ ಸಿಗದೇ, ತಲೆಮರೆಸಿಕೊಂಡಿದ್ದ ಪ್ರತ್ಯೇಕ ಪ್ರಕರಣಗಳ ಇಬ್ಬರು ಆರೋಪಿಗಳನ್ನು ಬರ್ಕೆ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪತ್ತೆ ಮಾಡಿ, ದಸ್ತಗಿರಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಬಂಟ್ವಾಳ, ನರಿಂಗಾಣ ಗ್ರಾಮದ ತೌಡಗೊಳಿ ಕ್ರಾಸ್ ನಿವಾಸಿ ಅಬ್ದುಲ್ ಖಾದರ್ ತನ್ಸಿಪ್ ಯಾನೆ ತಂಜಿ ಹಾಗೂ ಮಂಗಳೂರು, ಅಡ್ಯಾರ ಕಣ್ಣೂರಿನ ಕುಂಡಾಲ ಹೌಸ್ ನಿವಾಸಿ ಮೊಹಮ್ಮದ್ ರಾಜೀಕ್ ಬಂಧಿತ ಆರೋಪಿಗಳು.
ಅಬ್ದುಲ್ ಖಾದರ್ ತನ್ಸಿಪ್ ಯಾನೆ ತಂಜಿ ಎಂಬಾತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂ. 18/2021 ಕಲಂ 143, 147, 148, 353, 332, 504, r/w 149 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 5 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ಇದುದರಿಂದ ಮಾನ್ಯ ನ್ಯಾಯಾಲಯವು ಆರೋಪಿತನ ವಿರುದ್ಧ ವಾರೆಂಟ್ ನ್ನು ಹೊರಡಿಸಿರುತ್ತದೆ. ಅಲ್ಲದೇ ಆರೋಪಿತನ ವಿರುದ್ಧ ಕೊಣಾಜೆ, ಮಂಜೇಶ್ವರ್, ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುತ್ತವೆ.
ಮೊಹಮ್ಮದ್ ರಾಜೀಕ್ ಎಂಬಾತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂ. 17/2021 ಕಲಂ 143, 147, 148, 353, 332, 506, 307, 149 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 5 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ಇದುದರಿಂದ ಮಾನ್ಯ ನ್ಯಾಯಾಲಯವು ಆರೋಪಿತನ ವಿರುದ್ಧ ವಾರೆಂಟ್ ನ್ನು ಹೊರಡಿಸಿರುತ್ತದೆ. ಅಲ್ಲದೇ ಆರೋಪಿತನ ವಿರುದ್ಧ ಕಂಕನಾಡಿ, ಬೆಳ್ತಂಗಡಿ, ಪುತ್ತೂರು, ಕದ್ರಿ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುತ್ತವೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









