ವಿಶೇಷ ವಿಮಾನದ ಮೂಲಕ ದೆಹಲಿಯಿಂದ ನೇರವಾಗಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಬಂದಿಳಿದಿದ್ದಾರೆ. ಕರಾವಳಿ ನಗರಿಗೆ ಆಗಮಿಸಿದ ಅವರಿಗೆ ಆತ್ಮೀಯ ಸ್ವಾಗತ ದೊರೆತಿದೆ.
ಮಂಗಳೂರಿನಲ್ಲಿ ಸಿ ಎಂ ವಿಜಯ್ ಅವರನ್ನು ಸಚಿವ ಯು ಟಿ ಖಾದರ್ ಅವರು ರಾಜ್ಯದ ಪ್ರತಿನಿಧಿಯಾಗಿ ತಮಿಳುನಾಡು ಸಿ ಎಂ ಅವರನ್ನು ಸ್ವಾಗತಿಸಿದರು.
ವಿಮಾನ ನಿಲ್ದಾಣದಿಂದ ಹೊರಟ ಮುಖ್ಯಮಂತ್ರಿಗಳು ತದನಂತರ ರಸ್ತೆ ಮಾರ್ಗದ ಮೂಲಕ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿನ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆಯುವುದು ಅವರ ಈ ಪ್ರವಾಸದ ಮುಖ್ಯ ಉದ್ದೇಶವಾಗಿದೆ.
ಕೊಲ್ಲೂರು ಕ್ಷೇತ್ರಕ್ಕೆ ತಲುಪಲಿರುವ ಅವರು, ಜಗನ್ಮಾತೆ ಶ್ರೀ ಮೂಕಾಂಬಿಕೆಗೆ ವಿಶೇಷ ಪೂಜೆ ಹಾಗೂ ಆರಾಧನೆಗಳನ್ನು ಸಲ್ಲಿಸಲಿದ್ದಾರೆ. ಸಿಎಂ ಭೇಟಿಯ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತ ಸೂಕ್ತ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









