ಬಂಟ್ವಾಳ-ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ, ಬೈಕ್ ಸವಾರ ಗಂಭೀರ

2:44 PM, Friday, March 15th, 2013
Share
1 Star2 Stars3 Stars4 Stars5 Stars
(No Ratings Yet)
Loading...

Bike Pickup accident at bantwalಬಂಟ್ವಾಳ : ಬಂಟ್ವಾಳ-ಕಡೂರು ರಾಷ್ಟ್ರೀಯ ಹೆದ್ದಾರಿಯ ನಾವೂರ ಗ್ರಾಮದ ಫರ್ಲಾದಲ್ಲಿ  ಪಿಕಪ್ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾರ ನಡೆದಿದೆ.

ಬೈಕ್ ಸವಾರ ಮೂರ್ಜೆ ನಿವಾಸಿ ವೀರಪ್ಪ ಮೂಲ್ಯ(42) ಅವರು ಬಿಸಿ.ರೋಡ್ ನಿಂದ ಮೂರ್ಜೆ ಕಡೆ ಹೋಗುತ್ತಿರುವಾಗ ಹಿಂದಿನಿಂದ ಬಂದ ಪಿಕಪ್ ಡಿಕ್ಕಿ ಹೊಡೆದಿದೆ. ಘಟನೆಯಿಂದ ಬೈಕ್ ಸವಾರ ವೀರಪ್ಪ ಮೂಲ್ಯ ಬೈಕ್ ಸಹಿತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟಿದ್ದರು. ಘಟನೆಯಿಂದ ತೀವ್ರ ಅಸ್ವಸ್ಥ ರಾದ ಅವರನ್ನು ಸ್ಥಳೀಯರು ಖಾಸಗಿ ವಾಹನದಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English