ಮಂಗಳೂರು : ಅಡುಗೆ ಅನಿಲ ದರ ನಿರಂತರ ಏರಿಕೆಯಾಗುತ್ತಿರುವುದು ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ಮತ್ತು ವಿಳಂಬ ನೀತಿಗಳಿಂದಾಗಿ ಸಾರ್ವಜನಿಕರು ಕಂಗಾಲಾಗಿದ್ದಾರೆ. ಇದರಿಂದಾಗಿ ಮಹಿಳೆಯರು, ದೈನಂದಿನ ಕೂಲಿ ಕಾರ್ಮಿಕರು ಸೇರಿದಂತೆ ಸಾಮಾನ್ಯ ಜನರು ಬದುಕು ಸಾಗಿಸಲು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ವಿವಿಧ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ಸಂಘಟನೆಯ ನೇತೃತ್ವದಲ್ಲಿ ಈ ಧರಣಿ ಹಮ್ಮಿಕೊಳ್ಳಲಾಗಿತ್ತು.
ಮಂಗಳೂರು ತಾಲೂಕು ಕಚೇರಿಯ ಮುಂಭಾಗ ಜಮಾಯಿಸಿದ ನೂರಾರು ಮಹಿಳಾ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಧೋರಣೆಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು. ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿದ ಅವರು, ತಮ್ಮ ಬೇಡಿಕೆಗಳ ಪರವಾಗಿ ಮತ್ತು ಬೆಲೆ ಏರಿಕೆಯ ವಿರುದ್ಧ ವಿಭಿನ್ನ ಪ್ಲೇ ಕಾರ್ಡ್ಗಳನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆದರು. ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಆಯಿಷಾ ಯಾಸ್ಮಿನ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಜನಸಾಮಾನ್ಯರ ಹೊರೆ ತಗ್ಗಿಸಲು ಸರ್ಕಾರ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









