ಮಂಗಳೂರು : ಮಾರ್ಚ್ 18, ಸೋಮವಾರ ಮಂಗಳೂರಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆಯನ್ನು ನೆರವೇರಿಸಲು ಇಂದು ಬೆಳಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರವರನ್ನು ಬಿಜೆಪಿ ನಾಯಕರಾದ ಎನ್.ಯೋಗಿಶ್ ಭಟ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ, ಶಾಸಕ ಕೃಷ್ಣ ಜೆ.ಪಾಲೆಮಾರ್, ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಸ್ವಾಗತಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಯಚೂರಿನಲ್ಲಿನ ಜಲವಿದ್ಯುತ್ ಸ್ಥಾವರದಲ್ಲಿನ ಉತ್ಪಾದನಾ ಸಮಸ್ಯೆ ಹಾಗೂ ತಾಂತ್ರಿಕ ಸಮಸ್ಯೆಗಳಿಂದ ವಿದ್ಯುತ್ ಪೂರೈಕೆಯಲ್ಲಿ ಕೊರತೆ ಉಂಟಾಗಿದೆ ಇದನ್ನು ಆದಷ್ಟು ಬೇಗ ನಿವಾರಣೆ ಮಾಡಲು ಪ್ರಯತ್ನಿಸಲಾಗುವುದು, ಮತ್ತು ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.
ನಿಡ್ಡೋಡಿ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ಮಾತನಾಡಿದ ಅವರು, ಈ ಯೋಜನೆಯಿಂದ ಜನಸಾಮಾನ್ಯರಿಗೆ, ಕೃಷಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ವಿಮಾನ ನಿಲ್ದಾಣದಿಂದ ಮಂಗಳೂರು ನಗರಕ್ಕೆ ಆಗಮಿಸುವ ದಾರಿ ಮಧ್ಯೆ ಅವರು ಯೆಯ್ಯಾಡಿ ಬಳಿಯಾ ನೂತನ ಸರ್ ಎಂ.ವಿಶ್ವೇಶ್ವರಯ್ಯ ಚತುಷ್ಪಥ ಕಾಂಕ್ರೀಟು ರಸ್ತೆಯನ್ನು ಉದ್ಘಾಟಿಸಿದರು.
Click this button or press Ctrl+G to toggle between Kannada and English