ಮಂಗಳೂರು : ಮತದಾರರ ಪಟ್ಟಿಯಲ್ಲಿ ನೂತನವಾಗಿ ಹೆಸರು ಸೇರ್ಪಡೆಗೊಳಿಸಲು ಹಾಗು ಪ್ರತಿ ಚುನಾವಣಾ ಸಂದರ್ಭದಲ್ಲೂ ಮತದಾರ ಪಟ್ಟಿಯಲ್ಲಿ ಮತದಾರರ ಹೆಸರು ಬಿಟ್ಟು ಹೋಗಿರುವುದು, ಹಾಗು ಇನ್ನಿತರೇ ಹಲವಾರು ಸಮಸ್ಯೆಗಳು ಮತದಾನದ ವೇಳೆಯಲ್ಲಿ ಕಂಡುಬರುತ್ತಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಈ ರೀತಿಯ ಗೊಂದಲಗಳು ಮರುಕಳಿಸದಂತೆ ಮಾಡಲು ದ.ಕ. ಜಿಲ್ಲಾಡಳಿತವು ಜಿಲ್ಲೆಯ ಪಾಲಿಕೆ ಹಾಗೂ ಎಲ್ಲಾ ಪುರಸಭೆ, ನಗರಸಭೆ, ತಹಶೀಲ್ದಾರ್ ಕಚೇರಿ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಹಾಯವಾಣಿ ಪ್ರಾರಂಭಿಸಲಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಎನ್.ಪ್ರಕಾಶ್ ತಿಳಿಸಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ವೆಬ್ ಸೈಟ್ ನ ಮೂಲಕ ಮತದಾರನು ಮತದಾರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಖಾತ್ರಿ ಪಡಿಸಿಕೊಳ್ಳಬಹುದು, ಈ ವಿಷಯವಾಗಿ ಗ್ರಾಮ ಪಂಚಾಯತ್ ಗಳ ಸಿಬ್ಬಂದಿಗಳೇ ಮತದಾರರಿಗೆ ಸಹಾಯ ಮಾಡಲಿದ್ದಾರೆ ಎಂದು ತಿಳಿಸಿದರು.
ಮತದಾರರು ಮತದಾರ ಪಟ್ಟಿಯಲ್ಲಿ ತಮ್ಮ ಹೆಸರನ್ನು ವೆಬ್‌ಸೈಟ್‌ನಲ್ಲಿ ಪರಿಶೀಲಿಸಲು www.ceokarnataka.kar.nic.in ನಲ್ಲಿ ಪರಿಶಿಲಿಸಬಹುದಾಗಿದೆ ಎಂದು ತಿಳಿಸಿದರು.
Click this button or press Ctrl+G to toggle between Kannada and English