ರಾಜ್ಯ ವಿಧಾನ ಸಭಾ ಚುನಾವಣೆ : ಏಪ್ರಿಲ್ 17 ನಾಮಪತ್ರ ಸಲ್ಲಿಸಲು ಕೊನೆಯ ದಿನ

4:43 PM, Friday, March 22nd, 2013
Share
1 Star2 Stars3 Stars4 Stars5 Stars
(No Ratings Yet)
Loading...

DC office press meetಮಂಗಳೂರು : ಮೇ ೫ ರಂದು ರಾಜ್ಯ ವಿಧಾನ ಸಭಾ ಚುನಾವಣೆಯು ನಡೆಯಲಿದ್ದು ಚುನಾವಣೆಗೆ ಸಂಬಂಧಪಟ್ಟಂತೆ  ದ.ಕ. ಜಿಲ್ಲಾಡಳಿತವು ಹಲವು ಕ್ರಮಗಳನ್ನು ಕೈಗೊಂಡಿರುವುದಾಗಿ ದ.ಕ. ಜಿಲ್ಲಾಧಿಕಾರಿ ಎನ್.ಪ್ರಕಾಶ್ ಹೇಳಿದರು.

ಶುಕ್ರವಾರ ಜಿಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು, ದಿನಾಂಕವನ್ನು ಪ್ರಕಟಿಸಿರುವುದರಿಂದ ಮೇ 11 ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ಈ ಬಾರಿ ಚುನಾವಣೆಯಲ್ಲಿ  7,25,162 ಪುರುಷ ಮತದಾರರು, 7,36,497 ಮಹಿಳಾ ಮತದಾರರು ಸೇರಿ ಒಟ್ಟು 14,67,659 ಮತದಾರರು ಮತ ಚಲಾಯಿಸಲಿದ್ದು ಒಟ್ಟು1,627 ಮತಗಟ್ಟೆಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗಿದೆ ಎಂದರು.

ಚುನಾವಣಾ ಆಯೋಗದ ಆದೇಶದಂತೆ ಏಪ್ರಿಲ್ 10ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಏಪ್ರಿಲ್ 17 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಏಪ್ರಿಲ್ 18 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 20 ಉಮೇದುವಾರಿಕೆಗಳನ್ನು ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ ಎಂದರು.

18 ವರ್ಷ ತುಂಬಿದ ಅಭ್ಯರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆಯು ಹಾಗು ಮತದಾರರ ಪಟ್ಟಿಯಲ್ಲಿ ಹೆಸರು ತಪ್ಪಾಗಿ ಮುದ್ರಿತವಾಗಿದ್ದರೆ  ಅದನ್ನು ಸರಿಪಡಿಸಿಕೊಳ್ಳುವಂತೆ ತಿಳಿಸಲಾಯಿತು. ಮೇ 5ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಚುನಾವಣೆ ನಡೆಯಲಿದ್ದು ಮೇ 8 ರಂದು ಮತ ಎಣಿಕೆ ಹಾಗೂ ಮೇ 11ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿಜಯಪ್ರಕಾಶ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಡಾ.ಹರೀಶ್ ಕುಮಾರ್, ಅಪರ ಜಿಲ್ಲಾಧಿಕಾರಿ ದಯಾನಂದ್ ಹಾಗೂ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English