ಮಂಗಳೂರು : ಜಾತ್ಯಾತೀತ ಜನತಾದಳದ ಕರಾವಳಿ ಭಾಗದ ಪ್ರಮುಖ ಮುಖಂಡರಾದ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ನಾಗರಾಜ ಶೆಟ್ಟಿ ಹಾಗೂ ರಾಜ್ಯ ಕಾರ್ಯದರ್ಶಿ ಎಂ.ಜಿ.ಹೆಗಡೆ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಜಿಲ್ಲ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಸ್ಲಂ ಹಾಗೂ ಜಿಲ್ಲ ಪ್ರಧಾನ ಕಾರ್ಯದರ್ಶಿ ಶಶಿರಾಜ್ ಶೆಟ್ಟಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ಬಿ.ಸದಾಶಿವ ರವರ ಬಗ್ಗೆ ಸಭೆಯೊಂದರಲ್ಲಿ ಅಸಮಧಾನ ವನ್ನು ವ್ಯಕ್ತಪಡಿಸಿದರ ಹಿನ್ನಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರ ಸ್ವಾಮಿಯವರು ಈ ಇಬ್ಬರನ್ನು ಪಕ್ಷದಿಂದ ಉಚ್ಚಾಟಿಸಿದ್ದರು.
ರಾಜ್ಯಾಧ್ಯಕ್ಷರ ಈ ಕ್ರಮವನ್ನು ವಿರೋಧಿಸಿದ ನಾಗರಾಜ ಶೆಟ್ಟಿ ಹಾಗೂ ಎಂ.ಜಿ.ಹೆಗಡೆ ಉಚ್ಚಾಟನೆಯನ್ನು ಹಿಂತೆಗೆದುಕೊಳ್ಳಬೇಕು ಹಾಗೂ ಜಿಲ್ಲಾಧ್ಯಕ್ಷರನ್ನು ಪದಚ್ಯುತಗೊಳಿಸಬೇಕು ಎಂದು ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರ ಸ್ವಾಮಿಯವರಲ್ಲಿ ಮನವಿ ಸಲ್ಲಿಸಿದ್ದರು ಆದರೆ ಈ ಬಗ್ಗೆ ರಾಜ್ಯಾಧ್ಯಕ್ಷ ರು ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಈ ಇಬ್ಬರು ನಾಯಕರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
Click this button or press Ctrl+G to toggle between Kannada and English