Blog Archive

ಅನಂತ್ ಕುಮಾರ್ ಹೆಗಡೆ ರಾಜ್ಯಕ್ಕೇನು ಮಾಡಿದ್ದಾರೆ: ಕುಮಾರಸ್ವಾಮಿ

Friday, January 19th, 2018
Kumaraswamy

ಕಲಬುರಗಿ: ಉತ್ತರಕನ್ನಡ ಜಿಲ್ಲೆಯ ಜನರು ಅನಂತ್ ಕುಮಾರ್ ಅವರನ್ನು ನಾಲ್ಕೈದು ಬಾರಿ ಸಂಸದರನ್ನಾಗಿ ಮಾಡಿದ್ದರು ಆದರೆ ಅವರದೇ ಜಿಲ್ಲೆಯಲ್ಲಿ ಎಷ್ಟರ ಮಟ್ಟಿಗೆ ಅಭಿವೃದ್ಧಿ ಮಾಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಚ ಎಚ್. ಡಿ. ಕುಮಾರಸ್ವಾಮಿ ಪ್ರಶ್ನಿಸಿದರು. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಮಾಡಲ ರಾಜಕಾರಣಿಗಳು ನಾಲಾಯಕ್ ಎಂದು ಟೀಕಿಸಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿಯವರು ರಾಜ್ಯಕ್ಕೆ ಸಚಿವ ಹೆಗಡೆ ಕೊಡುಗೆ ಏನು, ಇದುವರೆಗೆ ರಾಜ್ಯದಲ್ಲಿ ಒಂದೇ ಒಂದು ಕೌಶಲ್ಯಾಭಿವೃದ್ಧಿ […]

ದೀಪಕ್ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣ ಬದಲು ಪೊಲೀಸರಿಗೆ ಮಾಹಿತಿ ನೀಡಿ -ಸಚಿವ ಖಾದರ್

Tuesday, January 9th, 2018
U-T-kader

ಮಂಗಳೂರು: ಕಾಟಿಪಳ್ಳದ ದೀಪಕ್ ರಾವ್ ಹತ್ಯೆಗೆ ಸಂಬಂಧಿಸಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಬರೆಯುವ ಮತ್ತು ಹೇಳಿಕೆ ನೀಡುವ ಬದಲು ವಿಷಯ ಗೊತ್ತಿದ್ದರೆ ಅದನ್ನು ಪೊಲೀಸರಿಗೆ ನೀಡಬಹುದು ಎಂದು ಸಚಿವ ಯು.ಟಿ.ಖಾದರ್ ಹೇಳಿದರು. ಮಂಗಳವಾರ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಹಿತ ಘಟನೆಯ ಬಗ್ಗೆ ವಿವರ ಇರುವವರು ಸಾಮಾಜಿಕ ಜಾಲತಾಣದಲ್ಲಿ ಬರೆಯುವ ಬದಲು ಅಥವಾ ನೇರ ಹೇಳಿಕೆ ನೀಡುವ ಬದಲು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೆ ತನಿಖೆಗೆ ಸಹಕಾರಿಯಾಗಲಿದೆ […]

ದೀಪಕ್ ಕೊಲೆಯಲ್ಲಿ ಬಿಜೆಪಿ ಕಾರ್ಪೊರೇಟರ್ ಕೈವಾಡದ ಆರೋಪದಿಂದ ಕುಮಾರಸ್ವಾಮಿ ಯೂಟರ್ನ್ ಹೊಡೆದರೆ ?

Tuesday, January 9th, 2018
Kumaraswamy

  ಮಂಗಳೂರು: ಕಾಟಿಪಳ್ಳದ ದೀಪಕ್ ರಾವ್ ಕೊಲೆ ಪ್ರಕರಣದ ಕುರಿತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಈಗ ದೊಡ್ಡ ವಿವಾದವಾಗಿ ಬೆಳೆದಿದೆ. ಮೈಸೂರಲ್ಲಿ ಸೋಮವಾರ ಬೆಳಗ್ಗೆ ಮಾತನಾಡಿದ ಕುಮಾರಸ್ವಾಮಿ, ದೀಪಕ್ ಕೊಲೆ ಕೇಸಲ್ಲಿ ಬಿಜೆಪಿ ಕಾರ್ಪೊರೇಟರ್ ಒಬ್ಬರ ಕೈವಾಡವಿದೆ ಎಂದು ಹೇಳಿದ್ದು ವರದಿಯಾಗಿತ್ತು. ಬಳಿಕ ಈ ಬಗ್ಗೆ ಕುಮಾರಸ್ವಾಮಿ ಯೂಟರ್ನ್ ಹೊಡೆದು ತನಗೆ ಬಂದಿರುವ ಮಾಹಿತಿ ತಪ್ಪಿರಬಹುದು ಎಂದು ಹೇಳಿದ್ದಾರೆ ಎಂದು ಸುದ್ದಿಯಾಯಿತು. ಕುಮಾರಸ್ವಾಮಿ ಹೇಳಿಕೆಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ […]

ಜೆಡಿಎಸ್ ಗೆ 113 ಸೀಟುಗಳನ್ನು ಗೆಲ್ಲಿಸುವ ಗುರಿ : ಎಚ್ಡಿಕೆ

Friday, January 5th, 2018
kumarswamy

ಬೆಳಗಾವಿ: ರಾಜ್ಯದ 224 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇನೆ. 113 ಸೀಟುಗಳನ್ನು ಗೆಲ್ಲಿಸುವ ಗುರಿ ಇಟ್ಟು ಪಕ್ಷದ ಸಂಘಟನೆ ಮಾಡುತ್ತಿದ್ದೇನೆ. ಪ್ರಭಾವಿ ಹಾಗು ದೊಡ್ಡ ದೊಡ್ಡ ನಾಯಕರ ಮನೆ ಬಾಗಿಲು ಕಾಯದೇ ಕೆಳಹಂತದ ನಾಯಕರನ್ನು ಗುರುತಿಸಿ ಅವರಿಗೆ ಟಿಕೆಟ್ ಕೊಡುವ ನಿರ್ಧಾರ ಮಾಡಿದ್ದೇನೆ ಸಿಎಂ ಸಿದ್ದರಾಮಯ್ಯ ಗೆ ಮಾಜಿ ಸಿಎಂ ಕುಮಾರಸ್ವಾಮಿ ಬೆಳಗಾವಿಯಲ್ಲಿ ಸಖತ್ ತಿರುಗೇಟು ನೀಡಿದರು. ಸಿಎಂ ಸಿದ್ದರಾಮಯ್ಯ ಪ್ರತಿಯೊಂದು ಕಾರ್ಯಕ್ರಮದಲ್ಲಿ ಅವರಪ್ಪನ ಮೇಲೆ ಆಣೆ ಅವರು ಸರ್ಕಾರ ರಚಿಸಲ್ಲ ಅಂತ ಹೇಳ್ತಾರೆ. ನಮ್ಮಪ್ಪಂದಿರೇನು ಇವರಿಗೆ […]

ಹಿರಿಯ ನಾಗರಿಕರಿಗೆ ಕುಮಾರಸ್ವಾಮಿಯಿಂದ ಉಚಿತ ಸೇವೆಗಳ ಭರವಸೆ

Thursday, January 4th, 2018
kumaraswamy

ಬೆಂಗಳೂರು:’ಹಿರಿಯ ನಾಗರಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ತಪಾಸಣೆಗೆ ಅವಕಾಶ. ಬಸ್, ಮೆಟ್ರೋ ರೈಲಿನಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅಗತ್ಯ ವ್ಯವಸ್ಥೆ ಮಾಡಲಾಗುತ್ತದೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಶ್ರೀ ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್, ಬೆಂಗಳೂರು ನಗರ ಜೆಡಿಎಸ್ ಘಟಕದ ವತಿಯಿಂದ ಬುಧವಾರ ‘ಬೆಂಗಳೂರು ನಗರದ ಹಿರಿಯ ನಾಗರಿಕರೊಂದಿಗೆ ಸಂವಾದ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹಿರಿಯರ ವ್ಯಥೆ ಮತ್ತು ಒಂದಿಷ್ಟು ಸ್ವಾರಸ್ಯಕರ ಕಥೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ […]

ಕರಾವಳಿಯಲ್ಲಿ ರಾಜಕೀಯಕ್ಕಾಗಿ ಸೌಹಾರ್ದ ಕದಡಲಾಗುತ್ತಿದೆ: ಕುಮಾರಸ್ವಾಮಿ

Friday, December 29th, 2017
kumaraswamy

ಮಂಗಳೂರು: ಕರಾವಳಿಯಲ್ಲಿ ರಾಜಕೀಯಕ್ಕಾಗಿ ಸೌಹಾರ್ದ ಕದಡಲಾಗುತ್ತದೆ. ವ್ಯಾಪಕ ಅಭಿವೃದ್ಧಿಗೆ ಇಲ್ಲಿ ಉತ್ತಮ ಅವಕಾಶ ಇದೆ. ಆದರೆ, ಭಯದ ವಾತಾವರಣ ನಿರ್ಮಾಣ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜನವರಿ 9ರಂದು ಮಂಗಳೂರಿನಲ್ಲಿ ಕಡಲ ತಡಿಗೆ ಜೆಡಿಎಸ್‌ನ ಸೌಹಾರ್ದ ನಡಿಗೆ ಎನ್ನುವ ಸಮಾವೇಶ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಹರು ಮೈದಾನದಲ್ಲಿ ಬೃಹತ್ ಐತಿಹಾಸಿಕ ಸಭೆ ನಡೆಯಲಿದೆ. ಜೆ.ಹೆಚ್.ಪಟೇಲ್ ಸಿಎಂ ಆಗಿದ್ದಾಗ ಒಮ್ಮೆ ಸಭೆ ನಡೆದಿತ್ತು ಎಂದು ಹೇಳಿದರು. ರಾಜ್ಯದ ಕಾನೂನು ಸುವ್ಯವಸ್ಥೆ […]

ಜೆಡಿಎಸ್ ಅಧಿಕಾರಕ್ಕೆ ಬಂದರೆ ಎತ್ತಿನಹೊಳೆ ಯೋಜನೆಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು: ಎಚ್.ಡಿ.ಕೆ

Monday, February 13th, 2017
Kumaraswamy

ಮಂಗಳೂರು: ಎತ್ತಿನಹೊಳೆ ಯೋಜನೆಯನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಸದಾನಂದಗೌಡರೇ ಜಾರಿ ಮಾಡಿದ್ದರು. ಆಗ ವಿರೋಧಿಸದ ನಳೀನ್‌ ಕುಮಾರ್‌ ಇಂದು ವಿರೋಧಿಸುತ್ತಿದ್ದಾರೆ. ಅವರಿಗೆ ನೈತಿಕತೆಯಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯ ಬಗ್ಗೆ ಕಲಾಪದಲ್ಲಿ ಈಗಾಗಲೇ ಮಾತನಾಡಿದ್ದೇನೆ. ಯೋಜನೆಗೆ ಸಾಕಾಗುವಷ್ಟು ನೀರಿಲ್ಲ ಎಂದೂ ತಿಳಿಸಿದ್ದೇನೆ. ಆದರೆ ಎತ್ತಿನಹೊಳೆ ಯೋಜನೆಗೆ ಅಡ್ಡಗಾಲು ಹಾಕಿದ್ದೇನೆ ಎಂದು ನನ್ನ ಮೇಲೆಯೇ ಗೂಬೆ ಕೂರಿಸುತ್ತಿದ್ದಾರೆ ಎಂದರು. ದ.ಕ. ಜಿಲ್ಲೆಯಲ್ಲಿ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್‌ಗೆ ನೈತಿಕತೆಯಿಲ್ಲ. ಬಿಜೆಪಿ […]

ಸದನದಲ್ಲಿ ಸಿದ್ದುವಿಗೆ ಕುಮಾರಸ್ವಾಮಿ ವ್ಯಂಗ್ಯ : ಸಿದ್ದು ಉತ್ತರ

Tuesday, July 30th, 2013
Assembly Siddu Kumara

ಬೆಂಗಳೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಮಧ್ಯೆ ಮಂಗಳವಾರ ಸದನದಲ್ಲಿ ಭಾರಿ ಜಟಾಪಟಿ ನಡೆಯಿತು. ಇದರಿಂದ  ಸದನದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಠಿಯಾಗಿತ್ತು. ಸದನದಲ್ಲಿ  ಕುಮಾರಸ್ವಾಮಿ, ಹಿಂದುಳಿದ ವರ್ಗದವರನ್ನು ಉಪ ಮುಖ್ಯಮಂತ್ರಿ ಮಾಡಿದ್ದು ದೇವೇಗೌಡರು. ಆದರೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು ಆಗಲಿಲ್ಲ ಎಂದು ಚೇಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದು, ಮುಖ್ಯಮಂತ್ರಿ ಹುದ್ದೆ ತಪ್ಪಿಸಿದ್ದು, ನೀವೇ ಎಂದರು. ಇದರಿಂದ ಆಕ್ರೋಶಗೊಂಡ ಎಚ್‌ಡಿಕೆ, ಹೌದು ಮುಖ್ಯಮಂತ್ರಿ ಹುದ್ದೆ ತಪ್ಪಿಸಿದ್ದು […]