Blog Archive

ಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿರ್ಮಾಪಕ ಮಂಜು ಕಣಕ್ಕೆ?

Monday, April 23rd, 2018
k-manju

ಬೆಂಗಳೂರು: ಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಿಂದ ಕನ್ನಡ ಸಿನಿಮಾ ನಿರ್ಮಾಪಕ ಕೆ ಮಂಜು ಅವರು ಕಣಕ್ಕಿಳಿಯುವ ಸುದ್ದಿ ಬಂದಿದೆ. ಜೆಡಿಎಸ್ ನಿಂದ ಟಿಕೆಟ್ ಪಡೆದು ಸ್ಪರ್ಧಿಸಲು ಕೆ ಮಂಜು ಸಿದ್ಧರಾಗಿದ್ದಾರೆ. ಈ ಮುಂಚೆ ಕಾಂಗ್ರೆಸ್ ಟಿಕೆಟ್ ಬಯಸಿದ್ದರು. ಅದರೆ, ಈಗ ಜೆಡಿಎಸ್ ವರಿಷ್ಠ ಎಚ್. ಡಿ ದೇವೇಗೌಡರನ್ನು ಭೇಟಿ ಮಾಡಿ, ಬಿ ಫಾರಂ ಪಡೆಯಲಿದ್ದು, ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಮಾಹಿತಿಯಿದೆ. ಬೊಮ್ಮನಹಳ್ಳಿ ಕ್ಷೇತ್ರದಿಂದ ಒಕ್ಕಲಿಗ ಮಹಾಸಂಸ್ಥಾನದ ಚಂದ್ರಶೇಖರಸ್ವಾಮೀಜಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಈಗ […]

ಸ್ಯಾಂಡಲ್ ವುಡ್ ನಟಿ ಪೂಜಾಗಾಂಧಿ ಜೆಡಿಎಸ್ ಸೇರ್ಪಡೆ

Saturday, April 21st, 2018
pooja-gandhi

ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಪೂಜಾಗಾಂಧಿ ಅವರು ಇಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಪೂಜಾಗಾಂಧಿ ಪಿಜಿಆರ್ ಸಿಂಧ್ಯಾ ನೇತೃತ್ವದಲ್ಲಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ನಟಿ ಪೂಜಾಗಾಂಧಿ ಕಳೆದ ಚುನಾವಣೆಯಲ್ಲಿ ರಾಯಚೂರಿನಿಂದ ಬಿಎಸ್ ಆರ್ ಪಕ್ಷದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಇದೀಗ ಮತ್ತೆ ರಾಜಕೀಯಕ್ಕೆ ರೀ ಎಂಟ್ರಿ ಕೊಟ್ಟಿರುವ ಪೂಜಾಗಾಂಧಿ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ. 2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋತಿದ್ದರು.

ಮೂಡಬಿದ್ರೆಯಲ್ಲಿ ಹಳೆ ನಿಷ್ಠಾವಂತ ಅಮರನಾಥ್ ಶೆಟ್ಟಿಗೆ ಜೆಡಿಎಸ್ ಟಿಕೆಟ್

Saturday, April 21st, 2018
amaranath

ಮಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮೂಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಜೆಡಿಎಸ್ ತನ್ನ ಹಳೆ ನಿಷ್ಠಾವಂತ ಮುಖಂಡ ಅಮರನಾಥ್ ಶೆಟ್ಟಿ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದೆ. ಈ ಮೂಲಕ ಮುಲ್ಕಿ – ಮೂಡಬಿದ್ರೆ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಪ್ರಬಲ ಸ್ಪರ್ಧೆ ನೀಡಲು ತಂತ್ರ ರೂಪಿಸಿದೆ. ಈ ಹಿನ್ನೆಲೆಯಲ್ಲಿ ತ್ರಿಕೋನ ಸ್ಪರ್ಧೆಗೆ ವೇದಿಗೆ ಸಿದ್ದವಾಗಿದೆ. ಮೂಲ್ಕಿ ಮೂಡಬಿದ್ರೆ ಕ್ಷೇತ್ರ ದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮುಲ್ಕಿಯ ಉದ್ಯಮಿ ಜೀವನ್ ಶೆಟ್ಟಿ ಅವರನ್ನು ಕಣಕ್ಕಿಳಿಸಲು ನಿನ್ನೆ ಜೆಡಿಎಸ್ ವರಿಷ್ಠರು ತೀರ್ಮಾನಿಸಿದ್ದರು. ಆದರೆ […]

ಜೆಡಿಎಸ್‌ನಿಂದ ಸುಮತಿ ಹೆಗ್ಡೆ ನಾಮಪತ್ರ ಸಲ್ಲಿಕೆ

Saturday, April 21st, 2018
sumathi-hegde

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜಾತ್ಯಾತೀತ ಜನತಾದಳದಿಂದ ಅಭ್ಯರ್ಥಿಯಾಗಿ ಸುಮತಿ ಹೆಗ್ಡೆಯವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಪಕ್ಷದ ಮುಖಂಡರು ಜತೆಗಿದ್ದರು.

ಮೂಡಬಿದ್ರೆಯಿಂದ ಉದ್ಯಮಿ ಜೀವನ್ ಶೆಟ್ಟಿ ಕಣಕ್ಕಿಳಿಸಲು ಜೆಡಿಎಸ್ ತೀರ್ಮಾನ

Friday, April 20th, 2018
jeeven-shetty

ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಜಿದ್ದಾಜಿದ್ದಿಯ ಹೋರಾಟಕ್ಕೆ ವೇದಿಕೆಯಾಗಲಿದೆ . ಜಿಲ್ಲೆಯ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ಈ ನಡುವೆ ಮೂಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಜೆಡಿಎಸ್ ತನ್ನ ಆಭ್ಯರ್ಥಿ ಕಣಕ್ಕಿಳಿಸಲಿದ್ದು ಇಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಮೂಲ್ಕಿ ಮೂಡಬಿದ್ರೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಜೀವನ್ ಶೆಟ್ಟಿ ಆಯ್ಕೆಯಾಗಿದ್ದರೆ. ಈ ಹಿಂದೆ ಮುಲ್ಕಿ-ಮೂಡಬಿದ್ರೆ ಕ್ಷೇತ್ರದಿಂದ ಮಾಜಿ ಸಚಿವ ಅಮರನಾಥ್ ಶೆಟ್ಟಿ ಸ್ಪರ್ಧಿಸುತ್ತಿದ್ದರು. […]

ಜೆಡಿಎಸ್‌-ಬಿಜೆಪಿಯನ್ನು ಕಟುವಾಗಿ ಟೀಕಿಸಿದ ಮುಖ್ಯಮಂತ್ರಿ ಚಂದ್ರು

Friday, April 13th, 2018
mukyamantri-chandru

ಮೈಸೂರು: ಇನ್ನು ಮುಂದೆ ಮನೆಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಇದೆ ಅಂತ ಬೋರ್ಡ್ ಹಾಕಬೇಕಿದೆ ಎಂದು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಕಟುವಾಗಿ ಟೀಕಿಸಿದ್ದಾರೆ. ನಗರದ ಆಂದೋಲನ ವೃತ್ತದಲ್ಲಿ ರಾಮಕೃಷ್ಣ ಪರಮಹಂಸ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ, ಯತೀಂದ್ರ ಸಿದ್ದರಾಮಯ್ಯ ಪರ ಪ್ರಚಾರ ನಡೆಸುತ್ತಿರುವ ಪ್ರಗತಿಪರ ವೇದಿಕೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಜೆಡಿಎಸ್ ಹಾಗೂ ಬಿಜೆಪಿ ವಿರುದ್ಧ ಕಟುವಾಗಿ ಟೀಕಿಸಿದರು. ಜೆಡಿಎಸ್ ಹಾಗೂ ಬಿಜೆಪಿಯಿಂದ ರಾಜ್ಯಕ್ಕೆ ಏನು ಕೊಡುಗೆ ಇಲ್ಲ. ಪರಸ್ಪರ ಕಚ್ಚಾಟದಿಂದಲೇ ಕಾಲ ಕಳೆಯುವ ಇವರು ಜನರಿಗೆ […]

50ಕ್ಕೂ ಅಧಿಕ ಬಿಜೆಪಿ, ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

Thursday, April 12th, 2018
congress

ಕಾಪು: ಬಿಜೆಪಿ ಮತ್ತು ಜೆಡಿಎಸ್‌ನ ಉಚ್ಚಿಲ ಭಾಗದ 50ಕ್ಕೂ ಅಧಿಕ ಜಿಲ್ಲಾ ಮತ್ತು ರಾಜ್ಯ ಮುಖಂಡರು ಇತ್ತೀಚೆಗೆ ಕಾಪು ರಾಜೀವ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಬಿಜೆಪಿ ಮುಖಂಡರಾದ ದುಮಣಿ ಭಟ್, ನಾರಾಯಣ ಬೆಳ್ಚಡ ಹಾಗೂ ಜೆಡಿಎಸ್ ಮುಖಂಡರಾದ ಅಬ್ದುಲ್ಲತೀಫ್ ದಾವೂದ್ ನೇತೃತ್ವದಲ್ಲಿ ಶಾಬಾನ್ ಉಚ್ಚಿಲ, ಗುರುಪ್ರಸಾದ್ ಭಟ್ ಉಚ್ಚಿಲ, ಅಬ್ದುಲ್ ಹಮೀದ್ ಸಹಿತ ಅನೇಕ ಮುಖಂಡರನ್ನು ಶಾಸಕ ವಿನಯ ಕುಮಾರ್ ಸೊರಕೆ ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ […]

ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿಯಾದ ಹೆಚ್‌ಡಿಡಿ… ಸರ್ಕಾರದ ವಿರುದ್ಧ ದೂರು

Thursday, April 5th, 2018
devegowda

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುವ ಬಗ್ಗೆ ನನಗೆ ಅನುಮಾನವಿದೆ. ರಾಜ್ಯ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಕಡಿವಾಣ ಹಾಕಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಚುನಾವಣಾ ಆಯಕ್ತ ಓ.ಪಿ ರಾವತ್‌‌ಗೆ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಮನವಿ ಮಾಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ ಮಾಡಿದರು. ರಾಜ್ಯದಲ್ಲಿನ ಪ್ರಸ್ತುತ ಪರಿಸ್ಥಿತಿ ಕುರಿತು, ಸರ್ಕಾರ ನಡೆಸುತ್ತಿರುವ ಚುನಾವಣಾ […]

ಕುತೂಹಲ ಮೂಡಿಸಿದೆ ಸಿಎಂ ಸಿದ್ದರಾಮಯ್ಯ-ನಟ ಸುದೀಪ್ ಭೇಟಿ

Thursday, April 5th, 2018
sudeep

ಬೆಂಗಳೂರು: ಚಿತ್ರನಟ ಸುದೀಪ್ ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಭೇಟಿ ಸಂದರ್ಭ ಯಾವುದೇ ರಾಜಕೀಯ ಚರ್ಚೆ ಅಥವಾ ಪ್ರಚಾರ ಸಂಬಂಧ ಮಾತುಕತೆ ನಡೆದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಪಕ್ಷದ ಪರ ಪ್ರಚಾರ ಸಂಬಂಧ ಸಿಎಂ ಈ ಸಂದರ್ಭ ಪ್ರಸ್ತಾಪಿಸಿದ್ದು, ಸುದೀಪ್ ಅದಕ್ಕೆ ಯಾವ ಪ್ರತಿಕ್ರಿಯೆ ನೀಡಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಕಳೆದ ವಾರವಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದ […]

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಕೊಲೆ ಯತ್ನ: ಜೆಡಿಎಸ್ ಖಂಡನೆ

Friday, March 9th, 2018
vishwanath

ಮುಲ್ಕಿ: ಬೆಂಗಳೂರು ಲೋಕಾಯುಕ್ತ ಕಚೇರಿಯಲ್ಲಿಯೇ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿಯವರ ಮೇಲೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ನಡೆಸಿ, ಕೊಲೆ ಯತ್ನ ನಡೆಸಿದ್ದನ್ನು ಜೆಡಿಎಸ್ ಪಕ್ಷ ಖಂಡಿಸುತ್ತದೆ ಎಂದು ಇಕ್ಬಾಲ್ ಅಹ್ಮದ್ ಮುಲ್ಕಿ ತಿಳಿಸಿದ್ದಾರೆ. ಸಾಂವಿಧಾನಿಕ ಉನ್ನತ ಹುದ್ದೆಯಾಗಿರುವ ಲೋಕಾಯುಕ್ತದ ನ್ಯಾಯಮೂರ್ತಿಗಳ ಮೇಲೆ ಕಚೇರಿಯೊಳಗೆಯೇ ಮಾರಾಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಯತ್ನವು ರಾಜ್ಯದ ಕಾನೂನು ಸುವ್ಯವಸ್ಥೆ ಎಷ್ಟು ಭದ್ರವಾಗಿದೆಯೆಂದು ತಿಳಿಸುತ್ತೆ. ಉನ್ನತ ಅಧಿಕಾರಿಯೋರ್ವರ ಮೇಲೆಯೇ ಮಾರಕ ಆಯುಧದೊಂದಿಗೆ ಸುಲಲಿತವಾಗಿ ಹಾಡುಹಗಲೇ ಎಲ್ಲಾ ಭದ್ರತಾ ತಪಾಸಣಾ ಕೇಂದ್ರವನ್ನು ದಾಟಿ ಈ ರೀತಿಯಲ್ಲಿ […]