Blog Archive

ಕಾವೇರಿ ವಿವಾದ..ಪ್ರಧಾನಿ ಮಧ್ಯ ಪ್ರವೇಶ ಸಾಧ್ಯವೇ ಇಲ್ಲವೆಂದ ಯಡಿಯೂರಪ್ಪ

Friday, September 16th, 2016
yadiyoorappa

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ ವಿಚಾರದಲ್ಲಿ ಪ್ರಧಾನಿ ಮಧ್ಯ ಪ್ರವೇಶ ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇಂದು ನಗರದ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿವಾದ ಕೋರ್ಟ್ ಮುಂದೆ ಇರುವುದರಿಂದ ಪ್ರಧಾನಿ ಮಧ್ಯ ಪ್ರವೇಶ ಪ್ರಯೋಜನ ಸಾಧ್ಯವಿಲ್ಲ ಎಂದರು. ರಾಜಕೀಯ ಕಾರಣದಿಂದ ಪ್ರಧಾನಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸಲಾಗುತ್ತಿದೆ. ಇದರಿಂದ ಯಾವುದೇ ಪ್ರಯೋಜನ ಇಲ್ಲ. ಕಾವೇರಿ ವಿಷಯದಲ್ಲಿ ಪ್ರಧಾನಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸುವುದರಲ್ಲಿ ಅರ್ಥವಿಲ್ಲ ಎಂದು ಸಿಎಂ […]

ಈಶ್ವರಪ್ಪರವರೊಂದಿಗೆ ಯಾವುದೇ ಭಿನ್ನಮತವಾಗಲಿ, ಗೊಂದಲವಾಗಲಿ ಇಲ್ಲ: ಯಡಿಯೂರಪ್ಪ

Monday, August 22nd, 2016
Yadiyoorappa

ಮಂಗಳೂರು: ದೆಹಲಿಯಲ್ಲಿ ಆ. 23ರಂದು ಎಲ್ಲಾ ರಾಜ್ಯಗಳ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು ಅದರಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಏತನ್ಮಧ್ಯೆ ಕೆ.ಎಸ್. ಈಶ್ವರಪ್ಪರವರೊಂದಿಗೆ ಯಾವುದೇ ಭಿನ್ನಮತವಾಗಲಿ, ಗೊಂದಲವಾಗಲಿ ಇಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದಿದ್ದಾರೆ. ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ನನ್ನ ಹಾಗೂ ಈಶ್ವರಪ್ಪ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಈಗಾಗಲೇ ಎಲ್ಲ ವಿಷಯವನ್ನು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ. ಪಕ್ಷದ ಚೌಕಟ್ಟಿನ ಹೊರಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡರೆ ಅಭ್ಯಂತರ ಇಲ್ಲ. ಆದರೆ ಈ […]

ಕುಂಜತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ

Wednesday, January 13th, 2016
yeddyurappa Kunjathuru

ಮಂಜೇಶ್ವರ : ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಭೇಟಿ ನೀಡಿದರು. ಈ ಪ್ರಯುಕ್ತ ನಡೆದ ಅನೌಪಚಾರಿಕ ಸಭೆಯಲ್ಲಿ ಮಾತನಾಡಿದ ಅವರು, ಯುವ ಜನಾಂಗ ಕಠಿಣ ಪರಿಶ್ರಮಿಗಳಾಗಿ ಸುದೃಢ ದೇಶವನ್ನು ಕಟ್ಟುವ ಕಾರ್ಯವನ್ನು ನಿರಂತರ ಮಾಡಿಕೊಂಡು ಬರಬೇಕು ಎಂದು ಅಭಿಪ್ರಾಯಪಟ್ಟರು. ಶ್ರೀ ಕ್ಷೇತ್ರ ಅಭೀವೃದ್ಧಿ ಕಾರ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ,ದಾಖಲೆಯ ಅವಧಿಯಲ್ಲಿ ಶ್ರೀ ಕ್ಷೇತ್ರದ ಪುನರ್‌ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವ ನಡೆದುದರ ಬಗ್ಗೆ ಸಂತಸ ಸೂಚಿಸಿದರು. ಉಡುಪಿ ಕ್ಷೇತ್ರ ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ […]

ಬಿಎಸ್‌ವೈ ಬೆಂಬಲಿಗರಿಗೆ ಸ್ಥಾನಮಾನ

Thursday, February 6th, 2014
yeddyurappa

ಬೆಂಗಳೂರುಃ ಯಡಿಯೂರಪ್ಪ ಒತ್ತಡಕ್ಕೆ ಮಣಿದಿರುವ ಬಿಜೆಪಿ ಅವರ ಬೆಂಬಲಿಗರಿಗೆ ಸ್ಥಾನಮಾನ ನೀಡುವ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಿದ್ದು, ಬುಧವಾರ ಹಲವರಿಗೆ ಸ್ಥಾನ ಮಾನ ಕಲ್ಪಿಸಿದೆ. ಯಡಿಯೂರಪ್ಪ ಜತೆ ಕೆಜೆಪಿಗೆ ಹೆಜ್ಜೆ ಹಾಕಿ ವಾಪಸಾಗಿರುವ ನಿಂಬಣ್ಣನವರ್‌ ಹಾಗೂ ಮಂಜುಳಾ ಅವರನ್ನು ರಾಜ್ಯ ಮಾಧ್ಯಮ ಸಹ ವಕ್ತಾರರನ್ನಾಗಿ ನೇಮಿಸ ಲಾಗಿದೆ. ಅಲ್ಲದೆ, ಮಾಜಿ ಶಾಸಕರಾದ ಸುನೀಲ್‌ ವಲ್ಯಾಪುರೆ ಹಾಗೂ ವಿಟuಲ ಕಟಕದೊಂಡ ಅವರಿಗೆ ರಾಜ್ಯ ಎಸ್‌ಸಿ ಮೋರ್ಚಾದ ಉಪಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಲಾಗಿದೆ. ಎಂ. ಚಂದ್ರಪ್ಪ ಹಾಗೂ ಬಾಬೂರಾವ್‌ ಚವಾಣ್‌ […]

ಚುನಾವಣೆಯಲ್ಲಿ ಒಂದೇ ರೀತಿಯ ಫಲಿತಾಂಶವನ್ನು ನಿರೀಕ್ಷಿಸಲು ಸಾಧ್ಯವಿಲ್ಲ :ಸಿ.ಟಿ. ರವಿ

Monday, March 18th, 2013
CT Ravi

ಮಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಮುಂಬರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಅಲ್ಲ, ಈ ಚುನಾವಣೆಯಲ್ಲಿ ಬಂದ ಫಲಿತಾಂಶವೇ ಮುಂದಿನ ಚುನಾವಣಾ ಫಲಿತಾಂಶ ವಾಗುವ ಸಾಧ್ಯತೆ ತೀರ ಕಡಿಮೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿದರು. ಅವರು ರವಿವಾರ ಸುದ್ದಿಗಾರರ ಜತೆಗೆ ಸ್ಥಳೀಯ ಚುನಾವಣಾ ಫಲಿತಾಂಶ ಕುರಿತಂತೆ ಮಾತನಾಡಿದ ಅವರು, ಉತ್ತರಪ್ರದೇಶ ಮತ್ತು ದಿಲ್ಲಿಯಲ್ಲಿ ನಡೆದ ಚುನಾವಣಾ ಫಲಿತಾಂಶವನ್ನು ಗಮನಿಸಿದಾಗ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಗೆಲುವು ಸಾಧಿಸಿದರೆ, ಅನಂತರದ […]

ಕೆಜೆಪಿಯಲ್ಲಿ ಬಿರುಕು ಬಿಟ್ಟ ಶೋಭಾ

Tuesday, February 12th, 2013
Shobha Karandlaje

ಮಂಗಳೂರು : ಕೆಜೆಪಿಯನ್ನು ನಾವು ಎಷ್ಟೇ ಕಷ್ಟ ಪಟ್ಟು ಸಂಘಟಿಸಿದರೂ ಅದರ ಪೂರ್ಣ ಲಾಭ ಪಡೆಯಲಿರುವವರು ಶೋಭಾ ಕರಂದ್ಲಾಜೆ ನಾವು ಶ್ರಮಿಸಿ ಆಕೆಗೆ ಲಾಭ ಮಾಡಿಕೊಡುವುದಕ್ಕಿಂತ ಬಿಜೆಪಿಯಲ್ಲೇ ಇರುವುದು ಲೇಸು ಎಂಬ ನಿರ್ಧಾರಕ್ಕೆ ಬಿಜೆಪಿಯಲ್ಲಿರುವ ಯಡಿಯೂರಪ್ಪರ ಕಟ್ಟಾ ಬೆಂಬಲಿಗರು ಬಂದಿದ್ದಾರೆ. ಯಡಿಯೂರಪ್ಪ ಮೊದಲಿನಿಂದಲೂ ಹೇಳಿಕೊಂಡು ಬಂದಂತೆ ಬಿಜೆಪಿಯಲ್ಲಿ ಅವರ ನಿಷ್ಠೆ, ಅಭಿಮಾನದ 40 ಶಾಸಕರು ಈಗಲೂ ಇದ್ದಾರೆ. ಯಡಿಯೂರಪ್ಪರ ಪರ ಪ್ರೀತಿ, ವಿಶ್ವಾಸವನ್ನು ಈಗಲೂ ಪ್ರಕಟಿಸುತ್ತಾರೆ. ಆದರೆ ತಮ್ಮ ಭವಿಷ್ಯವನ್ನು ನೆನೆದು ಕೆಜೆಪಿಯಿಂದ ದೂರ ಸರಿಯುತ್ತಿದ್ದಾರೆ ಎನ್ನುವ […]

ಯಡಿಯೂರಪ್ಪ ಮೊದಲು ಆರೋಪ ಮುಕ್ತರಾಗಲಿ ಅಮೇಲೆ ನಾಯಕತ್ವ : ಗಡ್ಕರಿ

Friday, February 24th, 2012
Nithin Gadkari

ಬೆಂಗಳೂರು : ಹೊಸೂರು ರಸ್ತೆಯ ಗೆಸ್ಟ್ ಲೈನ್ ರೆಸಾರ್ಟ್‌ನಲ್ಲಿ ನಡೆದ ಚಿಂತನ-ಮಂಥನ ಸಭೆಯಲ್ಲಿ ‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಯಾವುದೇ ಕಾರಣಕ್ಕೂ ಅಶಿಸ್ತನ್ನು ಸಹಿಸಲು ಸಾಧ್ಯವಿಲ್ಲ. ದಯಮಾಡಿ ಬಂಡಾಯ ರಾಜಕೀಯ ಮಾಡಬೇಡಿ. ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಎರಡೂ ಕೈಮುಗಿದು ಮನವಿ ಮಾಡಿಕೊಂಡ ಘಟನೆ ಶುಕ್ರವಾರ ನಡೆಯಿತು. ಗೆಸ್ಟ್ ಲೈನ್ ರೆಸಾರ್ಟ್‌ನಲ್ಲಿ ಸುಮಾರು 1 ಗಂಟೆಗೂ ಹೆಚ್ಚು ಕಾಲ ಚಿಂತನ-ಮಂಥನ ಸಭೆಯಲ್ಲಿ ಸ್ಪಷ್ಟ ಸಂದೇಶ ರವಾನಿಸಿದ ಗಡ್ಕರಿ, ರಾಜ್ಯದಲ್ಲಿ ಸದಾನಂದ ಗೌಡರನ್ನು ಮುಖ್ಯಮಂತ್ರಿ […]

ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕು : ಬಿ.ಪಿ.ಹರೀಶ್

Thursday, February 23rd, 2012
Yeddyurappa

ಬೆಂಗಳೂರು : ಯಡಿಯೂರಪ್ಪ ಇಂದು ತಮ್ಮ ನಿವಾಸದಲ್ಲಿ ಎಲ್ಲ ಶಾಸಕರು, ಸಚಿವರು, ಸಂಸದರಿಗೆ ಕರೆದ ಔತಣಕೂಟದಲ್ಲಿ ಅವರ ಬಲಗೈಬಂಟ ಶಾಸಕ ಬಿ.ಪಿ.ಹರೀಶ್ ಅವರು ಪಕ್ಷದ ಹಿತದೃಷ್ಟಿಯಿಂದ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ಮಖ್ಯಮಂತ್ರಿಯಾಗಬೇಕು ಎಂದು ಹೇಳುವ ಮೂಲಕ ಬಿಜೆಪಿಯಲ್ಲಿ ಮತ್ತೆ ಅಂತಃ ಕಲಹ ಆರಂಭಗೊಂಡಂತಾಗಿದೆ. ಸದಾನಂದ ಗೌಡರಿಂದ ಬಿಜೆಪಿ ಪಕ್ಷ ನಾಶವಾಗುತ್ತಿದೆ. ಬಿಜೆಪಿಯನ್ನು ಒಗ್ಗಟ್ಟಿನಲ್ಲಿಡಲು ಮುಖ್ಯಮಂತ್ರಿಗೆ ಸಾಧ್ಯವಿಲ್ಲ. ಹಾಗಾಗಿ ಪಕ್ಷದ ಹಿತದೃಷ್ಟಿಯಿಂದ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕು’ ಡಿ.ವಿ.ಸದಾನಂದ ಗೌಡರು ಜೆಡಿಎಸ್ ಋಣ ತೀರಿಸುತ್ತಿದ್ದಾರೆ. ಅವರೇ ಮುಖ್ಯಮಂತ್ರಿಯಾಗಿ […]

ನಾನು ಶಿಕಾರಿಪುರದ ಒಬ್ಬ ಸಾಮಾನ್ಯ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷತೆ ಬೇಡ :ಯೆಡ್ಡಿ

Monday, December 19th, 2011
ನಾನು ಶಿಕಾರಿಪುರದ ಒಬ್ಬ ಸಾಮಾನ್ಯ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷತೆ ಬೇಡ :ಯೆಡ್ಡಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ರವಿವಾರ ಪೊಳಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಅವರು ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ನಾನೀಗ ಶಿಕಾರಿಪುರದ ಒಬ್ಬ ಸಾಮಾನ್ಯ ಶಾಸಕ. ತನ್ನ ಮೇಲೆ ಆರೋಪ ಬಂದಾಗ ವರಿಷ್ಠರ ಸೂಚನೆಯಂತೆ ರಾಜೀನಾಮೆ ನೀಡಿದ್ದೇನೆ. ಮುಂದೆ ವರಿಷ್ಠರು ಉನ್ನತ ಹುದ್ದೆ ನೀಡಿದರೆ ಸ್ವೀಕರಿಸುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷತೆ ಬೇಡ […]

ದೇವರಗುಂಡ ವೆಂಕಪ್ಪ ಸದಾನಂದ ಗೌಡ ಕರ್ನಾಟಕದ 26 ನೇ ಮುಖ್ಯಮಂತ್ರಿ

Wednesday, August 3rd, 2011
DV Sadanandagowda/ದೇವರಗುಂಡ ವೆಂಕಪ್ಪ ಸದಾನಂದ ಗೌಡ

ಬೆಂಗಳೂರು : ಬಿಜೆಪಿಯ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸೋತ ಅಭ್ಯರ್ಥಿ ಜಗದೀಶ್ ಶೆಟ್ಟರ್ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಬುಧವಾರ ಮಧ್ಯಾಹ್ನ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಹಸ್ಯ ಮತದಾನದ ಮೂಲಕ ಡಿವಿಎಸ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಗೊಂಡರು. ಸದಾನಂದ ಗೌಡ ಆಯ್ಕೆ ಮೂಲಕ ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪ ಬಣ ಮೇಲುಗೈ ಸಾಧಿಸಿದಂತಾಗಿದೆ. ಯಡಿಯೂರಪ್ಪ ಸಹ ಮತ ಚಲಾಯಿಸಿದರು. ಸದಾನಂದ ಗೌಡ ಪರ 62 – […]