Blog Archive

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Tuesday, May 15th, 2018
resigns

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಜನಾದೇಶ ಪಡೆಯುವ ಕಾಲ ಇದೀಗ ಬಂದಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಮೇ 12ರಂದು ಮತದಾನವಾಗಿದೆ. ಚುನಾವಣಾ ಪೂರ್ವ ಸಮೀಕ್ಷೆ, ಅಭಿಪ್ರಾಯಗಳ ಸಂಗ್ರಹ ಕುತೂಹಲಕಾರಿ ಫಲಿತಾಂಶವನ್ನು ನೀಡಿದೆ. ಆದರೆ, ಅಂತಿಮ ಜನಾದೇಶ ಇಂದು(ಮೇ 15) ಮಧ್ಯಾಹ್ನ ಹೊರಬೀಳಲಿದೆ.  ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಲ್ಲದೆ ಸರಿ ಸುಮಾರು 28ಕ್ಕೂ ಅಧಿಕ ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. 2,622 ಅಭ್ಯರ್ಥಿಗಳಿದ್ದು, ಪುರುಷ ಅಭ್ಯರ್ಥಿಗಳು 2,405, ಮಹಿಳೆಯರು […]

ಸರ್ಕಾರ ರಚಿಸಲು ಜೆಡಿಎಸ್ ಗೆ ಬೆಂಬಲ: ಸಿದ್ದರಾಮಯ್ಯ

Tuesday, May 15th, 2018
merged-jds

ಬೆಂಗಳೂರು: ಮತದಾರರ ತೀರ್ಪಿಗೆ ತಲೆಬಾಗಿದ್ದೇವೆ. ಜನರ ತೀರ್ಪನ್ನು ಒಪ್ಪಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಇದೇ ಮೊದಲ ಬಾರಿ ಮಾಧ್ಯಮಗಳ ಮುಂದೆ ಕಾಣಿಸಿಕೊಂಡು ಮಾತನಾಡಿದ ಸಿಎಂ, ರಾಜ್ಯದಲ್ಲಿ ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲ. ಯಾರಿಗೂ ಸ್ವತಂತ್ರ ಸರ್ಕಾರ ರಚನೆ ಮಾಡಲು ಆಗಲ್ಲ. ಹೀಗಾಗಿ ಕಾಂಗ್ರೆಸ್ ಒಂದು ತೀರ್ಮಾನಕ್ಕೆ ಬಂದಿದೆ. ಜಾತ್ಯತೀತ ಹಿನ್ನೆಲೆಯಿರುವ ಪಕ್ಷಕ್ಕೆ ಬೆಂಬಲ, ಜೆಡಿಎಸ್ ಗೆ ಸರ್ಕಾರ ರಚಿಸಲು ಸಂಪೂರ್ಣ ಬೆಂಬಲ ನೀಡಲು ನಿರ್ಧರಿಸಿದೆ ಎಂದು ಹೇಳಿದರು. ಜನಾದೇಶವನ್ನು ಗೌರವಿಸುತ್ತೇವೆ. […]

ದುರಹಂಕಾರ ಬಿಟ್ಟರೆ ಸಿದ್ದರಾಮಯ್ಯ ಉಳೀತಾರೆ: ಬಿ ಜನಾರ್ದನ ಪೂಜಾರಿ

Wednesday, May 9th, 2018
janardhan-poojary

ಮಂಗಳೂರು: ಪತ್ರಿಕಾಗೋಷ್ಠಿಗಳಿಂದ ದೂರ ಉಳಿದಿದ್ದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೆಪಿಸಿಸಿ ಅಧ್ಯಕ್ಷ ಬಿ ಜನಾರ್ದನ ಪೂಜಾರಿ ಮತ್ತೆ ಮೈಕ್ ಎತ್ತಿಕೊಂಡಿದ್ದಾರೆ. ಕಾಂಗ್ರೆಸ್ ಕಚೇರಿಗಳಿಂದ ದೂರ ಉಳಿದಿದ್ದ ಪೂಜಾರಿ ಇಂದು ಕಾಂಗ್ರೆಸ್ ಕಚೇರಿಯಲ್ಲೇ ಮಾಧ್ಯಮಗೋಷ್ಠಿ ನಡೆಸಿದರು. ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಜನಾರ್ದನ ಪೂಜಾರಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಿವಿಮಾತು ಹೇಳಿದರು. “ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾನು ಸಲಹೆಗಳನ್ನು ಕೊಟ್ಟಿದ್ದು ನಿಜ. ದುರಹಂಕಾರಿ ಮನೋಭಾವ ಬದಲಿಸದಿದ್ದರೆ ಸೋಲುತ್ತಾರೆ ಎಂದು ಹೇಳಿದ್ದೆ. ಪಕ್ಷಕ್ಕಿಂತ ತಾನೇ ದೊಡ್ಡವನೆಂದು ನಡೆದುಕೊಂಡರೆ ಉಳಿಗಾಲವಿಲ್ಲ ಎಂದಿದ್ದೆ. ಈಗಲೂ ಹೇಳುತ್ತೇನೆ, […]

ಯು.ಟಿ. ಖಾದರ್ ಪರ ಐವನ್ ಮತ ಯಾಚನೆ

Wednesday, May 9th, 2018
u-t-kader

ಮಂಗಳೂರು: ಉಳ್ಳಾಲ ವಿಧಾನಸಭಾ ಕ್ಷೇತ್ರದ ಕಲ್ಲಾಪು, ಮುಡಿಪು, ದೇರಲಕಟ್ಟೆ ಮುಂತಾದ ಕಡೆಗಳಲ್ಲಿ ಯು.ಟಿ.ಖಾದರ್ ಪರವಾಗಿ ಸರಕಾರಿ ಮುಖ್ಯ ಸಚೇತಕ ಐವನ್ ಡಿಸೋಜಾ ಮತಯಾಚನೆ ಮಾಡಿದರು. ರಾಜ್ಯದಲ್ಲಿ ಸಚಿವರಾಗಿ ಹಾಗೂ ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಂಡಿರುವ ಯು.ಟಿ ಖಾದರ್ ಅವರು ರಾಜ್ಯಕ್ಕೆ 2000ಕ್ಕೂ ಅಧಿಕ ಕೋಟಿ ಅನುದಾನವನ್ನು ದೊರಕಿಸಿಕೊಟ್ಟಿದ್ದಾರೆ. ಈ ಮೂಲಕ ಮಂಗಳೂರು ಕ್ಷೇತ್ರಅಭಿವೃದ್ಧಿಪಡಿಸಿದ್ದು, ಯು.ಟಿ. ಖಾದರ್ ಅವರನ್ನು ಅತ್ಯಂತ ಹೆಚ್ಚಿನ ಮತದಿಂದ ಆರಿಸಬೇಕೆಂದು ಹೇಳಿ ಕಲ್ಲಾಪು ದೇರಲಕಟ್ಟೆ, ಮುಡಿಪು ಮುಂತಾದ ಕಡೆಗಳಲ್ಲಿ ತೆರಳಿ ಮತ ಯಾಚನೆ ಮಾಡಿದರು. ಉಳ್ಳಾಲದಂತಹ ಕ್ಷೇತ್ರದಲ್ಲಿ […]

ಸಿದ್ದರಾಮಯ್ಯರಿಂದ ಕೊಲೆಗಡುಗರ ರಕ್ಷಣೆ: ಅಮಿತ್ ಶಾ ಆರೋಪ

Wednesday, May 9th, 2018
amit-shah

ಮಂಗಳೂರು: ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದವರನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣೆ ಮಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಪಾತಾಳದಲ್ಲಿದ್ದರೂ ಕೊಲೆಗಡುಕರನ್ನು ಹುಡುಕಿ ಬಂಧಿಸುತ್ತೇವೆ ಎಂದು ಹೇಳಿದ್ದಾರೆ. ನಗರದ ನವಭಾರತ್ ವೃತ್ತದಿಂದ ಡೊಂಗರಕೇರಿ ಮೂಲಕ ಕಾರ್‌ಸ್ಟ್ರೀಟ್ ತನಕ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರೊಂದಿಗೆ ರೋಡ್ ಶೋ ನಡೆಸಿದ ಬಳಿಕ ಅವರು ಮಾತನಾಡಿದರು. ಸಿದ್ದರಾಮಯ್ಯ ಸರಕಾರ ಅಭಿವೃದ್ಧಿ ವಿರೋಧಿ ಮತ್ತು ಗೂಂಡಾಗಿರಿಯ ಸರಕಾರ. ಕಾರ್ಯಕರ್ತರನ್ನು ಹತ್ಯೆ […]

ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಲೀಗಲ್‌ ನೋಟಿಸ್‌ , ಕ್ಷಮೆ ಕೇಳದಿದ್ದರೆ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ..!

Monday, May 7th, 2018
narendra-modi

ಬೆಂಗಳೂರು: ಕರ್ನಾಟಕದ ಸಿಎಂ ಸಿದ್ದರಾಮಯ್ಯ ಸರ್ಕಾರ 10 ಪರ್ಸೆಂಟ್‌ ಸರ್ಕಾರ ಎಂದು ಜರಿದಿದ್ದಕ್ಕೆ ಪ್ರತಿಯಾಗಿ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ರಾಜ್ಯ ಚುನಾವಣಾ ಪ್ರಚಾರದ ವೇಳೆ, ಪ್ರಧಾನಿ ಮೋದಿ ನಿರಂತರವಾಗಿ ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವುಗಳಿಗೆ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಪ್ರಧಾನಿ ಬಳಸಿದ ‘ಸೀದಾ ರೂಪಯ್ಯ’ ಸರ್ಕಾರ ಎಂಬ ಪದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ವಿರುದ್ಧ ಮಾನನಷ್ಟವಾಗಿರುವ ಬಗ್ಗೆ ಲೀಗಲ್‌ ನೋಟಿಸ್‌ ನೀಡಿದ್ದಾರೆ. ಅಷ್ಟೇ ಅಲ್ಲ ಪ್ರಧಾನಿ ನರೇಂದ್ರ ಮೋದಿ, […]

ಬಿಜೆಪಿ ಪ್ರಣಾಳಿಕೆ ಭಗವದ್ಗೀತೆ ಇದ್ದ ಹಾಗೆ : ಡಿ ವಿ ಸದಾನಂದಗೌಡ

Monday, May 7th, 2018
sadananda-gowda

ಮೈಸೂರು: ನಾನೇ ಅಭ್ಯರ್ಥಿ ಎಂದು ಭಾವಿಸಿ ಚಾಮರಾಜ ಕ್ಷೇತ್ರದಲ್ಲಿ ಎಲ್.ನಾಗೇಂದ್ರ ಅವರನ್ನು ಗೆಲ್ಲಿಸಿಕೊಡಿ ಎಂದು ಕೇಂದ್ರ ಸಚಿವ ವಿ.ಸದಾನಂದಗೌಡ ಮನವಿ ಮಾಡಿದರು. ಚಾಮರಾಜ ಕ್ಷೇತ್ರದ ಕೆ.ಜಿ.ಕೊಪ್ಪಲಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಆದರೆ, ಎಲ್.ನಾಗೇಂದ್ರ ಸ್ಥಳೀಯ ಎನ್ನುವ ಕಾರಣಕ್ಕೆ ಭಾರತೀಯ ಜನತಾ ಪಕ್ಷ ಅವಕಾಶ ನೀಡಿದೆ. ನಾಗೇಂದ್ರ ಅವರು ಗೆದ್ದರೆ ನಾನೇ ಗೆದ್ದಂತೆ, ಚಾಮರಾಜ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡು ಹೋಗಲಿದ್ದೇವೆ ಎಂದು ಭರವಸೆ ನೀಡಿದರು. ಸಿದ್ದರಾಮಯ್ಯ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಸದಾನಂದಗೌಡ ಇದೇ ವೇಳೆ ಕೆ.ಜಿ.ಕೊಪ್ಪಲು, […]

6 ದಿನಗಳಲ್ಲಿ ಮನೆಗೆ ಹೋಗಲಿರುವ ಸಿಎಂ ಬಗ್ಗೆ ಮಾತನಾಡಲ್ಲ: ಬಿಎಸ್‌ವೈ

Monday, May 7th, 2018
yedeyurappa

ಕೊಪ್ಪಳ: ಇನ್ನು ಕೇವಲ ಆರು ದಿನಗಳಲ್ಲಿ ಸಿದ್ದರಾಮಯ್ಯ ಮನೆಗೆ ಹೋಗುತ್ತಾರೆ. ಮನೆಗೆ ಹೋಗುವವರ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಯೋಗ್ಯತೆ ಇದ್ದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸಬೇಕಿತ್ತು. ಆದರೆ, ಬಾದಾಮಿಗೆ ಯಾಕೆ ಬಂದು ಸ್ಪರ್ಧಿಸಿದ್ದಾರೆ. ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡೂ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಸೋಲು ನಿಶ್ಚಿತ ಎಂದರು. ನಾನು ಗೆಲ್ಲುತ್ತೇನೆ, ನಾನೇ […]

ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಇಳಿದ ನಟ ದರ್ಶನ್..!

Saturday, May 5th, 2018
Darshan

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದ ಪ್ರಚಾರಕ್ಕೆ ಒಬ್ಬರಾದಂತೆ ಒಬ್ಬರು ಬಂದು ಸಿಎಂ ಪರ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಪ್ರಚಾರದ ಬಿಸಿ ದಿನದಿಂದ ದಿನಕ್ಕೆ ಏರತೊಡಗಿದ್ದು , ಸಿನೆಮಾ ಲೋಕದ ಕೆಲವರು ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಇಳಿದಿದ್ದಾರೆ. ಶನಿವಾರ ನಟ ದರ್ಶನ್ ‌ ಸಿಎಂ ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಆಗಮಿಸಿದ್ದರು. ಆದರೆ ನಾಗನಹಳ್ಳಿಯಲ್ಲಿ ಜೆಡಿಎಸ್ ‌ ಕಾಯಕರ್ತರು ದರ್ಶನ್ ವಿರುದ್ಧ ಪ್ರತಿಭಟನೆ ನಡೆಸಿದರು. ದರ್ಶನ್ ಹಿರಿಯ ರಾಜಕಾರಣಿ ಅಂಬರೀಷ್ ‌ಅವರ ಸಚಿವ ಸ್ಥಾನ ಕಸಿದುಕೊಂಡಾಗ ಮಾತನಾಡಿರಲಿಲ್ಲ. ಕಾವೇರಿ […]

ಮತದಾರರು 2013ರಂತೆ ಒಂದೇ ಪಕ್ಷ ಗೆಲ್ಲಿಸ್ತಾರೆ: ಸಿದ್ದು ಅಮಿತೋತ್ಸಾಹ

Saturday, April 28th, 2018
siddaramaih

ಬೆಂಗಳೂರು: ರಾಜ್ಯ ವಿಧಾನಸಭೆಗೆ ಮೇ 12ರಂದು ಮತದಾನ ನಡೆಯಲಿದ್ದು, ಈಗಾಗಲೇ ವಿವಿಧ ಪಕ್ಷಗಳು ಮತದಾರ ಪ್ರಭುಗಳ ಓಲೈಕೆಯಲ್ಲಿ ತೊಡಗಿದ್ದು, ಗೆಲುವಿನ ಲೆಕ್ಕಾಚಾರ ಮಾಡುತ್ತಿವೆ. ಚುನಾವಣೆ ಫಲಿತಾಂಶದ ಬಗ್ಗೆ ಟ್ವಿಟ್ಟರ್‌ನಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 2013ರಲ್ಲಿ ಮತದಾರರು ನಿರ್ಣಯ ಮಾಡಿದಂತೆ ಈ ಬಾರಿಯೂ ರಾಜ್ಯದಲ್ಲಿ ಒಂದೇ ಪಕ್ಷ ಬಹುಮತ ಗಳಿಸಿ ಸರ್ಕಾರ ರಚಿಸುತ್ತದೆ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ. ಯಾವುದೇ ಒಂದು ಪಕ್ಷ ಕಿಂಗ್‌ ಮೇಕರ್‌ ಆಗಲು ಸಾಧ್ಯವೇ ಇಲ್ಲ ಎಂದು ಸಿದ್ದರಾಮಯ್ಯ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ […]