Blog Archive

ಸಿಎಂ ಸಿದ್ದರಾಮಯ್ಯ ಒಬ್ಬ ಮೂರ್ಖ, ಹಗಲು ದರೋಡೆಕೋರ: ಬಿ.ಎಸ್.ಯಡಿಯೂರಪ್ಪ

Friday, April 27th, 2018
BJP-speech

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ಮೂರ್ಖ. ಅವನಂತಹ ಭ್ರಷ್ಟ ಮತ್ತೊಬ್ಬರಿಲ್ಲ. ಇಂತಹ ಹಗಲು ದರೋಡೆಕೋರನಿಗೆ ನನ್ನ ಬಗ್ಗೆ ಮಾತನಾಡುವುದಕ್ಕೆ ನಾಚಿಕೆಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ. ನಗರದ ಚಾಲುಕ್ಯ ಸರ್ಕಲ್ ಸಮೀಪವಿರುವ ಅಮಿತ್ ಶಾ ನಿವಾಸಕ್ಕೆ ಇಂದು ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಮಾತಿನುದ್ದಕ್ಕೂ ಏಕವಚನದಲ್ಲೇ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು. ನನ್ನನ್ನು ಭ್ರಷ್ಟ ಎನ್ನುವ ಮೊದಲು ನಿನಗೆ ಮಾತನಾಡಲು ಯಾವ ನೈತಿಕತೆ ಇದೆ. ನಿನ್ನ ಸುತ್ತಮುತ್ತ ಇರುವವರೆಲ್ಲಾ ಹಗಲು ದರೋಡೆಕೋರರೇ. […]

ಬಿಜೆಪಿ ನಾಯಕರಿಗೆ ಮೂರು ಕಾಸಿನ ಮಾನ ಮರ್ಯಾದೆ ಇಲ್ಲ: ಸಿಎಂ ಸಿದ್ದರಾಮಯ್ಯ

Friday, April 27th, 2018
bantwala

ಮಂಗಳೂರು: ಈ ಬಾರಿ ಉಡುಪಿ, ಮಂಗಳೂರಲ್ಲಿ ಬಿಜೆಪಿಗೆ ಒಂದೂ ಸೀಟು ಬರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಮೂರು ಕಾಸಿನ ಮಾನ ಮರ್ಯಾದೆ ಇಲ್ಲ. ಚುನಾವಣೆ ಘೋಷಣೆಯಾದ ಕೂಡಲೇ 2008 ರ ಲೂಟಿ ಕೋರರು ಮತ್ತೆ ಒಂದಾಗಿದ್ದಾರೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಟೀಂ ವಿರುದ್ಧ ಸಿಎಂ ಆಕ್ರೋಷ ವ್ಯಕ್ತಪಡಿಸಿದರು. ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, […]

ಪೂಜಾರಿಗೆ ಮೊಳಗಿದ ಜೈಕಾರ ಕೇಳಿ, ಭಾಷಣ ಅರ್ಧಕ್ಕೆ ನಿಲ್ಲಿಸಿದ ಸಿಎಂ ಸಿದ್ದರಾಮಯ್ಯ

Friday, April 27th, 2018
janardhan-poojary

ಬಂಟ್ವಾಳ: ಕಾಂಗ್ರೆಸ್ ಮುಖಂಡರಿಗೆ ಕಾಂಗ್ರೆಸ್ ನ ಹಿರಿಯ ಮುಖಂಡ ಜನಾರ್ದನ ಪೂಜಾರಿಯವರ ಜನಪ್ರಿಯತೆ ಬಂಟ್ವಾಳದಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಪ್ರಚಾರ ಸಭೆಯಲ್ಲಿ ಕೇಳಿಬಂದ ಜೈಕಾರದಿಂದ  ಮನದಟ್ಟಾಗಿದೆ. ಸಮಾವೇಶಕ್ಕೆ ಜನಾರ್ದನ ಪೂಜಾರಿಯವರು ಆಗಮಿಸಿದ ಸಂದರ್ಭ ಕೇಳಿಬಂದ ಜೈಕಾರದ ಅಬ್ಬರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭಾಷಣವನ್ನೇ ಕೆಲಕಾಲ ನಿಲ್ಲಿಸಿ ಬಿಟ್ಟರು. ಜನಾರ್ದನ ಪೂಜಾರಿಯವರನ್ನು ವೇದಿಕೆಗೆ ಬರಮಾಡಿಕೊಂಡ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ತಮ್ಮ ಪಕ್ಕದಲ್ಲೇ ಕುಳ್ಳಿರಿಸಿಕೊಂಡರು. ಬಳಿಕ ಭಾಷಣ ಮುಂದುವರೆಸಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಮೂರು ಕಾಸಿನ ಮಾನ ಮರ್ಯಾದೆ […]

ನಮ್ಮ ಸರಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇಲ್ಲ…ಇದು ಸರಕಾರದ ದೊಡ್ಡ ಸಾಧನೆ: ಸಿದ್ದರಾಮಯ್ಯ

Friday, April 27th, 2018
siddaramaih

ಮಂಗಳೂರು: ನಮ್ಮ ಸರಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇಲ್ಲ.ಇದು ಸರಕಾರದ ದೊಡ್ಡ ಸಾಧನೆಯಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಟಿಎಂಎ ಪೈ ಹಾಲ್ ನಲ್ಲಿ ನಡೆದ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಕಳೆದ ಪ್ರಣಾಳಿಕೆಯಲ್ಲಿ ಜನತೆಗೆ ನೀಡಿದ್ದ ಭರವಸೆಗಳ ಪೈಕಿ ಶೇ 90ರಷ್ಟನ್ನು ಈಡೇರಿಸಿದ್ದೇವೆ ಎನ್ನುವುದಕ್ಕೆ ಸಂತಸವಾಗುತ್ತದೆ ಎಂದರು. ಎಪಿಎಂಸಿಯಲ್ಲಿ ಆನ್ ಲೈನ್ ಮಾರುಕಟ್ಟೆ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದು ದೇಶಕ್ಕೆ ಮಾದರಿಯಾಗಿದೆ. ಕೇಂದ್ರ ಸರಕಾರ […]

ಕ್ಷೇತ್ರದ ಜನತೆ ಮತ್ತೊಮ್ಮೆ ಆಶೀರ್ವಾದ ಮಾಡಿದರೆ ದುಪ್ಪಟ್ಟು ಅಭಿವೃದ್ಧಿ: ರಮಾನಾಥ ರೈ ಭರವಸೆ

Thursday, April 26th, 2018
bantwala

ಬಂಟ್ವಾಳ: ಚುನಾವಣಾ ಪ್ರಚಾರಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಎ.27ರಂದು ಬೆಳಗ್ಗೆ 10ಕ್ಕೆ ಬಂಟ್ವಾಳದ ಬಿ.ಸಿ.ರೋಡ್‌ಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಬಂಟ್ವಾಳ ವಿಧಾನಸಬಾ ಕ್ಷೇತ್ರದ ಕಾಂಗ್ರೆಸ್ ಅ್ಯರ್ಥಿ ಬಿ.ರಮಾನಾಥ ರೈ ತಿಳಿಸಿದ್ದಾರೆ. ಗುರುವಾರ ಬಿ.ಸಿ.ರೋಡ್‌ನಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಎ.27ರಂದು ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಮೊಡಂಕಾಪು ಶಾಲಾ ಮೈದಾನಕ್ಕೆ ಆಗಮಿಸಿ, ನಂತರ ಬಿ.ಸಿ.ರೋಡ್ ಸರ್ಕಲ್ ಸಮೀಪ ಗೋಲ್ಡನ್ ಮೈದಾನದಲ್ಲಿ ನಡೆಯುವ ಬಹಿರಂಗ ಸಬೆಯನ್ನುದ್ದೇಶಿಸಿ […]

ಸೋಮವಾರ ಬಿಜೆಪಿಯಲ್ಲಿದ್ದ ಕಮಲ ನಾಯಕ ಬುಧವಾರ ‘ಕೈ’ಗೆ ಜಂಪ್‌!

Wednesday, April 25th, 2018
siddaramaih

ಗಂಗಾವತಿ: ಈ ಹಿಂದೆ ಸಂಸದನಾಗಿ ಆಯ್ಕೆಯಾಗಿ ಐದು ವರ್ಷ ರಾಜಕೀಯ ಅಧಿಕಾರ ನೀಡಿದ ಪಕ್ಷವನ್ನು ಬಿಡಲಾರೆ ಎಂದು ಹೇಳಿಕೆ ನೀಡಿದ ಮಾರನೇ ದಿನವೇ ಕಮಲ ನಾಯಕರೊಬ್ಬರು ‘ಕೈ’ ಪಕ್ಷಕ್ಕೆ ಜಂಪಾಗಿದ್ದಾರೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಸ್.ಶಿವರಾಮಗೌಡ, ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿಲ್ಲ ಎಂದು ಅಸಮಾಧಾನಗೊಂಡು ಈಗ ಕಮಲ ಪಕ್ಷಕ್ಕೆ ಗುಡ್‌‌ಬೈ ಹೇಳಿ ಕಾಂಗ್ರೆಸ್ ತೆಕ್ಕೆಗೆ ಜಾರಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. […]

ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Tuesday, April 24th, 2018
siddaramaih

ಬಾಗಲಕೋಟೆ: ಬಾದಾಮಿ ಮತ್ತು ಚಾಮುಂಡೇಶ್ವರಿ ಮತ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನನಗೆ ಜನರ ಆಶೀರ್ವಾದ ಇದೆ. ಯಾವುದೇ ಸೋಲಿನ ಭೀತಿ ಕಾಡುತ್ತಿಲ್ಲ. ಬಿಜೆಪಿಯವರಿಗೆ ಸೋಲಿನ ಭೀತಿ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಾನು ಕೊಪ್ಪಳದಿಂದಲೂ ಎಂಪಿ ಸ್ಥಾನಕ್ಕೆ ಸ್ಪರ್ಧಿಸಿದ್ದೆ. ಈ ಬಾರಿ ಈ ಭಾಗದ ಜನರು ಇಲ್ಲಿಂದ ನಿಲ್ಲುವಂತೆ ಒತ್ತಾಯಿಸಿದ್ರು. ಅಲ್ಲದೆ ಹೈಕಮಾಂಡ್‌ ಮೇಲೂ ಒತ್ತಡ ತಂದಿದ್ರು. ಹೀಗಾಗಿ ಬಾದಾಮಿ ಮತಕ್ಷೇತ್ರದಿಂದ ಸ್ಪರ್ಧೆ […]

ನಾನೇ ನಿಜವಾದ ಹಿಂದೂ, ಶಾ ಅಲ್ಲ: ಸಿಎಂ

Saturday, April 21st, 2018
siddaramaih-files

ಮೈಸೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹಿಂದೂವಲ್ಲ. ನಾನೇ ನಿಜವಾದ ಹಿಂದೂ ಎಂದು ಸಿಎಂ ಸಿದ್ದರಾಮಯ್ಯ ಮತ್ತೆ ಪ್ರತಿ ಪಾದಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು,ಅಮಿತ್‌ ಶಾ ಕರ್ನಾಟಕಕ್ಕೆ ಬಂದು ಸಿದ್ದರಾಮಯ್ಯ ಅಹಿಂದು ಅಂತಾರೆ, ಆದರೆ ಅಮಿತ್‌ ಶಾ ಹಿಂದೂವೇ ಅಲ್ಲ. ಅವರು ಜೈನರು.ಅವರು ಹಿಂದೂ ವೈಷ್ಣವ ಅನ್ನುವುದೆಲ್ಲ ಸುಳ್ಳು. ಬೇಕಿದ್ದರೆ ದಾಖಲೆ ತೆಗಿಸಿ ನೋಡಿ. ಇವರೆಲ್ಲರಿಗಿಂತ ನಾನು ಬೆಟರ್‌ ಹಿಂದೂ. ನನಗೆ ಮನುಷ್ಯತ್ವ, ಮಾನವೀಯ ಮೌಲ್ಯಗಳಲ್ಲಿ ನಂಬಿಕೆ […]

ನೀತಿ ಸಂಹಿತೆ ನೆಪದಲ್ಲಿ ಅಧಿಕಾರಿಗಳಿಂದ ಅತಿರೇಕದ ವರ್ತನೆ: ಐವನ್ ವಿರೋಧ

Monday, April 16th, 2018
ivan-desouza

ಮಂಗಳೂರು: ಮಾದರಿ ನೀತಿ ಸಂಹಿತೆಯ ನೆಪದಲ್ಲಿ ದ.ಕ. ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಅಧಿಕಾರಿಗಳು ಅತಿರೇಕದ ವರ್ತನೆ ತೋರುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಐವನ್ ಡಿಸೋಜ ಹೇಳಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡುಬಿದಿರೆಯಲ್ಲಿ ಇತ್ತೀಚೆಗೆ ಅಂಬೇಡ್ಕರ್ ದಿನಾಚರಣೆ ಸಂದರ್ಭ ಸಂಘಟನೆಯೊಂದು ಈ ಹಿಂದೆ ವೈದ್ಯರಿಂದ ತಪಾಸಣೆಗೊಳಪಟ್ಟು ಕನ್ನಡಕಕ್ಕೆ ಸೂಚನೆ ನೀಡಿದ್ದವರಿಗೆ ಕನ್ನಡ ವಿತರಿಸಲು ಮುಂದಾದಾಗ ಅಧಿಕಾರಿಗಳು ಅಡ್ಡಿ ಪಡಿಸಿದ್ದಾರೆ. ಮದುವೆ ಸಮಾರಂಭ, ಚಿನ್ನ ಖರೀದಿ, […]

ಎ.12ರಂದು ಕಾಂಗ್ರೆಸ್ ನ ಅಭ್ಯರ್ಥಿಗಳ ಪಟ್ಟಿ ಪ್ರಕಟ

Monday, April 9th, 2018
rahul-gandhi

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ನ ಸ್ಕ್ರೀನಿಂಗ್ ಸಮಿತಿ ಸಭೆ ಸೋಮವಾರ ಹೊಸದಿಲ್ಲಿಯಲ್ಲಿ ನಡೆಯಲಿದೆ. ಸ್ಕ್ರೀನಿಂಗ್ ಸಮಿತಿ ಅಧ್ಯಕ್ಷ ಮಧುಸೂಧನ ಮಿಸ್ತ್ರೀ ಅಧ್ಯಕ್ಷೆಯಲ್ಲಿ ನಡೆಯಲಿರುವ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಅರ್ಜಿಯ ಪರಿಶೀಲನೆ ನಡೆಯಲಿದೆ. ಎರಡು ದಿನಗಳ ಸಭೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ , ಕೆಪಿಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂ ರಾವ್, ಎಸ್ ಆರ್ ಪಾಟೀಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ವಿವಿಧ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಎರಡು ದಿನಗಳ […]