Blog Archive

ಧರ್ಮಸ್ಥಳ ಕನ್ಯಾಡಿಯಲ್ಲಿ ರಾಷ್ಟ್ರೀಯ ಧರ್ಮಸಂಸದ್​ ವೈಭವದ ಶೋಭಯಾತ್ರೆ

Monday, September 3rd, 2018
darmastala

ಮಂಗಳೂರು: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಕನ್ಯಾಡಿಯಲ್ಲಿ ರಾಷ್ಟ್ರೀಯ ಧರ್ಮಸಂಸದ್ ಪ್ರಯುಕ್ತ ವೈಭವದ ಶೋಭಯಾತ್ರೆ ನಡೆಯಿತು. ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಸ್ವಾಮೀಜಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ ದಶಮಾನೋತ್ಸವ ಪ್ರಯುಕ್ತ ಈ ರಾಷ್ಟ್ರೀಯ ಧರ್ಮಸಂಸದ್ ನಡೆಯುತ್ತಿದೆ. ಇದರಂಗವಾಗಿ ಉಜಿರೆಯಿಂದ ಕನ್ಯಾಡಿಯವರೆಗೆ ಶೋಭಯಾತ್ರೆ ನಡೆಯಿತು. ಧರ್ಮಸಂಸದ್ಗೆ ಸಾಧುಸಂತರು, ಯತಿವರ್ಯರು , ಮಹಾಮಂಡಲೇಶ್ವರರು, ಧರ್ಮ ಪೀಠಾಧೀಶ್ವರರು ಸೇರಿದಂತೆ ಸಾವಿರಾರು ಮಂದಿ ಶೋಭಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ಧರ್ಮಸಂಸದ್ ಉದ್ಘಾಟನೆಗೊಳ್ಳಲಿದ್ದು , ರಾತ್ರಿಯವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಮಳೆ ಹಾನಿಯೂ ಸಾಕಷ್ಟು ಆಗಿದೆ..ಇದಕ್ಕೆ ಸೂಕ್ತ ಪರಿಹಾರ ಕೈಗೊಳುತ್ತೆವೆ: ಕುಮಾರಸ್ವಾಮಿ

Tuesday, August 14th, 2018
kumarswamy-2

ಮಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. 15 ವರ್ಷದ ಬಳಿಕ ಮಳೆ ವಾಡಿಕೆಗಿಂತ ಹೆಚ್ಚಾಗಿದ್ದು, ಮಳೆ ಹಾನಿಯೂ ಸಾಕಷ್ಟು ಆಗಿದೆ. ಈಗಾಗಲೇ ಪರಿಹಾರವನ್ನೂ ನೀಡಿದ್ದೇವೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದರು. ಶ್ರಾವಣದ ಮೊದಲ ಸೋಮವಾರದಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಅವರು ಮಾಧ್ಯಮದವರ ಜತೆ ಮಾತನಾಡಿ, ಜಿಲ್ಲಾವಾರು ಮಳೆ ಹಾನಿ ಸಭೆ ನಡೆಸಲು ನೀತಿ ಸಂಹಿತೆ ಸಮಸ್ಯೆ ಇದೆ. ಹಾಗಾಗಿ ಜಿಲ್ಲೆಯ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಸೂಕ್ತ ಪರಿಹಾರ ನೀಡುವ ಭರವಸೆ ನೀಡುತ್ತೇನೆ ಎಂದರು. 75%ಕ್ಕಿಂತ ಅಧಿಕ ಹಾನಿಯಾದ ಮನೆಗಳನ್ನು […]

ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಕುಮಾರಸ್ವಾಮಿ ಕುಟುಂಬ..!

Tuesday, August 14th, 2018
kumarswamy

ಮಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಒಂದು ದಿನದ ಮುಂಚೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಧರ್ಮಸ್ಥಳ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿದ್ದರು. ಇಂದು ಕುಟುಂಬ ಸಮೇತರಾಗಿ ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರದಲ್ಲಿ ದರ್ಶನ ಪಡೆದರು. ಹಾಸನದಿಂದ ರಸ್ತೆ ‌ಮಾರ್ಗವಾಗಿ ಧರ್ಮಸ್ಥಳಕ್ಕೆ ಬಂದ ಸಿಎಂ ಕುಮಾರಸ್ವಾಮಿ, ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿಯವರ ಕುಟುಂಬ ಆಗಮನದ ವೇಳೆ ದೇವಾಲಯದ ವತಿಯಿಂದ ಸ್ವಾಗತಿಸಲಾಯಿತು. ಮಾಜಿ ಪ್ರಧಾನಿ ದೇವೆಗೌಡ, ತಾಯಿ ಚೆನ್ನಮ್ಮ ಹಾಗೂ ಪತ್ನಿ ಅನಿತಾ ಕುಮಾರಸ್ವಾಮಿಯವರೊಂದಿಗೆ ದೇವರ ದರ್ಶನ ಪಡೆದು […]

ಬೆಳ್ತಂಗಡಿ ಕೆಎಸ್ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು

Monday, August 6th, 2018
Belthangady Accident

ಮಂಗಳೂರು : ಬೆಳ್ತಂಗಡಿ ತಾಲೂಕಿನ ಕೌಕ್ರಾಡಿ ಬಳಿ ಬೆಂಗಳೂರು ಕಡೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿಗೆ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಯಿಂದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಧರ್ಮಸ್ಥಳ ನಿವಾಸಿಗಳಾದ ದಿನೇಶ್(32) ಹಾಗೂ ಸಂದೇಶ್(30) ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಈ ಇಬ್ಬರು ತೀವ್ರವಾಗಿ ಗಾಯಗೊಂಡು ನರಳಾಡುತ್ತಿದ್ದರು. ಅವರನ್ನು ಸ್ಥಳೀಯ ಯುವಕರು ಹರಸಾಹಸಪಟ್ಟು ಕಾರಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ದಿನೇಶ್ ಮತ್ತು ಸಂದೇಶ ಅಸುನೀಗಿದ್ದಾರೆ. […]

ಸ್ವಚ್ಚ ಗೆಳತಿ ಅಭಿಯಾನ

Saturday, July 28th, 2018
swach-gelati

ಮಂಗಳೂರು: ಜುಲೈ ಎಸ್.ಡಿ.ಎಂಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸ್ವಚ್ಚ ಭಾರತ್ ಮಿಶನ್, ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಧರ್ಮಸ್ಥಳ, ಉಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲ್ಲಿ ಸ್ವಚ್ಚ ಗೆಳತಿ ಅಭಿಯಾನಕ್ಕೆ ದೀಪ ಬೆಳಗಿಸುವುದರ ಮೂಲಕ ಉದ್ಯುಕ್ತ ಚಾಲನೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪದ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಹಾಗೂ ಶಾಲಾ […]

ಚಂದ್ರ ಗ್ರಹಣದ ಹಿನ್ನೆಲೆ..ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನದಲ್ಲಿ ಬದಲಾವಣೆ!

Friday, July 27th, 2018
kukke-subramanya

ಮಂಗಳೂರು: ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಪುಣ್ಯ ಕ್ಷೇತ್ರಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನದಲ್ಲಿ ಬದಲಾವಣೆ ಮಾಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಜೆ 7ರ ನಂತರ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಇಲ್ಲ ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ. ಪ್ರತಿನಿತ್ಯ 7.30ಕ್ಕೆ ನಡೆಯುತ್ತಿದ್ದ ಮಹಾಪೂಜೆಯನ್ನು ಇಂದು 6.30ಕ್ಕೆ ನಿಗದಿಪಡಿಸಲಾಗಿದೆ. 7 ಗಂಟೆ ನಂತರ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಇಂದು ಸಂಜೆ ನಡೆಯಬೇಕಿದ್ದ ಆಶ್ಲೇಷ ಪೂಜೆಯನ್ನು ರದ್ದುಗೊಳಿಸಲಾಗಿದೆ. ಅಷ್ಟೆ ಅಲ್ಲದೆ ದೇವಾಲಯದಲ್ಲಿ ಇಂದು ರಾತ್ರಿ ಅನ್ನಪ್ರಸಾದವಿರುವುದಿಲ್ಲ ಎಂದು […]

ಕಸದರಾಶಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Wednesday, July 25th, 2018
body-died

ಪೆರಿಯಶಾಂತಿ : ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೊಕ್ಕಡ ಸಮೀಪದ ಕಾಪಿನಬಾಗಿಲಿನಲ್ಲಿ ಕಸದರಾಶಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಬೇರೆಡೆ ಕೊಲೆ ಮಾಡಿ ಇಲ್ಲಿ ತಂದು ಪ್ಲಾಸ್ಟಿಕ್ನಲ್ಲಿ ಸುತ್ತಿ ಕಸದರಾಶಿಗೆ ಹಾಕಿರುವ ಶಂಕೆ ವ್ಯಕ್ತವಾಗಿದೆ. ಪ್ಯಾಂಟ್ ಕಿಸೆಯಲ್ಲಿ ಮಂಡ್ಯದ ವಿಸಿಟಿಂಗ್ ಕಾರ್ಡ್ಗಳು ಪತ್ತೆಯಾಗಿವೆ. ಆಸುಪಾಸಿನಲ್ಲಿ ದುರ್ವಾಸನೆ ಬಂದು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ.ಉಪ್ಪಿನಂಗಡಿ ಪೊಲೀಸರು ತನಿಖೆ ಮುಂದುವರಿಸಿದ್ದು, ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳದ ನಿತ್ಯಾನಂದ ನಗರದಲ್ಲಿ ಸೆ. 3 ರಂದು ನಡೆಯುವ ಧರ್ಮ ಸಂಸದ್​ಗೆ ಪೂರ್ವ ತಯಾರಿ..!

Thursday, July 12th, 2018
kanyad-shree

ಮಂಗಳೂರು: ಧರ್ಮಸ್ಥಳದ ನಿತ್ಯಾನಂದ ನಗರದಲ್ಲಿ ಸೆ. 3 ರಂದು ನಡೆಯುವ ಧರ್ಮ ಸಂಸದ್ಗೆ ಪೂರ್ವ ತಯಾರಿ ಭರದಿಂದ ಸಾಗುತ್ತಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈಗಾಗಲೇ ಉತ್ತರ ಭಾರತ ಮತ್ತು ದಕ್ಷಿಣ ಭಾರತ ಪ್ರವಾಸವನ್ನು ಕೈಗೊಳ್ಳಲಾಗಿದ್ದು, 25 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದ್ದಾರೆ. ಸೆ . 2 ರಂದು ಹಿಮಾಲಯ ಹಾಗೂ ಭಾರತದ ವಿವಿಧ ಭಾಗಗಳಿಂದ ಸಾಧು-ಸಂತರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಸೆ. 3 […]

ಪ್ರಕೃತಿ ಚಿಕಿತ್ಸೆಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ, ಬೆಂಗಳೂರಿಗೆ ಪ್ರಯಾಣ

Thursday, June 28th, 2018
siddaramaiah

ಉಜಿರೆ: ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಇದೇ 16 ರಿಂದ 28ರ ವರೆಗೆ ಸಾಧಕರಾಗಿ ಶುಶ್ರೂಷೆ ಪಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡರು. ಗುರುವಾರ ಬೆಳಿಗ್ಗೆ ಹನ್ನೊಂದು ಗಂಟೆ ವರೆಗೆ ಎಂದಿನಂತೆ ಶುಶ್ರೂಷೆ ಪಡೆದು ಬಳಿಕ ಶ್ರೀ ಸನ್ನಿಧಿ ಅತಿಥಿ ಗೃಹಕ್ಕೆ ಬಂದರು. ಅಲ್ಲಿಂದ 12 ಗಂಟೆಗೆ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಬಂದು ಶತರುದ್ರಾಭಿಷೇಕ ಸೇವೆ ಸಲ್ಲಿಸಿದರು. ಬಳಿಕ ಶ್ರೀ ಸನ್ನಿಧಿಯಲ್ಲಿ ಭೋಜನ ಸ್ವೀಕರಿಸಿ ಮಂಗಳೂರಿಗೆ ಹೋದರು. ಮಾಜಿ ಶಾಸಕ ಕೆ. ಅಭಯಚಂದ್ರ ಜೈನ್ […]

ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ…11 ದಿನಗಳಲ್ಲಿ 3 ಕೆ.ಜಿ. ತೂಕ ಇಳಿಸಿಕೊಂಡ ಸಿದ್ದರಾಮಯ್ಯ!

Wednesday, June 27th, 2018
siddaramaih

ಬೆಳ್ತಂಗಡಿ: ಧರ್ಮಸ್ಥಳದ ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಯಲಯದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 11 ದಿನಗಳಲ್ಲಿ 3 ಕೆ.ಜಿ. ತೂಕ ಇಳಿಸಿಕೊಂಡಿದ್ದಾರೆ. 12 ದಿನಗಳ ಪ್ರಕೃತಿ ಚಿಕಿತ್ಸೆಗಾಗಿ ದಾಖಲಾಗಿರುವ ಸಿದ್ದರಾಮಯ್ಯ ಇಂದು ಕೊನೆಯ ದಿನದ ಚಿಕಿತ್ಸೆ ಪಡೆಯಲಿರುವ ಅವರು ಗುರುವಾರ ಬೆಳಗ್ಗೆ 10 ಗಂಟೆಗೆ ಚಿಕಿತ್ಸಾಲಯದಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಅಲ್ಲಿಂದ ಅವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.