ಬಿಜೆಪಿ-ಕಾಂಗ್ರೆಸ್ ನಾಯಕರು ಮಾತುಕತೆ ನಡೆಸಬಾರದಾ: ಸಿ.ಟಿ. ರವಿ
Tuesday, September 11th, 2018ಬೆಂಗಳೂರು: ಮಾತುಕತೆ ಭಾರತ ಮತ್ತು ಪಾಕಿಸ್ತಾನ ಮಧ್ಯೆಯೂ ನಡೆಯುತ್ತದೆ. ಅಂತಹದ್ದರಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರು ಮಾತುಕತೆ ನಡೆಸಬಾರದಾ? ಎಂದು ಶಾಸಕ ಸಿ.ಟಿ. ರವಿ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಶಾಸಕ ಶ್ರೀರಾಮುಲು ಅವರು ಜಾರಕಿಹೊಳಿ ಸಹೋದರರ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನುವ ಸುದ್ದಿಗೆ ಪ್ರತಿಕ್ರಿಯಿಯಿಸಿದರು. ಸರ್ಕಾರವನ್ನು ನಾವು ಬೀಳಿಸುವ ಪ್ರಯತ್ನ ಮಾಡುವುದಿಲ್ಲ. ಅವಕಾಶ ಬಂದಾಗ ಕಣ್ಮುಚ್ಚಿ ಕುಳಿತುಕೊಳ್ಳುವ ಮೂರ್ಖರು ನಾವಲ್ಲ. ಸರ್ಕಾರವೇ ತನ್ನ ಆಂತರಿಕ ಕಿತ್ತಾಟದಿಂದ ಪತನವಾಗುತ್ತದೆ ಎಂದರು. ಬಿಜೆಪಿ ಅಧಿಕಾರಕ್ಕೆ […]