Blog Archive

ಚುನಾವಣಾ ಕಣದಿಂದ ಹಿಂದೆ ಸರಿದ ಶಿರೂರು ಶ್ರಿಗಳು

Friday, April 27th, 2018
shiroor-shri

ಉಡುಪಿ: ಉಡುಪಿ ವಿಧಾನಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶಿರೂರು ಲಕ್ಷ್ಮೀವರ ತೀರ್ಥ ಶ್ರಿಗಳು ಕಣದಿಂದ ಹಿಂದೆ ಸರಿದಿದ್ದಾರೆ. ಕೇಂದ್ರ ಬಿಜೆಪಿ ನಾಯಕರು ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಮತ್ತು ನರೇಂದ್ರ ಮೋದಿ, ಅಮಿತ್ ಶಾಗೆ ಬೆಂಬಲ‌ ನೀಡುವ ಉದ್ದೇಶದಿಂದ ನಾಮಪತ್ರ ಹಿಂಪಡೆದಿರುವುದಾಗಿ ಶ್ರೀಗಳು ತಿಳಿಸಿದ್ದಾರೆ. ಪ್ರಧಾನಿ ಮೋದಿ ಉಡುಪಿಗೆ ಬರುವುದರಿಂದ ತಮ್ಮಿಂದಾಗಿ ಬಿಜೆಪಿಯ ಧ್ಯೇಯ ಚಿಂತನೆಗಳಿಗೆ ತೊಡಕುಂಟಾಗಬಾರದು ಎಂಬ ಉದ್ದೇಶದಿಂದ ಚುನಾವಣೆಯಿಂದ ಹಿಂದೆ ಸರಿದಿದ್ದಾಗಿ ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಸರ್ವಧರ್ಮ ಸಮನ್ವಯತೆ ಮೆರೆದ ವಿನಯ್ ಕುಮಾರ್ ಸೊರಕೆ

Monday, April 23rd, 2018
vinay-kumar

ಕಾಪು: ನಾಮಪತ್ರ ಸಲ್ಲಿಕೆಗೂ ಮುನ್ನ ಕಾಪು ಕಾಂಗ್ರೆಸ್ ಅಭ್ಯರ್ಥಿ ಕಾಪು ಶಾಸಕ ವಿನಯ್ ಕುಮಾರ್ ಸೊರಕೆಯವರು ಸರ್ವಧರ್ಮ ದ ಮುಖಂಡರನ್ನು ಭೇಟಿ ಮಾಡಿ ದೇವಸ್ಥಾನ, ಚರ್ಚ್ , ಮಸೀದಿಯಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಮಂಗಳೂರು ಕದ್ರಿ ಮಂಜುನಾಥೇಶ್ವರ ದೇವರಿಗೆ ಪೂಜೆ ಸಲ್ಲಿಸಿದ ಮೊದಲು ಪೂಜೆ ಸಲ್ಲಿಸಿದ ವಿನಯ್ ಕುಮಾರ್ ಸೊರಕೆ ಯವರು ಪಡುಬಿದ್ರಿ ನಾಗ ಬ್ರಹ್ಮ ಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಕಾಪು ಜನಾರ್ದನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ , ಕಾಪು ಮಾರಿಗುಡಿಯಲ್ಲಿ ಪ್ರಾರ್ಥಿಸಿದರು. […]

ಜಾಲತಾಣಗಳಲ್ಲಿ ಯುವತಿರೊಂದಿಗಿನ ಸೆಲ್ಫಿ ವೈರಲ್, ಹೋಮ್ ಗಾರ್ಡ್ ಪರಾರಿ

Saturday, March 17th, 2018
homeguard

ಉಡುಪಿ: ಯುವಕನೋರ್ವ ಹತ್ತಾರು ಯುವತಿಯರೊಂದಿಗೆ ತೆಗೆಸಿಕೊಂಡ ಸೆಲ್ಪಿ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈತ ಕಾರ್ಕಳ ತಾಲೂಕಿನ ಹೋಮ್ ಗಾರ್ಡ್ ಎಂದು ಹೇಳಲಾಗಿದ್ದು ಈತ 10ಕ್ಕೂ ಹೆಚ್ಚು ಯುವತಿಯರನ್ನು ಯಾಮಾರಿಸಿದ್ದಾನೆ ಎಂದು ಆರೋಪಿಸಲಾಗಿದೆ.ಈತನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು ಈ ಪ್ರಸಂಗದ ಕುರಿತು ತನಿಖೆ ನಡೆಸಬೇಕೆಂದು ಒತ್ತಾಯಿಸಲಾಗಿದೆ. ಯುವತಿಯರೊಂದಿಗೆ ಸೆಲ್ಫಿ ಪೋಟೋಗಳಲ್ಲಿ ಇರುವ ಯುವಕ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಂದಳಿಕೆಯ ಮಂಜರಪಲ್ಕೆ ನಿವಾಸಿ ಸುಜಿತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈತ ನಿಟ್ಟೆ […]

ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಬಂಧನ ವಾರಂಟ್

Saturday, March 10th, 2018
priyanka-mary

ಉಡುಪಿ: ಭೂ ಕಬಳಿಕೆ ಹಾಗೂ ಒತ್ತುವರಿ ವಿಚಾರವಾಗಿ ಬೆಂಗಳೂರಿನ ವಿಶೇಷ ನ್ಯಾಯಾಲಯ ಉಡುಪಿ ಜಿಲ್ಲಾಧಿಕಾರಿಗೆ ಬಂಧನ ವಾರೆಂಟ್ ಜಾರಿಗೊಳಿಸಿದೆ. ಭೂ ಕಬಳಿಕೆ ಹಾಗೂ ಒತ್ತುವರಿ ವಿಚಾರವಾಗಿ ಉಡುಪಿ ಜಿಲ್ಲಾಧಿಕಾರಿ ನ್ಯಾಯಾಲಯದ ಆದೇಶ ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ಬಂಧನ ವಾರಂಟ್ ಜಾರಿ ಮಾಡಲಾಗಿದೆ. ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆಯಡಿ ಸ್ಥಾಪಿಸಲಾದ ಈ ನ್ಯಾಯಾಲಯವು ಜಿಲ್ಲೆಯಲ್ಲಿ ನಡೆದ ಭೂ ಒತ್ತುವರಿ, ಕೆರೆ ಒತ್ತುವರಿ ಬಗ್ಗೆ ಜಿಲ್ಲಾಡಳಿತ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ಕೇಳಿತ್ತು. ಆದರೆ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ […]

ಸುಳ್ಳು ಹೇಳೊದರಲ್ಲಿ ಕಾಂಗ್ರೆಸಿಗರು ನಿಸ್ಸೀಮರು: ಶೋಭಾ

Wednesday, March 7th, 2018
shobha-karandlaje

ಕಾಪು: ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು. ಚುನಾವಣೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಗಳನ್ನು ಮಾಡಲಾಗುತ್ತಿದೆ. ಇದು ಪಿತೂರಿ. ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಕಾಪುವಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ಯೋಗಿ ಆದಿತ್ಯನಾಥರ ವಿರುದ್ಧವೂ ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಯೋಗಿ ಉತ್ತರ ಪ್ರದೇಶದಲ್ಲಿ ದರೋಡೆಕೋರರು ಹಾಗೂ ಕ್ರಿಮಿನಲ್‌ಗಳ ಹೆಡೆಮುರಿ ಕಟ್ಟಿದ್ದಾರೆ. ಆದರೆ ರಾಜ್ಯದಲ್ಲಿ ಕೆಎಫ್‌ಡಿ ಹಾಗೂ ಪಿಎಫ್‌ಐ ಕಾರ್ಯಕರ್ತರನ್ನು ಬಿಡುಗಡೆ ಮಾಡಲಾಗುತ್ತದೆ. ಇದೇ […]

ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ: ಮನೇಕಾ ಗಾಂಧಿ

Tuesday, March 6th, 2018
menaka-gandhi

ಉಡುಪಿ: ಮಹಿಳೆಯರ ನೋವುಗಳಿಗೆ ಸ್ಪಂದಿಸಿ ಸುರಕ್ಷತೆಯನ್ನು ಒದಗಿಸುವ ನಿಟ್ಟಿನಲ್ಲಿ ವನ್ ಸ್ಟಾಪ್ ಸೆಂಟರ್ ‘ಸಖಿ’ಯನ್ನು ಆರಂಭಿಸುವ ಯೋಜನೆಯನ್ನು ಕೇಂದ್ರ ಸರಕಾರ ಪ್ರಾರಂಭಿಸಿದ್ದು, ಈವರೆಗೆ ದೇಶದಲ್ಲಿ ಒಟ್ಟು 171 ಕೇಂದ್ರಗಳು ಕಾರ್ಯಾಚರಿಸುತ್ತಿವೆ. ಕರ್ನಾಟಕದಲ್ಲಿ ಪ್ರಥಮ ಕೇಂದ್ರ ಉಡುಪಿಯಲ್ಲಿ ಉದ್ಘಾಟನೆಗೊಂಡಿದ್ದು, ಇಲ್ಲಿ ಮಹಿಳೆಯ ಸುರಕ್ಷತೆಗೆ ಅಗತ್ಯ ವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮನೇಕಾ ಗಾಂಧಿ ಹೇಳಿದ್ದಾರೆ. ನಗರದ ನಿಟ್ಟೂರಿನಲ್ಲಿ 37.50 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ರಾಜ್ಯದ ಮೊದಲ ‘ಸಖಿ’ […]

ಉಡುಪಿಯಲ್ಲಿ ಮಾನಸಿಕ ಅಸ್ವಸ್ಥನ ರಂಪಾಟ, ಉಗ್ರ ಪ್ರತಾಪ

Saturday, February 24th, 2018
udupi

ಉಡುಪಿ: ನಗರದ ಮಲ್ಪೆ, ವಡಭಾಂಡೇಶ್ವರ, ಹೂಡಿ, ಆದಿಉಡುಪಿಯ ಸಾರ್ವಜನಿಕ ಸ್ಥಳಗಳಲ್ಲಿ ಅಪರಿಚಿತ ಮಾನಸಿಕ ರೋಗಿಯೊರ್ವ ಸಾರ್ವಜನಿಕರ ಮೇಲೆ ಹಲ್ಲೆ ಮಾಡುತ್ತಾ, ಸಾರ್ವಜನಿಕ ಸೊತ್ತುಗಳನ್ನು ನಾಶ ಮಾಡುತ್ತಾ, ಪರಿಸರದಲ್ಲಿ ಉಗ್ರಪ್ರತಾಪ ತೋರಿದ್ದಾನೆ. ಸುಮಾರು 30 ವರ್ಷದ ಈ ಯುವಕನನ್ನು ಈಗ ಕಾನೂನು ಪ್ರಕ್ರಿಯೆ ಮೂಲಕ ಧಾರವಾಡದ ಮಾನಸಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವ್ಯಕ್ತಿಯ ರಂಪಾಟಕ್ಕೆ ಮಲ್ಪೆ ಮತ್ತು ಆಸುಪಾಸಿನ ಪರಿಸರದಲ್ಲಿ ಬಹಳಷ್ಟು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದ್ದರು. ಸಾರ್ವಜನಿಕರ ತಲೆಗೆ ಗುರಿ ಇಟ್ಟು ಕಲ್ಲು ಹೊಡೆಯುವುದು, ಸೋಡಾ […]

ಬೆಂಗಳೂರಿನ ಮಹಿಳೆ ನಾಪತ್ತೆ

Friday, February 23rd, 2018
bangaluru

ಉಡುಪಿ: ಬೆಂಗಳೂರಿನ ಹೇಸರಘಟ್ಟ ಸಿಲ್ಬೇಪುರದ ನಿವಾಸಿ ಭವಾನಿ (37) ಎಂಬವರು ಫೆ.16ರಂದು ಅವರ ಪತಿ ಎ.ಪಿ.ರಾಜ್ ಜೊತೆ ಚಿಕಿತ್ಸೆ ಗಾಗಿ ಮಣಿಪಾಲ ಆಸ್ಪತ್ರೆಗೆ ಬಂದವರು ಫೆ.17 ಸಂಜೆ 6:30ರಿಂದ ಕಾಣೆಯಾಗಿದ್ದಾರೆ. ಗೋಧಿ ಮೈಬಣ್ಣ, ದುಂಡು ಮುಖ, ದೃಢಕಾಯ ಮೈಕಟ್ಟು, 5.5 ಅಡಿ ಎತ್ತರ ಹೊಂದಿರುವ ಇವರು ಕೆಂಪು ಬಣ್ಣದ ಚೂಡಿದಾರ ಧರಿಸಿದ್ದಾರೆ. ಕನ್ನಡ ಭಾಷೆಯನ್ನು ಮಾತನಾಡುತ್ತಾರೆ. ಇವರನ್ನು ಕಂಡಲ್ಲಿ ಮಣಿಪಾಲ ಠಾಣೆ: 0820-2570328 ಅಥವಾ ಪೊಲೀಸ್ ನಿರೀಕ್ಷಕರು ಮಣಿಪಾಲ ಠಾಣೆ: 9480805448 ಅಥವಾ ಪೊಲೀಸ್ ಉಪ ನಿರೀಕ್ಷಕರು ಮಣಿಪಾಲ […]

ಉಡುಪಿ ಕೃಷ್ಣನ ದರ್ಶನ ಪಡೆದ ಶಾ… ಪಲಿಮಾರು ಮಠದ ಛತ್ರ ಉದ್ಘಾಟನೆ

Wednesday, February 21st, 2018
krishna-mutt

ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿ, ಪಲಿಮಾರು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಪಲಿಮಾರು ಶ್ರೀಗಳು ಶಾ ಅವರನ್ನು ಮಠಕ್ಕೆ ಬರ ಮಾಡಿಕೊಂಡರು. ಕನಕನ ಕಿಂಡಿ ಹಾಗೂ ನವಗ್ರಹ ಕಿಂಡಿ ಮೂಲಕ ಕೃಷ್ಣನ ದರುಶನ ಪಡೆದರು. ಶಾ, ಪಲಿಮಾರು ಶ್ರೀಗಳಿಗೆ ಶಾಲು ಹೊದಿಸಿ ತುಳಸಿ ಮಾಲೆ ತೊಡಸಿ, ಶ್ರೀಗಳಿಂದ ಅನುಗ್ರಹ ಪಡೆದರು. ಬಳಿಕ ಅವರು ಪಲಿಮಾರು ಮಠದ ಛತ್ರ ಉದ್ಘಾಟಿಸಿದರು.

ಮಾರ್ಚ್ ಮೊದಲ ವಾರದಲ್ಲಿ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿರುವ ರಾಹುಲ್ ಗಾಂಧಿ

Thursday, February 15th, 2018
karavali

ಮಂಗಳೂರು : ನಾಲ್ಕು ದಿನಗಳ ಹೈದರಾಬಾದ್ ಕರ್ನಾಟಕ ಪ್ರವಾಸ ಮುಗಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು, ಎರಡನೇ ಹಂತದಲ್ಲಿ ಫೆ.24ರಿಂದ ಮೂರು ದಿನಗಳ ಮುಂಬೈ ಕರ್ನಾಟಕದಲ್ಲಿ ಸಂಚರಿಸಿದ ನಂತರ, ಮೂರನೇ ಹಂತದಲ್ಲಿ ಮಾರ್ಚ್ ನಲ್ಲಿ ಕರಾವಳಿಗೆ ಕಾಲಿಡಲಿದ್ದಾರೆ. ಮಾರ್ಚ್ ತಿಂಗಳ ಮೊದಲ ವಾರದಲ್ಲಿ ರಾಹುಲ್ ಗಾಂಧಿ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ನಡೆಸಲಿದ್ದಾರೆ. 4 ದಿನಗಳ ಕಾಲ ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿರುವ ರಾಹುಲ್ ಗಾಂಧಿ ಅಲ್ಲಲ್ಲಿ ರೋಡ್ ಶೋ, ಸಾರ್ವಜನಿಕರ ಸಭೆಗಳಲ್ಲಿ […]