Blog Archive

ಗದಗ ಜಿಲ್ಲೆ ನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧಿಕಾರ ಸ್ವೀಕಾರ

Tuesday, August 7th, 2018
Gadag Dc

ಗದಗ : ಹುಬ್ಬಳ್ಳಿ ಧಾರವಾಡ ಬಿ.ಆರ್.ಟಿ.ಎಸ್. ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಆಯ.ಎ.ಎಸ್ ಅಧಿಕಾರಿ ಎಂ.ಜಿ.ಹಿರೇಮಠ ಅವರು ಮಂಗಳವಾರದಂದು ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಮನೋಜ್ ಜೈನ್, ಗದಗ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಛ ನೀಡಿ ಶುಭ ಕೋರಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ ಚವ್ಹಾಣ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ರುದ್ರೇಶ ಎಸ್.ಎನ್. ಹಾಗೂ ಗದಗ-ಬೆಟಗೇರಿ ನಗರಸಭೆ […]

ಕುಸಿಯುವ ಭೀತಿಯಲ್ಲಿ ಮಂಗಳೂರಿನ ಕಂದಾಯಭವನ ಕಟ್ಟಡ

Wednesday, July 18th, 2018
Kandaya bhavana

ಮಂಗಳೂರು : ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಕಂದಾಯಭವನ ಕಟ್ಟಡ ಆವರಣ ಗೋಡೆ ಕುಸಿದು, ಎರಡು ಅಂತಸ್ತಿನ ಕಂದಾಯಭವನ ಕಟ್ಟಡವೂ ಸಹ ಕುಸಿದು ಬೀಳುವ ಅಪಾಯದಲ್ಲಿದೆ. ಕಂದಾಯ ಭವನ 2017 ರಲ್ಲಿ ಕೇವಲ ತಳ ಅಂತಸ್ತಿನಲ್ಲಿತ್ತು. ಮತ್ತೆ ಕಂದಾಯ ಇಲಾಖೆಯ ಕೆಲಸಗಾರರ ಅಶೋಸಿಯೇಶನ್ ಜಿಲ್ಲಾಧಿಕಾರಿಗಳಿಂದ ಎರಡು ಅಂತಸ್ತು ಸೇರ್ಪಡೆಗೊಳಿಸಲು ಅನುಮತಿ ಪಡೆದುಕೊಂಡಿದೆ. ಕಳೆದ ಕೆಲವು ದಿನಗಳಿಂದ ಸುರಿದ ಭಾರೀಮಳೆಗೆ ಕಂದಾಯಭವನ ಕಟ್ಟದ ಆವರಣ ಗೋಡೆ ಕುಸಿದು ಪಕ್ಕದ ಇನ್ನೊಂದು ಕಟ್ಟಡದ ಮೇಲೆ ಬಿದ್ದಿದೆ. ಇದಕ್ಕೆ ಮಳೆನೀರು ಹರಿದು […]

ಹಿಂದೂ ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ

Monday, July 16th, 2018
hindu

ಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಹಿಂದೂ ಸಂಘಟನೆಗಳ ವತಿಯಿಂದ ಶನಿವಾರ ಮಹಾನಗರದ ಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಗೌರಿ ಲಂಕೇಶ್ ಹತ್ಯಾ ಪ್ರಕರಣದಲ್ಲಿ ಅಮಾಯಕ ಯುವಕರನ್ನು ಬಂಧಿಸಿ ಚಿತ್ರಹಿಂಸೆ ನೀಡಿ ಹೇಳಿಕೆಯನ್ನು ಪಡೆಯುವ ವಿಶೇಷ ತನಿಖಾ ದಳದ ತನಿಖೆಯನ್ನು ಖಂಡಿಸಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ಮಾಡುವಂತೆ, ’ಹಜ್ ಹೌಸ್’ ಗೆ ಹಿಂದೂಗಳ ಮೇಲೆ ಅಪರಿಮಿತ ಅತ್ಯಾಚಾರ ಮಾಡಿರುವ ಟಿಪ್ಪು ಸುಲ್ತಾನನ ಹೆಸರನ್ನು ಕೊಟ್ಟು ಅವನ ಉದಾತ್ತೀಕರಣ ಮಾಡುವ ನಿರ್ಣಯವನ್ನು ಸರ್ಕಾರವು ರದ್ದು ಪಡಿಸಬೇಕು […]

ಉದ್ಘಾಟನೆಯಾದ್ರೂ ಬಸ್​, ಲಾರಿಗಳ ಸಂಚಾರಕ್ಕೆ ನಿಷೇಧ..!

Monday, July 16th, 2018
prohibition

ಮಂಗಳೂರು: ಇಂದು ಉದ್ಘಾಟನೆಯಾದ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಅಪೂರ್ಣವಾಗಿರುವುದರಿಂದ ಘನ ವಾಹನ ಮತ್ತು ಬಸ್ ಸಂಚಾರವನ್ನು ನಿರ್ಬಂಧಿಸಲಾಗಿದೆ. ಶಿರಾಡಿ ಐ.ಬಿ ಯಲ್ಲಿ ನಗರಾಭಿವೃದ್ಧಿ ಸಚಿವ ಯು ಟಿ ಖಾದರ್, ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಗುತ್ತಿಗೆದಾರರು 15 ದಿನಗಳಲ್ಲಿ ಡೇಂಜರ್ ಝೋನ್ ಕಾಮಗಾರಿ ಮುಗಿಸುವಂತೆ ಸಭೆಯಲ್ಲಿ ಸೂಚಿಸಲಾಗಿದೆ. ಈ ಅವಧಿಯಲ್ಲಿ ಕೇವಲ ದ್ವಿಚಕ್ರ, ಮಿನಿಬಸ್, ಟೆಂಪೋ ಟ್ರಾವೆಲರ್ಸ್ಗಳಿಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಬೇಡಿಕೆ ಈಡೇರಿಕೆಗೆ ಆಗ್ರಹ… ಮತ್ತೆ ಉಪವಾಸ ಕುಳಿತ ಸುದತ್ತ ಜೈನ್

Friday, March 30th, 2018
suddath-jain

ಮಂಗಳೂರು: ಕಾರ್ಮಿಕರ ಆಸ್ಪತ್ರೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು 97 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದ ಅಖಿಲ ಭಾರತ ಕಾರ್ಮಿಕ ಸಂಘದ ಸ್ಥಾಪಕ ಅಧ್ಯಕ್ಷ ಸುದತ್ ಜೈನ್ ಅವರು ಈಗ ಮತ್ತೆ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಬದುಕು, ಬದುಕಲು ಬಿಡು’ ಘೋಷಣೆಯಡಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಹಾವೀರ ಜಯಂತಿಯಂದು ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದರು. ಆರೋಗ್ಯ ಭದ್ರತೆ, ವೇತನ ಭದ್ರತೆ, ಉದ್ಯೋಗ ಭದ್ರತೆ, ವಾಸ್ತವ್ಯ ಭದ್ರತೆಯನ್ನು ಸಮರ್ಪಕವಾಗಿ […]

ಮೊದಲಿನ ಸ್ನೇಹ ಸಂಬಂಧದತ್ತ ಜನರ ಹೆಜ್ಜೆ

Friday, March 9th, 2018
byndoor

ಬೈಂದೂರು: ನಾವುಂದದ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿ ಹೆದ್ದಾರಿ ಅಂಡರ್‌ಪಾಸ್ ಬೇಕು, ಅದು ಬೇಡ ‘ಯು’ ತಿರುವು ಸಾಕು ಎಂದು ಸರಿಸುಮಾರು ಎರಡು ವರ್ಷ ನಡೆದ ಹೊಯ್ದಾಟ ಈಗ ಅಂತಿಮವಾಗಿ ಸಮಸ್ಥಿತಿಗೆ ಬಂದಿದೆ. ಕೆಲವು ದಿನಗಳ ಹಿಂದೆ ಮೂಲ ಯೋಜನೆಯಂತೆ ಅಂಡರ್‌ಪಾಸ್ ಕಾಮಗಾರಿ ಆರಂ ಭವಾಗಿ, ದಿನದಿಂದ ದಿನಕ್ಕೆ ವೇಗ ಪಡೆಯುವುದರೊಂದಿಗೆ ಎರಡು ತೀವ್ರಾಭಿಪ್ರಾಯಗಳ ನಡುವೆ ಕದನ ವಿರಾಮ ಘೋಷಣೆಯಾಗಿದೆ ಎಂದು ನಿಟ್ಟುಸಿರು ಬಿಡುತ್ತಿದ್ದಾರೆ ಇಲ್ಲಿನ ನಾಗರಿಕರು. ಮೂಲ ಯೋಜನೆಯಂತೆ ಇಲ್ಲಿ ಅಂಡರ್‌ಪಾಸ್ ರಚನೆಯಾಗಬೇಕು. ಆದರೆ ಇದಕ್ಕೆ […]

ವ್ಯಾಲೆಂಟೈನ್ಸ್‌ ಡೇಯನ್ನು ‘ಮಾತೃ-ಪಿತೃ ಪೂಜನೀಯ ದಿನ’ವಾಗಿ ಆಚರಿಸಲು ಕರೆ

Wednesday, February 14th, 2018
valentines-day

ಮಂಗಳೂರು: ಫೆಬ್ರವರಿ 14 ವ್ಯಾಲೆಂಟೈನ್ಸ್‌ ಡೇ; ಪ್ರೇಮಿಗಳ ಹಬ್ಬ ವ್ಯಾಲೆಂಟೈನ್ಸ್‌ ಡೇಗಾಗಿ ಯುವ ಮನಸ್ಸುಗಳು ಮಿಡಿಯಲಾರಂಭಿಸಿವೆ. ಹಿಂದೂ ಪರ ಸಂಘಟನೆಗಳ ವಿರೋಧದ ನಡುವೆಯೂ ಪ್ರೇಮ ನಿವೇದನೆಗಾಗಿ ಕಾತರದಿಂದ ಕಾಯುತ್ತಿವೆ. ಆದರೆ, ಹಿಂದೂ ಜನ ಜಾಗೃತಿ ಸಮಿತಿಯು ವ್ಯಾಲೆಂಟೈನ್ಸ್‌ ಡೇಯನ್ನು ‘ಮಾತೃ-ಪಿತೃ ಪೂಜನೀಯ ದಿನ’ವಾಗಿ ಆಚರಿಸಲು ಕರೆ ನೀಡಿದೆ. ವ್ಯಾಲೆಂಟೈನ್ಸ್‌ ಡೇ ಹೆಸರಿನಲ್ಲಿ ನಡೆಯುವ ಅನೈತಿಕ ಕೃತ್ಯಗಳನ್ನು ತಡೆಯಬೇಕು ಹಾಗೂ ಶಾಲಾ ಕಾಲೇಜುಗಳಲ್ಲಿ ಮಾತೃ-ಪಿತೃ ಪೂಜನೀಯ ದಿನವಾಗಿ ಆಚರಿಸಲು ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿಕೊಂಡಿದೆ. ಈ ಕುರಿತು ಮಂಗಳೂರು […]

ಬಾರ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ: ಸ್ಪಂದಿಸಿದ ಜಿಲ್ಲಾಧಿಕಾರಿ

Friday, December 22nd, 2017
commissioner

ಮಂಗಳೂರು: ಇಲ್ಲಿನ ಕುಂಟಿಕಾನ ಶಾಲೆಯ ಬಳಿಯೇ ಬಾರ್ ಆ್ಯಂಡ್ ರೆಸ್ಟೊರೆಂಟ್ ತೆರೆದಿರುವುದರ ವಿರುದ್ಧ ವಿದ್ಯಾರ್ಥಿಗಳು ಹಾಗೂ ಶಾಲಾ ಆಡಳಿತ ಮಂಡಳಿ ನಡೆಸಿದ ಹೋರಾಟಕ್ಕೆ ಜಿಲ್ಲಾಧಿಕಾರಿ ಶಶಿಕಾಂತ್ ಸ್ಪಂದಿಸಿದ್ದಾರೆ. ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಯಾವುದೇ ತಂಬಾಕು ಅಥವಾ ಅಮಲು ಪದಾರ್ಥಗಳ ಮಾರಾಟ, ಜಾಹೀರಾತು ಹಾಕುವುದನ್ನು ನಿಷೇಧಿಸಲಾಗಿದೆ. ಆದರೆ ಇಷ್ಟಾದರೂ ಶಾಲೆಗೆ ಕೇವಲ 80 ಮೀಟರ್ ವ್ಯಾಪ್ತಿಯಲ್ಲಿ ಬಾರ್ ಆ್ಯಂಡ್ ರೆಸ್ಟೊರೆಂಟ್‌‌ಗೆ ಅನುಮತಿ ನೀಡಲಾಗಿತ್ತು. ಇದನ್ನು ವಿರೋಧಿಸಿ ಸೈಂಟ್ ಆ್ಯನ್ಸ್ ಶಾಲೆಯ ಆಡಳಿತ ಮಂಡಳಿ […]

ಪ್ರತಾಪ್‌ ಸಿಂಹ ವಿರುದ್ಧದ ಸೆಕ್ಷನ್‌ ಹಿಂಪಡೆಯಲು ಅರ್ಜಿ: ಪೊಲೀಸರಿಗೆ ಕೋರ್ಟ್‌‌ನಿಂದ ತಪರಾಕಿ

Friday, December 15th, 2017
pratap-simha

ಮೈಸೂರು: ಹುಣಸೂರು ಹನುಮ ಜಯಂತಿ ಮೆರವಣಿಗೆಗೆ ಹೊರಟಿದ್ದ ವೇಳೆ ಸಂಸದ ಪ್ರತಾಪ್ ಸಿಂಹರನ್ನು ಬಂಧಿಸಿ, 188 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದ್ರೆ ಬಳಿಕ ಸಂಸದರ ವಿರುದ್ಧದ ಸೆಕ್ಷನ್‌ 188 ವಾಪಸ್ ಪಡೆಯಲು ಅರ್ಜಿ ಸಲ್ಲಿಸಿದ್ದಕ್ಕೆ ಪೊಲೀಸ್ ತನಿಖಾಧಿಕಾರಿಗೆ ಕೋರ್ಟ್ ತಪರಾಕಿ ಹಾಕಿದೆ. ಡಿ. 3ರಂದು ಹುಣಸೂರಿನ ಬೆಳಿಕೆರೆ ಸಮೀಪ ಸಂಸದ ಪ್ರತಾಪ್‌ ಸಿಂಹರನ್ನು ಪೊಲೀಸರು ಬಂಧಿಸಿ ಐಪಿಸಿ ಸೆಕ್ಷನ್ 188( ಸರ್ಕಾರಿ ಅಧಿಕಾರಿಯ ಆದೇಶದ ಉಲ್ಲಂಘನೆ) ಅಡಿಯಲ್ಲಿ ಪ್ರಕಣರ ದಾಖಲು ಮಾಡಿದ್ದರು. ಬಳಿಕ ಸಂಸದರನ್ನು ಬಿಡುಗಡೆ […]

ಸರೋಜಮ್ಮ ಅವರಿಗೆ ಹಕ್ಕುಪತ್ರ ಸಿಕ್ಕಿದರೂ ಸೂರಿಲ್ಲ

Saturday, December 9th, 2017
sarojamma

ಮಂಗಳೂರು  : ಹಕ್ಕು ಪತ್ರ ಸಿಕ್ಕಿದರೂ ಮನೆ ದೊರಕದೇ ಸಂಕಷ್ಟದಲ್ಲಿದ್ದ 72 ವರ್ಷದ ಸರೋಜಮ್ಮ ಅವರಿಗೆ ಕೊನೆಗೂ ಜಿಲ್ಲಾಧಿಕಾರಿ ಕಚೇರಿಯಲ್ಲೇ ನ್ಯಾಯ ಒದಗಿಸುವ ಭರವಸೆ ಸಿಕ್ಕಿದೆ. ಮೂಲತಃ ಉಡುಪಿಯವರಾದ ಸರೋಜಮ್ಮ ಊರು-ಕೇರಿ ಅಲೆದು ಜೀವನ ಸಾಗಿಸುತ್ತಿದ್ದಾರೆ. ಇವರ ಪತಿ ದೂರವಾಗಿದ್ದು, ಪುತ್ರಿಯರು ಯೋಗಕ್ಷೇಮ ನೋಡುತ್ತಿಲ್ಲ. ಪುತ್ರ ಮಾತ್ರ ಆಸರೆಯಾಗಿದ್ದಾರೆ. ತಮ್ಮ ಕಷ್ಟದ ಹಿನ್ನೆಲೆಯಲ್ಲಿ ನ್ಯಾಯ ನೀಡುವಂತೆ ಕೋರಿ ಸರೋಜಮ್ಮ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದರು. ಶುಕ್ರವಾರ ಬೆಳಗ್ಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಗೆ ಪುತ್ರ ಸುಬ್ರಹ್ಮಣ್ಯನ ಜೊತೆಗೆ ಸರೋಜಮ್ಮ ಆಗಮಿಸಿದ್ದರು. […]