ಟಿಪ್ಪು ಜಯಂತಿ ರದ್ದುಪಡಿಸಲು ಬಿಜೆಪಿ ಯುವ ಮೋರ್ಚಾದ ವತಿಯಿಂದ ಜಿಲ್ಲಾಧಿಕಾರಿಯವರಿಗೆ ಮನವಿ
Wednesday, October 25th, 2017ಮಂಗಳೂರು: ಬಿಜೆಪಿ ಯುವ ಮೋರ್ಚಾದ ವತಿಯಿಂದ ಮುಂದಿನ ತಿಂಗಳು ನಡೆಯುವ ಟಿಪ್ಪು ಜಯಂತಿಯನ್ನು ತತ್‌ಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ಟಿಪ್ಪು ಜಯಂತಿ ಆಚರಿಸುತ್ತಿರುವ ರಾಜ್ಯ ಸರಕಾರದ ಕ್ರಮ ಸರಿಯಲ್ಲ. ಆಚರಣೆಯನ್ನು ರದ್ದುಪಡಿಸದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಯಿತು. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹರೀಶ್ ಪೂಂಜ, ಹರೀಶ್ ಮೂಡುಶೆಡ್ಡೆ, ದಯಾನಂದ ಕೊಣಾಜೆ, ಸುದರ್ಶನ್ ಪೂಜಾರಿ, ಮಹೇಶ್, ಸಂದೀಪ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು