Blog Archive

ಇದು ಕರಾವಳಿ “ಪೊಲಿ’ಟಿಕ್ಸ್”!

Tuesday, November 13th, 2012
Karavali Politics

ಮಂಗಳೂರು :2013ರಲ್ಲಿ ಕರ್ನಾಟಕ ರಾಜ್ಯ ವಿಧಾನ ಸಭಾ ಮತ್ತು 2014ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಪ್ರಮುಖ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗು ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಈಗಾಗಲೆ ಮಂಗಳೂರಿನಲ್ಲಿ ತನ್ನ ಚುನಾವಣಾ ಕಸರತ್ತು ಆರಂಭಿಸಿದೆ. ಅಕ್ಟೋಬರ್ 18ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳೂರಿಗೆ ಆಗಮಿಸಿ ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪಕ್ಷದ ಕಾರ್ಯಕರ್ತರಲ್ಲಿ ಹುರುಪು ತುಂಬುವಂತೆ ಮಾಡಿದ್ದಾರೆ. ರಾಜ್ಯ ಬಿಜೆಪಿ ಸರಕಾರವನ್ನು ಕಿತ್ತೊಗೆಯುವಂತೆ ಕರೆ ನೀಡಿದ್ದಾರೆ. ಸೋನಿಯಾರ ಮಂಗಳೂರು ಭೇಟಿಯ ಸಂಪೂರ್ಣ ಹೊಣೆ […]

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಮೈತ್ರಿ ಇಲ್ಲ: ದೇವೇಗೌಡ

Friday, December 10th, 2010
ದೇವೇಗೌಡ

ಬೆಂಗಳೂರು  : ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ  ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ತಿಳಿಸಿದ್ದಾರೆ. ಕಾಂಗ್ರೆಸ್ ಜತೆಗೆ ಮೈತ್ರಿಯ ಪ್ರಶ್ನೆಯೇ ಇಲ್ಲ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದ್ದು ಎಲ್ಲಾ ಜಿಲ್ಲೆಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ ಎಂದು ದೇವೇಗೌಡ ತಿಳಿಸಿದ್ದಾರೆ. ರಾಜಕೀಯ ಪಕ್ಷವಾಗಿ ನೇರವಾಗಿ ಜನರ ಮುಂದೆ ಹೋಗುತ್ತೇವೆ. ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಜಾತ್ಯತೀತ ಮತ ವಿಭಜನೆಯಾಗಿ ಬಿಜೆಪಿಗೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವಿದೆ ಎಂದು ಪತ್ರಕರ್ತರಿಗೆ ತಿಳಿಸಿದರು. ಅಭಿವೃದ್ಧಿಯೇ ಮೂಲಮಂತ್ರ ಎಂದ ಬಿಜೆಪಿ […]

ಜೆಡಿಎಸ್ ಶಾಸಕ ಎಂ.ಸಿ.ಅಶ್ವತ್ಥ ರಾಜೀನಾಮೆ

Friday, October 15th, 2010
ಎಂ.ಸಿ.ಅಶ್ವತ್ಥ

ಬೆಂಗಳೂರು : ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಅಶ್ವತ್ಥ ಅವರು ಸ್ಪೀಕರ್ ಕೆ.ಜಿ.ಬೋಪಯ್ಯ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಚನ್ನಪಟ್ಟಣ ಶಾಸಕ ಎಂ.ಸಿ.ಅಶ್ವತ್ಥ ಗುರುವಾರ ಈ ನಿರ್ಧಾರ ಕೈಗೊಂಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ತಮಿಳುನಾಡು ಪ್ರವಾಸದಲ್ಲಿದ್ದೆ. ಹಾಗಾಗಿ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಪಕ್ಷದ ನಾಯಕರಿಂದ ತನಗೆ ಯಾವುದೇ ತೊಂದರೆ ಇಲ್ಲ. ಇದೀಗ ನನ್ನ ವೈಯಕ್ತಿಕ ಕಾರಣದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ. ಅ.11ರಂದು ನಡೆದ ವಿಶ್ವಾಸಮತ ಯಾಚನೆಗಾಗಲಿ, ಅ.14ರಂದು ನಡೆದು […]

ರಾಜ್ಯಪಾಲರು, ಕಾಂಗ್ರೆಸ್, ಜೆಡಿಎಸ್ ನಾಯಕರ ವರ್ತನೆಗೆ ದ.ಕ ಜಿಲ್ಲಾ ಬಿಜೆಪಿ ಖಂಡನೆ.

Wednesday, October 13th, 2010
ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ

ಮಂಗಳೂರು:  ಕಳೆದ ಒಂದು ವಾರದ ರಾಜ್ಯದ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದಾಗ ಈ ರಾಜ್ಯದಲ್ಲಿ ಜನಾದೇಶದೊಂದಿಗೆ ಜನಪರ ಆಡಳಿತ ನೀಡುವ  ಒಂದು ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರತಿಪಕ್ಷಗಳು ಯಾವ ರೀತಿ ಕಾರ್ಯೋನ್ಮುಖವಾಗಿದೆ ಎನ್ನುವುದರ ಜ್ವಲಂತ ಸಾಕ್ಷಿಯಾಗಿದೆ. ರಾಜ ಭವನವನ್ನು ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿರಿಸಿಕೊಂಡು ರಾಜ್ಯಪಾಲರನ್ನು ಪಕ್ಷದ ಏಜಂಟರಂತೆ ಉಪಯೋಗಿಸಿಕೊಂಡ ಕಾಂಗ್ರೆಸ್-ಜೆಡಿಎಸ್ನ ಕುತಂತ್ರ ಬಯಲಾಗಿದೆ ಎಂದು ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿಯವರು ಇಂದು ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸರಕಾರದ ಭಾಗವಾಗಿ ಕಾರ್ಯನಿರ್ವಹಿಸಿದ ಸಚಿವರನ್ನು, ಶಾಸಕರನ್ನು ರೆಸಾರ್ಟ್ ಗಳಲ್ಲಿ […]

ರಾಜ್ಯಾದ್ಯಂತ ಕಬ್ಬಿಣ ಅದಿರು ರಪ್ತು ನಿಷೇಧ : ಯಡಿಯೂರಪ್ಪ

Saturday, August 21st, 2010
ರಾಜ್ಯಾದ್ಯಂತ ಕಬ್ಬಿಣ ಅದಿರು ರಪ್ತು ನಿಷೇಧ : ಯಡಿಯೂರಪ್ಪ

ಬೆಂಗಳೂರು : ಅಕ್ರಮ ಗಣಿಗಾರಿಕೆ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿರುವ ಬೆನ್ನಲ್ಲೇ,  ರಾಜ್ಯಾದ್ಯಂತ ಕಬ್ಬಿಣ ಅದಿರು ರಫ್ತಿಗೆ ನಿಷೇಧ ಹೇರಲು ರಾಜ್ಯ ಸರಕಾರ ಮುಂದಾಗುವ ಮೂಲಕ ರೆಡ್ಡಿ ಸಹೋದರರಿಗೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅದಿರು ಸಾಗಾಟ ರಫ್ತು ಪರ್ಮಿಟ್ ರದ್ದು ಮಾಡಿರುವುದಾಗಿ ತಿಳಿಸಿದ್ದು, ಅಕ್ರಮ ಗಣಿಗಾರಿಕೆ ಕುರಿತಂತೆ ಲೋಕಾಯುಕ್ತ ವರದಿ ಸಲ್ಲಿಕೆಯಾಗುವವರೆಗೂ ಈ ತಡೆಯಾಜ್ಞೆ ಮುಂದುವರಿಯಲಿದೆ. ಆ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಬ್ಬಿಣ ಅದಿರು ರಫ್ತಿಗೆ ಸಂಪೂರ್ಣ ನಿಷೇಧ ಹೇರಿ ರಾಜ್ಯ […]