ನನ್ನ ಬಳಿಯೂ ಕೆಲವರ ಡೈರಿಗಳಿವೆ..ಯಾರು ಯಾರಿಗೆ ಏನೇನು ಬರೆದಿದ್ದಾರೆ ಅನ್ನೋದು ಗೊತ್ತಿದೆ: ಡಿ.ಕೆ.ಶಿವಕುಮಾರ್
Wednesday, June 20th, 2018ಬೆಂಗಳೂರು: ನನ್ನ ಬಳಿಯೂ ಕೆಲವರ ಡೈರಿಗಳಿವೆ. ಯಾರು ಯಾರಿಗೆ ಏನೇನು ಬರೆದಿದ್ದಾರೆ ಅನ್ನೋದು ಗೊತ್ತಿದೆ. ಕೊನೆಯಲ್ಲಿ ಏನೂ ಆಗಲ್ಲವೆಂದಾಗ ಅದನ್ನ ಬಹಿರಂಗ ಮಾಡುತ್ತೇನೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಐಟಿ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸುತ್ತಾ, ನನ್ನನ್ನ ಹೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಡಿಕೆಶಿ ಯಾವುದಕ್ಕೂ ಹೆದರುವುದಿಲ್ಲ. ನಾನು ಕಾನೂನಿಗೆ ಬೆಲೆ ಕೊಡುವವನು. ಪ್ರಕರಣ ಈಗ ಕೋರ್ಟ್‌ನಲ್ಲಿ ಇರೋದ್ರಿಂದ ಈಗ ಏನು ಹೇಳೋದಿಲ್ಲ. ಇಲ್ಲವಾಗಿದ್ದರೆ ನಾನೇನು ಅನ್ನೋದನ್ನ ತೋರಿಸುತ್ತಿದ್ದೆ. […]