Blog Archive

ಕುಮಾರಸ್ವಾಮಿಯವರಿಂದ ರಾಜ್ಯದ ಜನತೆಗೆ ಅವಮಾನ: ಬಿ.ಎಸ್. ಯಡಿಯೂರಪ್ಪ

Monday, May 28th, 2018
yedyurappa

ಬೆಂಗಳೂರು: ನಾನು ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ. ಜನತೆಯ ಮುಲಾಜಿನಲ್ಲಿಇಲ್ಲ ಎಂದು ಹೇಳುವ ಮೂಲಕ ನಾಡಿ ೬.೫ ಕೋಟಿ ಜನರಿಗೆ ಅವಮಾನ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್ವೈ, ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮೇಗೌಡ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದರು. ಬಳಿಕ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಎಸ್ವೈ, ಕುಮಾರಸ್ವಾಮಿ ಅವರು ತನ್ನ ಹೇಳಿಕಯ ಮೂಲಕ ಪ್ರಜಾತಂತ್ರ ವ್ಯವಸ್ಥೆಗೆ ಅಪಮಾನ ಮಾಡಿದ್ದಾರೆ. ಭಾರತದ ಇತಿಹಾಸಲ್ಲಿ ಯಾವ ಮುಖ್ಯಮಂತ್ರಿ ಕೂಡ […]

ಆರ್‌ ಆರ್‌ ನಗರ ಅಖಾಡದಲ್ಲಿ ಮಾವ…ಹಕ್ಕು ಚಲಾಯಿಸಿದ ನಟಿ ಅಮೂಲ್ಯ

Monday, May 28th, 2018
amulya

ಬೆಂಗಳೂರು: ನಮ್ಮ ಹಕ್ಕನ್ನು ಸರಿಯಾಗಿ ಉಪಯೋಗಿಸಬೇಕು ಅಂತ ನಟಿ ಅಮೂಲ್ಯ ಬಿ.ಇ.ಟಿ.ಕಾನ್ವೆಂಟ್ ಸ್ಕೂಲ್ ನಲ್ಲಿ ಮತದಾನ ಮಾಡಿದ ಬಳಿಕ ಹೇಳಿದರು. ಆರ್.ಆರ್. ನಗರದಲ್ಲಿ ಮೊದಲ ಬಾರಿ ಮತದಾನ ಮಾಡಿದ್ದೇನೆ. ಈ ಹಿಂದೆ ಮಲ್ಲೇಶ್ವರಂರಲ್ಲಿ ಮತದಾನ ಮಾಡಿದ್ದೆ. ಚುನಾವಣೆಯಲ್ಲಿ ನಮ್ಮ ಮಾವ ರಾಮಚಂದ್ರಪ್ಪ ಅವರು ಗೆಲ್ಲುವ ವಿಶ್ವಾಸ ಇದೆ. ಮತದಾನ ಪ್ರತಿಯೊಬ್ಬರ ಹಕ್ಕು. ಎಲ್ಲರೂ ತಮ್ಮ ಹಕ್ಕು ಚಲಾಯಿಸಬೇಕು ಅಮೂಲ್ಯ ಕರೆ ನೀಡಿದರು. ರಜೆ ನೀಡಿದ್ರು ಮತದಾನ ಮಾಡಲು ಮತದಾರರು ಕಳೆದ ಬಾರಿ ಆಸಕ್ತಿ ತೋರಿರಲಿಲ್ಲ. ಬೇರೆಯವರಿಗೆ ದುರುಪಯೋಗ […]

ನಟ ರಜನಿಕಾಂತ್‌ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ: ವಾಟಾಳ್ ನಾಗರಾಜ್

Saturday, May 26th, 2018
vatal-nagaraj

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಧಿಕಾರ ರಚನೆಯಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತದೆ. ಇದರ ಪರವಾಗಿ ದನಿ ಎತ್ತಿದ ನಟ ರಜನೀಕಾಂತ್ ಅವರ ಚಲನಚಿತ್ರಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಪ್ರದರ್ಶನಕ್ಕೆ ಅವಕಾಶ ಕೊಡಬಾರದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯದಲ್ಲೇ ಅವರ ಚಿತ್ರವೊಂದು ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದ್ದು, ಅದಕ್ಕೆ ಅವಕಾಶ ನೀಡುವುದಿಲ್ಲ ಎಂದರು. ಅತ್ಯಂತ ಹಿಂದುಳಿದಿರುವ ಹೈದರಾಬಾದ್-ಕರ್ನಾಟಕ ಭಾಗಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ರಾಜಕೀಯ ಪ್ರಾತಿನಿಧ್ಯ […]

ನಾನೇನು ಸನ್ಯಾಸಿಯಲ್ಲ, ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಪುಟ್ಟರಾಜು

Saturday, May 26th, 2018
puttaraju

ಬೆಂಗಳೂರು: ನಾನೇನು ಸನ್ಯಾಸಿಯಲ್ಲ. ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ ಎಂದು ಜೆಡಿಎಸ್ ಶಾಸಕ ಸಿ.ಎಸ್‌‌.ಪುಟ್ಟರಾಜು ತಮ್ಮ ಸಚಿವ ಸ್ಥಾನದ ಇಂಗಿತ ವ್ಯಕ್ತಪಡಿಸಿದ್ದಾರೆ. ಇಂದು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರೋಕ್ಷವಾಗಿ ತಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿದರು. ಇದೇ ವೇಳೆ ಬಿಜೆಪಿ ನಾಯಕರಿಗೆ ಟಾಂಗ್‌‌ ನೀಡಿದ ಅವರು, ಬಿಜೆಪಿಯವರಿಗೆ ಹೆದರಿ ನಾವು ಸಾಲಮನ್ನಾ ಬಗ್ಗೆ ತೀರ್ಮಾನ ಮಾಡುತ್ತಿಲ್ಲ. […]

ಮೇ 28ರ ಕರ್ನಾಟಕ ಬಂದ್ ಯಶಸ್ವಿಯಾಗಬೇಕು: ಶಾಸಕರಿಗೆ ಬಿಎಸ್ವೈ ಸೂಚನೆ

Friday, May 25th, 2018
B-S-Yedeyurappa

ಬೆಂಗಳೂರು: ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡದೇ ಇರುವ ಹಿನ್ನೆಲೆಯಲ್ಲಿ ಕರೆ ನೀಡಿರುವ ಸ್ವಯಂಘೋಷಿತ ಬಂದ್ ನ್ನು ಯಶಸ್ವಿಗೊಳಿಸಬೇಕು ಎಂದು ಪಕ್ಷದ ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ತನ್ನ ಪಕ್ಷದ ಎಲ್ಲಾ ಶಾಸಕರಿಗೆ ಸೂಚನೆ ರವಾನಿಸಿರುವ ಬಿಎಸ್ವೈ, ರಾಜ್ಯದ ಪ್ರತೀ ಜಿಲ್ಲೆ, ಪ್ರತೀ ತಾಲೂಕುಗಳಲ್ಲಿ ಬಂದ್ ಆಗಬೇಕು. ನಮಗೆ ಅಧಿಕಾರ ಇಲ್ಲದೇ ಹೋದರೂ ಪರವಾಗಿಲ್ಲ. ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ರೈತರಿಗೆ ಸೂಕ್ತ ನ್ಯಾಯ ದೊರಕಬೇಕು. […]

ಬಿಜೆಪಿ ನಾಯಕರು ಟೀಕಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ: ಕುಮಾರಸ್ವಾಮಿ

Thursday, May 24th, 2018
janatha-dal

ಬೆಂಗಳೂರು: ಬುಧವಾರ ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಎಚ್.ಡಿ. ಕುಮಾರಸ್ವಾಮಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಬಿಜೆಪಿ ನಾಯಕರು ನಮ್ಮನ್ನು ಟೀಕಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಕಿಡಿ ಕಾರಿದರು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಪಟ್ಟನಾಯಕನಹಳ್ಳಿ ನಂಜಾವಧೂತ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ ನಾಯಕರು ನಮ್ಮ ಮೇಲೆ ಟೀಕೆ ಮಾಡುವುದನ್ನ ಬಿಡಬೇಕು ಅದರಲ್ಲೇ ಕಾಲ ಕಳೆಯಬಾರದು ಎಂದು ಟಾಂಗ್ ನೀಡಿದರು. ಇನ್ನು […]

ಬೆಂಗಳೂರಲ್ಲಿ ಜೋರು ಮಳೆ, ಇನ್ನೂ ನಾಲ್ಕು ದಿನ ಛತ್ರಿ ಮರೆಯುವಂತಿಲ್ಲ..!

Wednesday, May 23rd, 2018
bangaluru

ಬೆಂಗಳೂರು: ರಾಜಕೀಯ ಕಾವಿನಿಂದ ಕುದಿಯುತ್ತಿರುವ ರಾಜ್ಯ ರಾಜಧಾನಿಗೆ ಬುಧವಾರ ಮಧ್ಯಾಹ್ನ ಬಂದ ಮಳೆ ತಂಪೆರಿದಿದೆ. ಮಧ್ಯಾಹ್ನ ಬಂದ ಜೋರು ಮಳೆ ವಾತಾವರಣಕ್ಕೆ ತಂಪು ಪೂಸಿದರೆ, ರಸ್ತೆಗಳಿಗೆ ಟ್ರಾಫಿಕ್ ಕಿರಿ-ಕಿರಿ ಹೆಚ್ಚಿಸಿದೆ. ಹಠಾತ್‌ನೆ ಬಂದ ಮಳೆಗೆ ರಸ್ತೆಗಳು ತುಂಬಿ ಹರಿಯುತ್ತಿವೆ. ಜಯನಗರ, ವಿಧಾನಸೌಧ, ಮಲ್ಲೇಶ್ವರ, ಇನ್ನೂ ಹಲವು ಕಡೆ ಜೋರು ಮಳೆಯಾಗಿದೆ. ಕುಮಾರಸ್ವಾಮಿ ಅವರ ಪಟ್ಟಾಭಿಷೇಕಕ್ಕೆ ಅಣಿಯಾಗಿದ್ದ ವಿಧಾನಸೌಧದ ಬಳಿಯೂ ಜೋರು ಮಳೆ ಆಗಿದೆ. ಮಳೆ ಮೊರೆತಕ್ಕೆ ಜನ ಚದುರಿ ಹೋಗಿದ್ದಾರೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ನಗರದಲ್ಲಿ ಇನ್ನೂ […]

ಸ್ಪೀಕರ್ ಸ್ಥಾನಕ್ಕಾಗಿ ಜೆಡಿಎಸ್ ಬಿಗಿ ಪಟ್ಟು?

Tuesday, May 22nd, 2018
devegowda

ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಮುಂದಿನ ದಿನಗಳಲ್ಲಿ ಸದನದಲ್ಲಿ ಏನಾದರು ಗೊಂದಲ ಇಲ್ಲವೆ, ಮೈತ್ರಿ ಪಕ್ಷದಲ್ಲಿ ಅಪಸ್ವರ ಕಂಡು ಬಂದರೆ ನೆರವಿಗೆ ಇರಲಿ ಎಂಬ ಕಾರಣಕ್ಕೆ ಜೆಡಿಎಸ್ ಪಕ್ಷ ಸ್ಪೀಕರ್ ಸ್ಥಾನ ತಮಗಿರಲಿ ಎಂಬ ಲೆಕ್ಕಾಚಾರದಲ್ಲಿ ಬಿಗಿ ಪಟ್ಟು ಹಿಡಿದಿದೆ ಎಂದು ತಿಳಿದುಬಂದಿದೆ. ಸಂಪುಟ ಸ್ಥಾನ ಹಂಚಿಕೆ ಗೊಂದಲದಲ್ಲಿರುವ ಕಾಂಗ್ರೆಸ್‌ಗೆ ಸ್ಪೀಕರ್ ಸ್ಥಾನ ಬಿಟ್ಟುಕೊಡಬೇಕೇ ಅಥವಾ ಬೇಡವೇ ಎನ್ನುವ ಹೊಸ ಗೊಂದಲ ಈಗ ಆರಂಭವಾಗಿದೆ. ಎರಡು ದಿನದೊಳಗೆ ನೂತನ ಸ್ಪೀಕರ್ ಪ್ರಮಾಣವಚನ ನಡೆಯಬೇಕಿರುವುದರಿಂದ ಆದಷ್ಟು […]

ನಾಪತ್ತೆಯಾಗಿದ್ದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ವಿಧಾನಸೌಧಕ್ಕೆ ಆಗಮನ..!

Saturday, May 19th, 2018
anand-singh-cngrs

ಬೆಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಶಾಸಕ ಆನಂದ್ ಸಿಂಗ್ ನಾಪತ್ತೆ ಪ್ರಕರಣಕ್ಕೆ ತೆರೆ ಬಿದ್ದಿದೆ. ವಿಶ್ವಾಸಮತ ಯಾಚನೆಗೆ ಸಮಯ ನಿಗದಿಯಾಗುತ್ತಿದ್ದಂತೆ ನಾಪತ್ತೆಯಾಗಿದ್ದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ವಿಧಾನಸೌಧ ಆವರಣಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ ಆನಂದ್ ಸಿಂಗ್ ಅವರನ್ನು ಕೈಹಿಡಿದುಕೊಂಡು ಡಿಕೆಶಿ ವಿಧಾನಸಭೆಗೆ ಕರೆದೊಯ್ದರು. ವಿಧಾನಸೌಧದೊಳಕ್ಕೂ ಡಿಕೆಶಿ ಕೈಹಿಡಿದುಕೊಡೇ ಸಾಗಿದ ಶಾಸಕ ನಾಗೇಂದ್ರ ಅವರು ಹಿರಿಯ ಕಾಂಗ್ರೆಸ್ ಮುಖಂಡರಿಗೆ ವಿಶ್ ಮಾಡಿದರು. ಬಳಿಕ ಜೆಡಿಎಸ್ ಮುಖಂಡ ಕುಮಾರಸ್ವಾಮಿ ಅವರಿಗೂ ವಿಶ್ ಮಾಡಿ ನಾನಿದ್ದೇನೆ ಎಂದು […]

ಸಂಸದ ಸ್ಥಾನಕ್ಕೆ ಯಡಿಯೂರಪ್ಪ, ಶ್ರೀರಾಮುಲು ರಾಜೀನಾಮೆ

Saturday, May 19th, 2018
yeddi-shrii

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಕಾರಣ ತಮ್ಮ ಲೋಕಸಭಾ ಸದಸ್ಯತ್ವಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಹಾಗೆಯೇ ಶ್ರೀರಾಮುಲು ಅವರು ಸಹ ರಾಜೀನಾಮೆ ನೀಡಿದ್ದಾರೆ. 2014 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕ್ರಮವಾಗಿ ಶಿವಮೊಗ್ಗ ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿದ್ದ ಬಿ ಎಸ್ ಯಡಿಯೂರಪ್ಪ ಮತ್ತು ಶ್ರೀರಾಮುಲು ಅವರ ರಾಜೀನಾಮೆಯನ್ನು ಸ್ಪೀಕರ್ ಅನುಮೋದಿಸಿದ್ದಾರೆ. ಮೇ 12 ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ […]